ಜನಮನ ಸೆಳೆದ ಜಾನಪದ ಮೆರವಣಿಗೆ

Team Udayavani, Mar 22, 2022, 2:51 PM IST

14-2

ರಾಮದುರ್ಗ: ಪಟ್ಟಣದಲ್ಲಿ ಮಾ. 21 ರಿಂದ 23 ರವರೆಗೆ ನಡೆಯಲಿರುವ ಶಿವರಾತ್ರಿ ಶಿವಜಾತ್ರಿ ರಾಜ್ಯ ಮಟ್ಟದ 7 ನೇ ಜಾನಪದ ಮಹಾಸಮ್ಮೇಳನದ ಜಾನಪದ ಕಲಾ ಮೆರವಣಿಗೆಯನ್ನು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಶರಣು ತಳ್ಳಿಗೇರಿ ಅವರು ಉದ್ಘಾಟಿಸಿ ಚಾಲನೆ ನೀಡಿದರು.

ತಾಲೂಕಿನ ಅವರಾದಿ ಶಿವಪೇಟೆಯ ಓಂ ಶಿವ ಮೇಳದ ಆಶ್ರಯದಲ್ಲಿ ನಡೆಯುತ್ತಿರುವ ಜಾನಪದ ಮಹಾಸಮ್ಮೇಳನ ಮೆರವಣಿಗೆ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದಿಂದ ಹೊರಟು, ಜುನಿಪೇಟ ಮಾರ್ಗವಾಗಿ ಹಳೆ ಪೊಲೀಸ್‌ ಠಾಣೆ, ತೇರ ಬಝಾರ್‌, ನೇಕಾರ ಪೇಟೆ, ರಾಧಾಪೂರ ಪೇಟೆಯಿಂದ ಮಾರ್ಕೆಟ್‌ ಗೇಟ್‌ ಮೂಲಕ ಹಾಯ್ದು ವಿದ್ಯಾ ಚೇತನ ಶಾಲೆಯಲ್ಲಿ ಕೊನೆಗೊಂಡಿತು.

ಮೆರವಣಿಗೆಯಲ್ಲಿ ಮಹಿಳೆಯರ ಕುಂಭ ಮೇಳ, ಡೊಳ್ಳು ಕುಣಿತ, ಗಾರುಡಿ ಗೊಂಬೆ, ಹೆಜ್ಜೆ ಮೇಳ, ಕಹಳೆ ಓಲಗ, ಖಣಿ ಸಂಬಾಳ, ಜಗ್ಗಲಿಗೆ ಮೇಳ, ಪುರವಂತಿಕೆ ನೃತ್ಯ, ಜೋಗತಿ ನೃತ್ಯ ಹೀಗೆ 15ಕ್ಕೂ ಹೆಚ್ಚು ಜಾನಪದ ತಂಡಗಳು ಬೆಳಗಾವಿ, ವಿಜಯನಗರ, ವಿಜಯಪುರ, ಬಳ್ಳಾರಿ, ಹಾವೇರಿ, ದಾವಣಗೇರಿ, ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದವು.

ಓಂ ಶಿವ ಮೇಳದ ಸಂಸ್ಥಾಪಕ ಜಾನಪದ ಕಲಾವಿದ ಸಿದ್ದು ಮೋಟೆ, ನಿವೃತ್ತ ಯೋಧ ಪುಂಡಲೀಕ ನಡಗಡ್ಡಿ ಮತ್ತು ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಾ. 22 ರಂದು ಮಂಗಳವಾರ ಬಸಲಿಂಗಯ್ಯ ಹಾಗೂ ಕೌಜಲಗಿ ವಿಠ್ಠಲ ವೇದಿಕೆಯಲ್ಲಿ ಜರುಗುವ ಜಾನಪದ ಶಿವರಾತ್ರಿ ಸಮಾರಂಭದ ಸಾನಿಧ್ಯವನ್ನು ರಬಕವಿ ಬ್ರಹ್ಮಾನಂದ ಆಶ್ರಮದ ಗುರು ಸಿದ್ಧೇಶ್ವರ ಸ್ವಾಮೀಜಿ ವಹಿಸಲಿದ್ದು, ಮಾಜಿ ಶಾಸಕ ಅಶೋಕ ಪಟ್ಟಣ ಅಧ್ಯಕ್ಷತೆ ವಹಿಸುವರು. ಉದ್ಯಮಿ ವಿಜಯ ಶೆಟ್ಟಿ, ಪ್ರದೀಪ ಪಟ್ಟಣ, ರಾಜೇಶ್ವರಿ ಮೆಟಗುಡ್ಡ, ಮುತ್ತುರಾಜ ಕೊಂಡಾ, ಮುಖ್ಯಾಕಾರಿ ರವಿ ಬಾಗಲಕೋಟೆ, ಸಿಪಿಐ ಐ.ಆರ್‌. ಪಟ್ಟಣಶೆಟ್ಟಿ, ಆಗಮಿಸುವರು. ಬೆಂಬಳಗಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಪ್ರಕಾಶ ತೆಗ್ಗಿಹಳ್ಳಿ ಉಪನ್ಯಾಸ ನೀಡುವರು. ಡಾ| ಎಂ.ಎನ್‌. ಸಿದ್ಧಗಿರಿ ಪ್ರಾಸ್ತಾವಿಕ ಮಾತನಾಡುವರು.

ಇದೇ ಸಂದರ್ಭದಲ್ಲಿ ಜಾನಪದ ಶಿವಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಕಲಾ ಪ್ರೋತ್ಸಾಹಿಗಳ ಸಮ್ಮಾನ, ಸಮ್ಮೇಳನಕ್ಕೆ ಸಹಾಯ ನೀಡಿದ ಸನ್ಮಾನ್ಯರ ಸತ್ಕಾರ ನಡೆಯುವದು. ನಂತರ ಜಾನಪದ ಕಲಾ ಸಂಭ್ರಮ ಜರುಗಲಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.