ತ್ರಿವಳಿ ನಗರ ಜೋಡಣೆಗೆ ಯೋಜನೆ

•ಹುಬ್ಬಳ್ಳಿ-ಧಾರವಾಡ-ಬೆಳಗಾವಿ ಜೋಡಿಸಲು ನೂತನ ರೈಲ್ವೆ ಯೋಜನೆ: ಸಚಿವ ಅಂಗಡಿ

Team Udayavani, Jul 28, 2019, 10:54 AM IST

bg-tdy-1

ಬೆಳಗಾವಿ: ಎಪಿಎಂಸಿಯಲ್ಲಿ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ಪರಿಶೀಲನೆ ನಡೆಸಿದರು.

ಬೆಳಗಾವಿ: ಹುಬ್ಬಳ್ಳಿ, ಬೆಳಗಾವಿ ಹಾಗೂ ಧಾರವಾಡ ತ್ರಿವಳಿ ನಗರ ಜೋಡಿಸುವ ಮೂಲಕ ಜನರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಹೊಸ ರೈಲ್ವೆ ಯೋಜನೆ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯಿಂದ ಬಹಳಷ್ಟು ಜನರಿಗೆ ಅನುಕೂಲಕರವಾಗಲಿದೆ. ವೇಗವಾಗಿ ಈ ನಗರಗಳು ಬೆಳೆಯುತ್ತಿರುವುದರಿಂದ ಆದಷ್ಟು ಬೇಗ ಹೊಸ ಯೋಜನೆ ಅನುಷ್ಠಾನಗೊಳಿಸಲಾಗುವುದು. ಇದರಿಂದ ಯುವಕರು, ಸಾರ್ವಜನಿಕರು ಉದ್ಯೋಗಕ್ಕಾಗಿ ಓಡಾಡಲು ಈ ನಗರಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಲಿವೆ ಎಂದರು.

ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ರಿಂಗ್‌ ರೋಡ್‌ ನಿರ್ಮಾಣ ಮಾಡಲಾಗುತ್ತಿದ್ದು, ಯೋಜನೆಗೆ ಅನೇಕ ರೈತರು ಜಮೀನು ನೀಡುತ್ತಿದ್ದಾರೆ. ಕೆಲ ರೈತರ ಜಮೀನುಗಳ ಸಮಸ್ಯೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಸಮಸ್ಯೆ ಬಗೆಹರಿಸಿ ಅಧಿಕಾರಿಗಳು ಅನುಕೂಲ ಮಾಡಿಕೊಡಬೇಕು. ರಿಂಗ್‌ ರೋಡ್‌ ನಿರ್ಮಾಣಗೊಂಡರೆ ಬೆಳಗಾವಿಯಲ್ಲಿಯ ಟ್ರಾಫಿಕ್‌ ಸಮಸ್ಯೆ ಬಗೆಹರಿಯುತ್ತದೆ ಎಂದರು.

ರಿಂಗ್‌ ರೋಡ್‌ ನಿರ್ಮಾಣಕ್ಕೆ ಅಡಚಣೆ ಆಗುತ್ತಿರುವ ರೈತರ ಜಮೀನುಗಳ ಕುರಿತು ರಾಜ್ಯಸಭಾ ಸದಸ್ಯ ಡಾ| ಪ್ರಣಾಕರ ಕೋರೆ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮೇಯರ್‌ ಹಾಗೂ ಪಾಲಿಕೆ ಸದಸ್ಯರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಇತಿಶ್ರೀ ಹೇಳಲಾಗುವುದು ಎಂದರು.

ದಂಡು ಮಂಡಳಿ ಪ್ರದೇಶದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿಗಳ ಕುರಿತು ಪ್ರತಿಕ್ರಿಯಿಸಿದ ಸಚಿವ ಸುರೇಶ ಅಂಗಡಿ, ದಂಡು ಮಂಡಳಿಗೆ ತನ್ನದೇ ಆದ ಕಾನೂನಿದೆ. ಅವರಿಂದ ಪಡೆದ ಜಮೀನನ್ನು ಮತ್ತೆ ಹಿಂದಿರುಗಿಸಬೇಕಾಗುತ್ತದೆ. ಈ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆದು ದಂಡು ಮಂಡಳಿಗೆ ಜಮೀನು ನೀಡಬೇಕೆಂದು ಕೊರಲಾಗಿದೆ. ಈ ಪ್ರದೇಶದಲ್ಲಿ ಕೆಲವು ನಿಬಂಧನೆಗಳಿದ್ದು, ಅವುಗಳನ್ನು ಹಂತ-ಹಂತವಾಗಿ ರಾಜ್ಯ ಸರ್ಕಾರ ಮಾತುಕತೆ ಮೂಲಕ ಬಗೆ ಹರಿಸಲಿದೆ. ಆದಷ್ಟು ಬೇಗ ಮುಂದಿನ ದಿನಗಳಲ್ಲಿ ಕಂಟೋನಮೆಂಟ್ ವ್ಯಾಪ್ತಿಯಲ್ಲಿಯೂ ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದರು.

ದಂಡು ಮಂಡಳಿ ಪ್ರದೇಶದಲ್ಲಿ ಶನಿವಾರ ಸ್ಮಾರ್ಟ್‌ ಸಿಟಿ ಯೋಜನೆಗೆ ದಂಡು ಮಂಡಳಿಯ ಸಹಕಾರ ಹಾಗೂ ಕಂಟೋನಮೆಂಟ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದಿಂದ ನಡೆಯುವ ಕಾಮಗಾರಿ ಕುರಿತು ಸಚಿವ ಸುರೇಶ ಅಂಗಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ, ಬ್ರಿಗೇಡಿಯರ್‌ ಗೋವಿಂದ ಕಾಲವಾಡ, ಶಾಸಕ ಅನಿಲ ಬೆನಕೆ, ಕಂಟೋನಮೆಂಟ್ ಸದಸ್ಯರಾದ ಸಾಜೀದ್‌ ಶೇಖ, ನಿರಂಜನಾ ಅಷ್ಟೇಕರ, ಅಲ್ಲಾದ್ದಿನ್‌ ಕಿಲ್ಲೇದಾರ, ರಿಜ್ವಾನ್‌ ಬೇಪಾರಿ, ವಿಕ್ರಮ ಪುರೋಹಿತ, ದಂಡುಮಂಡಳಿ ಸಿಇಒ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.