ಗಡಿ ದಾಟಲು ಜನರ ಹರಸಾಹಸ

ಇ-ಪಾಸ್‌ ಇದ್ದವರಿಗೆ ಮಾತ್ರ ಪ್ರವೇಶಾವಕಾಶ

Team Udayavani, May 10, 2020, 1:35 PM IST

ಗಡಿ ದಾಟಲು ಜನರ ಹರಸಾಹಸ

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ 19 ತಾಂಡವವಾಡುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನರನ್ನು ಗಡಿ ಭಾಗದ ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ ಬಳಿ ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಪಾಸ್‌ ಇಲ್ಲದೆ ಅಕ್ರಮವಾಗಿ ರಾಜ್ಯದ ಒಳಗೆ ಜನ ನುಸುಳುತ್ತಿರುವ ಪರಿಣಾಮ ಗಡಿಯಲ್ಲಿ ಆತಂಕ ಹೆಚ್ಚಿದೆ.

ಮಹಾರಾಷ್ಟ್ರದ ಮುಂಬೈ, ಪುಣೆ, ಕೊಲ್ಲಾಪೂರ ಮುಂತಾದ ಜಿಲ್ಲೆಗಳಿಂದ ರಾಜ್ಯಕ್ಕೆ ಆಗಮಿಸುವ ಜನರಲ್ಲಿ ಈ-ಪಾಸ್‌ ಇದ್ದವರಿಗೆ ಮಾತ್ರ ರಾಜ್ಯದ ಒಳಗೆ ಬರಲು ಅವಕಾಶ ಮಾಡಿಕೊಡುತ್ತಿದ್ದಾರೆ. ಕೆಲವು ಈ ಪಾಸ್‌ ಇಲ್ಲದವರು ಅಕ್ರಮ ಮಾರ್ಗದಲ್ಲಿ ರಾಜ್ಯದ ಒಳಗೆ ನುಸುಳುತ್ತಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪೊಲೀಸರು ಎಲ್ಲ ವಾಹನಗಳ ತಪಾಸಣೆ ಮಾಡಿ, ರಾಜ್ಯದ ಈ-ಪಾಸ್‌ ಹೊಂದಿದಲ್ಲಿ ಮಾತ್ರ, ಅವರ ಆರೋಗ್ಯ ಪರೀಕ್ಷೆ ಮಾಡಿಸಿ ಹೋಮ್‌ ಕ್ವಾರಂಟೈನ್‌ ಸೀಲ್‌ ಹಾಕಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುತ್ತಿದ್ದಾರೆ. ರಾಜ್ಯದ ಕೊನೆಯ ಗ್ರಾಮ ತಾಲೂಕಿನ ಕೊಗನೋಳಿ ಗ್ರಾಮದಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿ ಪೊಲೀಸರು ಅಕ್ರಮವಾಗಿ ಜನ ನುಸುಳಿ ಬರದಂತೆ ತಡೆದರೂ ಸಹ ರಸ್ತೆ ಬದಿಯ ಹೊಲದಲ್ಲಿ ಹಾಯ್ದು ಜನರು ಬರುತ್ತಿರುವುದು ಕಂಡು ಬರುತ್ತಿದೆ.

ಚೆಕ್‌ಪೋಸ್ಟ್‌ ಬಳಿ ಜನವೋ ಜನ: ಇತ್ತ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಹೋಗುವ ಹಾಗೂ ಅತ್ತ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನ ಕೊಗನ್ನೊಳ್ಳಿ ಚೆಕ್‌ಪೋಸ್ಟ್‌ ಬಳಿ ಬಂದು ಸೇರುವುದರಿಂದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಜನರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕೆಲವರು ಮೂರು ದಿನಗಳಿಂದ ರಸ್ತೆ ಬದಿಯ ಗಿಡದ ನೆರಳಲ್ಲಿ ವಾಸ ಮಾಡುತ್ತಿದ್ದಾರೆ. ಸಣ್ಣ ಮಕ್ಕಳು ಬಿಸಿಲಿನ ತಾಪಕ್ಕೆ ಕಂಗಾಲಾಗಿ ಹೋಗುತ್ತಿದ್ದಾರೆ. ಹೊಲದ ಮಾರ್ಗವಾಗಿ ರಾಜಾರೋಷವಾಗಿ ದ್ವಿಚಕ್ರ ವಾಹನಗಳ ಮೂಲಕ ಸಂಚಾರ ನಡೆದಿದೆ. ರಾತ್ರಿ ಸಮಯದಲ್ಲಿ ಹಲವಾರು ಜನರು ಗ್ರಾಮದ ಲಕ್ಷ್ಮೀನಗರದ ಮೂಲಕ ಹಾದು ಹೋಗುತ್ತಿದ್ದಾರೆ. ಅವರನ್ನು ತಡೆಯಲು ನಮಗೆ ಭಯವಾಗುತ್ತಿದೆ. ಅವರಿಗೆ ಸೋಂಕು ತಗುಲಿದ್ದಲ್ಲಿ ನಮ್ಮದೂ ಅಧೋಗತಿ ಎನ್ನುತ್ತಾರೆ ಕೊಗನ್ನೊಳ್ಳಿ ಗ್ರಾಮಸ್ಥ ಅಜಯ ನವಾಳೆ.

ಈ-ಪಾಸ್‌ ಇದ್ದವರಿಗೆ ಮಾತ್ರ ರಾಜ್ಯದ ಒಳಗೆ ಬರಲು ಅವಕಾಶಮಾಡಿಕೊಡಲಾಗುತ್ತದೆ. ಪಾಸ್‌ ಇಲ್ಲದವರು ಯಾ ರೇ ಎಷ್ಟೇ ಒತ್ತಡ ತಂದರೂ ಒಳಗೆ ಬರಲು ಸಾಧ್ಯವಾಗುವುದಿಲ್ಲ, ದಿನದ 24 ಗಂಟೆಗಳ ಕಾಲ ಪೊಲೀಸ್‌ ಹಾಗೂ ಕಂದಾಯ ಇಲಾಖೆ ಚೆಕ್‌ಪೋಸ್ಟ್‌ದಲ್ಲಿ ಕಾರ್ಯನಿರ್ವಹಿಸುತ್ತಿವೆ. ರವೀಂದ್ರ ಕರಲಿಂಗನ್ನವರ, ಉಪವಿಭಾಗಾಧಿಕಾರಿ, ಚಿಕ್ಕೋಡಿ

ಅಕ್ರಮವಾಗಿ ಜನ ಗಡಿ ದಾಟಿ ಹೋಗುವುದು ಕಂಡು ಬಂದರೆ ಅಂಥವರನ್ನು ಗುರ್ತಿಸುವ ಕೆಲಸವನ್ನು ಪೊಲೀಸ್‌ ಹಾಗೂ ಕಂದಾಯ ಇಲಾಖೆ ಮಾಡುತ್ತದೆ. ಮನೋಜ ನಾಯಿಕ, ಡಿವೈಎಸ್‌ಪಿ ಚಿಕ್ಕೋಡಿ

­ಮಹಾದೇವ ಪೂಜೇರಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.