ರಾಮದೇವ ಹೇಳಿಕೆ ಖಂಡಿಸಿ ಪ್ರತಿಭಟನೆ


Team Udayavani, Nov 22, 2019, 11:40 AM IST

bg-tdy-2

ರಾಮದುರ್ಗ: ಡಾ| ಬಾಬಾಸಾಹೇಬ ಅಂಬೇಡ್ಕರ, ಪೆರಿಯಾರ್‌ ಮತ್ತು ಫುಲೆ ವಿಚಾರಗಳನ್ನು ಅನುಕರಣೆ ಮಾಡುವ ಅನುಯಾಯಿಗಳು ದೇಶದ್ರೋಹಿಗಳು ಮತ್ತು ಉಗ್ರಗಾಮಿಗಳು ಎಂಬ ಬಾಬಾ ರಾಮದೇವ್‌ ಅವರ ಹೇಳಿಕೆ ಖಂಡಿಸಿ ಅಹಿಂದ್‌ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸ್ಥಳೀಯ ವೆಂಕಟೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನ ಸೌಧದ ಮುಂದಿನ ಮುಖ್ಯ ರಸ್ತೆಯಲ್ಲಿ ಸಮಾವೇಶಗೊಂಡಿತು. ಮೆರವಣಿಗೆಯಲ್ಲಿ ಹೊರಟ ಅಹಿಂದ ಚಳವಳಿಗಾರರು ತುಳಿತಕ್ಕೆ ಒಳಗಾದವರ ಏಳಿಗೆಗೆ ಶ್ರಮಿಸಿ ಮಹಾತ್ಮರ ವಿರುದ್ಧ ಮತ್ತು ಅವರ ಅನುಯಾಯಿಗಳನ್ನು ನಿಂದಿಸಿ ಹೇಳಿಕೆ ನೀಡಿದ್ದಬಾಬಾ ರಾಮದೇವ್‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಂವಿಧಾನವನ್ನು ಡಾ| ಬಾಬಾಸಾಹೇಬ ಅಂಬೇಡ್ಕರ ಒಬ್ಬರೇ ರಚಿಸಿಲ್ಲ. ಅವರೊಬ್ಬ ಕರಡು ಸಮಿತಿ ಅಧ್ಯಕ್ಷರಾಗಿದ್ದರು ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಇಲಾಖೆ ಆಯುಕ್ತ ಉಮಾಶಂಕರ ಮತ್ತು ಅವರಿಗೆ ಬೆನ್ನೆಲುಬಾಗಿರುವ ಶಿಕ್ಷಣ ಸಚಿವ ಸುರೇಶಕುಮಾರ ವಿರುದ್ಧವೂ  ಧಿಕ್ಕಾರ ಹಾಕಿದರು. ರಾಮದುರ್ಗ ಬಂದ್‌ ಕರೆಗೆ ಸ್ಪಂದಿಸಿದ ಸ್ಥಳೀಯ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಮುಚ್ಚಿ ಬಂದ್‌ ಯಶಸ್ವಿಗೊಳಿಸಿದರು

. ಸಾರಿಗೆ ಸಂಚಾರಕ್ಕೆ ಮಾತ್ರ ಅಡ್ಡಿಯಾಗಲಿಲ್ಲ. ಪಟ್ಟಣದ ಗಾಂ ಧಿನಗರ ಮತ್ತು ಮಿನಿ ವಿಧಾನಸೌಧದ ಮುಂದಿನ ರಸ್ತೆಗಳಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಹೊತ್ತು ರಸ್ತೆ ಸಂಚಾರಕ್ಕೂ ಅಡೆತಡೆ ಮಾಡಿದರು. ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ದಲಿತ ನಾಯಕ ಬಿ.ಆರ್‌. ದೊಡಮನಿ, ಡಿ.ಎಲ್‌. ದೊಡಮನಿ, ಲಕ್ಷ್ಮೀ ನಾರಾಯಣ, ಪುರಸಭೆಯ ಮಾಜಿ ಅಧ್ಯಕ್ಷ ಸುರೇಶ ಪತ್ತೇಪೂರ, ಅಲ್ಪ ಸಂಖ್ಯಾತರ ಮುಖಂಡ ಮಹ್ಮದ್‌ಶ ಬೆಣ್ಣಿ, ಜಿ.ಪಂ ಸದಸ್ಯ ಜಹೂರ್‌ ಹಾಜಿ, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ವಿಜಯಕುಮಾರ ರಾಠೊಡ, ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ಜಗದೀಶ ದೇವರಡ್ಡಿ ಮಾತನಾಡಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ, ಯಲ್ಲಪ್ಪ ದೊಡಮನಿ, ಟಿಪ್ಪು ಸುಲ್ತಾನ್‌ ಸಂಘರ್ಷ ಸಮಿತಿಯ ಎಂ.ಕೆ. ಯಾದವಾಡ, ಮಹ್ಮದ ಬೇಗ ನಿಗದಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.