ಕಬ್ಬಿನ ಇಳುವರಿ ಹೆಚ್ಚಳಕ್ಕೆ ಪಂಚಸೂತ್ರ ಸಹಕಾರಿ

ತಂತ್ರಜ್ಞಾನ ಬಳಕೆಯಿಂದ ಕಡಿಮೆ ಖರ್ಚು-ಹೆಚ್ಚು ಆದಾಯ 100 ಟನ್‌ ಕಬ್ಬು ಬೆಳೆಯುವ ರೈತರಿಗೆ ಪ್ರೋತ್ಸಾಹ

Team Udayavani, Jul 31, 2022, 5:38 PM IST

20

ಚಿಕ್ಕೋಡಿ: ಎಕರೆಗೆ 100 ಟನ್‌ ಪ್ರಗತಿ ಸಾಧಿಸಲು ಕೃಷಿಕರು ಮಣ್ಣಿನ ಫಲವತ್ತತೆ, ಕಬ್ಬಿನ ಲಾವಣಿ ಮಾಡುವ ಬಗೆ, ರಾಸಾಯನಿಕ ಗೊಬ್ಬರಗಳ ಮಿತ ಬಳಕೆ, ನೀರಿನ ವ್ಯವಸ್ಥೆ, ಕಬ್ಬಿನ ಕಟಾವು, ಈ ಪಂಚಸೂತ್ರಗಳನ್ನು ಪಾಲಿಸುವುದರಿಂದ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯ ಎಂದು ಕೃಷಿ ತಜ್ಞ ಸಂಜಯ ಮಾನೆ ಹೇಳಿದರು.

ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಅವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ, ಚಿಕ್ಕೋಡಿ ಶಿವಶಕ್ತಿ ಶುಗರ್ಸ್‌ ಲಿಮಿಟೆಡ್‌, ಸವದತ್ತಿ ಆಮ್ಸ್‌ì ಡಿಸ್ಟಿಲರಿ ಪ್ರೈವೆಟ್‌ ಲಿಮಿಟೆಡ್‌, ಡಾ| ಪ್ರಭಾಕರ ಕೋರೆ ಕ್ರೆಡಿಟ್‌ ಸೌಹಾರ್ದ ಸಹಕಾರಿ ಲಿಮಿಟೆಡ್‌ ಪರವಾಗಿ ಆಯೋಜಿಸಿದ್ದ “ಪ್ರತಿ ಎಕರೆಗೆ ನೂರು ಟನ್‌ ಕಬ್ಬು ಉತ್ಪಾದನೆ ಮಾಡುವ ಬಗೆ ಹೇಗೆ?’ ಎಂಬ ವಿಷಯದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರು ಇನ್ನೂವರೆಗೆ ತಮ್ಮ ಪಾರಂಪರಿಕ ಕೃಷಿ ವ್ಯವಸಾಯ ಮಾಡುತ್ತಿದ್ದರಿಂದ ಕೃಷಿ ಉತ್ಪನ್ನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇಂದು ಕೃಷಿ ಬೇಸಾಯದಲ್ಲಿ ಮತ್ತು ಕಬ್ಬು ಬೆಳೆಯುವಲ್ಲಿ ಹಲವಾರು ತಂತ್ರಜ್ಞಾನ ಬೆಳಕಿಗೆ ಬಂದಿದು, ಈ ತಂತ್ರಜ್ಞಾನ ಮೂಲಕ ಕೃಷಿ ಬೇಸಾಯ ಮಾಡಿದರೆ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಉತ್ಪಾದನೆ ಮಾಡಬಹುದು. ಕಬ್ಬು ಬೆಳೆಯುವ ಬೆಳೆ ಪದ್ಧತಿಯಲ್ಲಿ ಎಲ್ಲ ರೈತರು ಪಂಚಸೂತ್ರದ ಮೂಲಕ ಕಬ್ಬು ಬೆಳೆದರೆ ಪ್ರತಿ ಎಕರೆ ಕಬ್ಬಿಗೆ ನೂರ ಐವತ್ತು ಟನ್‌ ಇಳುವರಿ ಪಡೆಯಲು ಸಾಧ್ಯ ಎಂದರು.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಮಾತನಾಡಿ, ರೈತರು ಮುಂದೆ ಹಲವಾರು ಸಮಸ್ಯೆ ಇದ್ದರೂ ಕೂಡ ನಿವಾರಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದ ರೈತರಿಗೆ ಅನುಕೂಲ ಆಗುವಂತಹ ಎಲ್ಲ ತಂತ್ರಜ್ಞಾನ ಇಂದು ಲಭ್ಯವಿದ್ದು, ಈ ತಂತ್ರಜ್ಞಾನ ಮೂಲಕ ಕೃಷಿ ಪದ್ಧತಿ ಅಳವಡಿಸಿಕೊಂಡು ಕೃಷಿ ಉತ್ಪಾದನೆ ಹೆಚ್ಚಿಸಬೇಕು ಎಂದರು.

ರೈತರು ಕೃಷಿ ಭೂಷಣ ಪುರಸ್ಕೃತ ಸಂಜಯ ಮಾನೆ ಅವರ ಅನುಭವವನ್ನು ಕೃಷಿಯಲ್ಲಿ ಅಳವಡಿಸಿ ಪ್ರಗತಿ ಸಾಧಿಸಬೇಕು. ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ ಹಾಗೂ ಶಿವಶಕ್ತಿ ಶುಗರ್ ಸದಸ್ಯರು ಪ್ರಸಕ್ತ ಹಂಗಾಮಿನಲ್ಲಿ 100 ಟನ್‌ ಕಬ್ಬು ಬೆಳೆಯುವ ರೈತರಿಗೆ ಪ್ರೋತ್ಸಾಹ ಬಹುಮಾನವಾಗಿ 25 ಸಾವಿರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಸಂಜಯ ಮಾನೆ ಅವರ ಕೃಷಿ ಪುಸ್ತಕವನ್ನು ಕನ್ನಡದಲ್ಲಿ ಪ್ರಕಟಿಸಲಾಗುವುದು ಎಂದರು.

ಡಾ| ಪ್ರಭಾಕರ ಕೋರೆ ಜನ್ಮ ದಿನಾಚರಣೆ ಸಮಿತಿ ಅಧ್ಯಕ್ಷ ಬಿ.ಆರ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾತ್ಯಾಸಾಹೇಬ್‌ ಕಾಟೆ, ಬಾಳಗೌಡ ರೇಂದಾಳೆ, ಅಣ್ಣಾಸಾಹೇಬ್‌ ಪಾಟೀಲ್‌, ಚೇತನ್‌ ಪಾಟೀಲ್‌, ಸಂದೀಪ್‌ ಪಾಟೀಲ್‌, ಮಲ್ಲಪ್ಪ ಮೈಶಾಳೆ, ರಾಮಚಂದ್ರ ನಿಶಂದಾರ್‌, ಮಹಾವೀರ ಮಿರ್ಜಿ, ಸಿದಗೌಡ ಮಗದುಮ್ಮ, ಪಿಂಟು ಹಿರೇಕುರಬರ, ಸುರೇಶ್‌ ಪಾಟೀಲ, ತುಕಾರಾಮ ಪಾಟೀಲ, ಪ್ರಭಾಕರ್‌ ಕೋರೆ ಕ್ರೆಡಿಟ್‌ ಸೌಹಾರ್ದ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ದೇವೇಂದ್ರ ಕರೋಶಿ ಮುಂತಾದವರು ಇದ್ದರು.

ಸಿ.ಬಿ. ಕೋರೆ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ ಸ್ವಾಗತಿಸಿದರು. ಉಪನ್ಯಾಸಕ ಸಚಿನ ಮೆಕ್ಕಳಕ್ಕಿ ಪ್ರಾಸ್ತಾವಿಕ ಮಾತನಾಡಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.