ರಾಜ್ಯ ಸರ್ಕಾರದ ರೈತ ವಿರೋಧಿ ನಿಲುವು ಖಂಡಿಸಿ ಪ್ರತಿಭಟನೆ
Team Udayavani, Jun 17, 2020, 4:29 PM IST
ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ 1961ರ 79 ಎ ಹಾಗೂ ಬಿ ಪರಿಷ್ಕರಣೆ ಖಂಡಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರೈತ ವಿರೋಧ ಪರಿಷ್ಕೃತ ಕಾಯ್ದೆಗಳಾದ ಭೂ ಸುಧಾರಣಾ ಕಾಯ್ದೆ 1961ರ 79 ಎ ಹಾಗೂ ಬಿ, ಎಪಿಎಂಸಿ ಕಾಯ್ದೆ ಜಾರಿಗೆ ತಂದಿರುವುದು ರೈತರ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ. ಹಿಂಬಾಲಿಗಿನಿಂದ ಈ ಕಾಯ್ದೆಗಳನ್ನು ಪರಿಷ್ಕರಿಸಿ ಭ್ರಷ್ಟ ಉದ್ಯಮ ಮತ್ತು ಭೂ ಮಾಫಿಯಾಗಳಿಗೆ ಅನುಕೂಲ ಮಾಡಿಕೊಡುತ್ತಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನಿಲುವು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಇದಕ್ಕೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ. ಹಳ್ಳಿಗಳಲ್ಲಿಯೂ ಸೋಂಕು ಹರಡುತ್ತಿರುವುದರಿಂದ ಎಲ್ಲ ವೈದ್ಯೋಪಚಾರ, ಖರ್ಚು ವೆಚ್ಚವನ್ನು ಗ್ರಾಮೀಣ ಭಾಗಕ್ಕೂ ಸರ್ಕಾರವೇ ನೋಡಿಕೊಳ್ಳಬೇಕು. 2019ರ ಅತಿವೃಷ್ಟಿಯಲ್ಲಿ ಮನೆ ಹಾನಿ, ಬೆಳೆ ಹಾನಿ ಹಾಗೂ ಜಾನುವಾರು ಹಾನಿ ಪರಿಹಾರ ಕೂಡಲೇ ನೀಡಬೇಕು. ಬೀಜ ಸುಧಾರಣಾ ಕಾಯ್ದೆ ಮತ್ತು ವಿದ್ಯುತ್ ಖಾಸಗೀಕರಣ ಮಾಡುವುದರೊಂದಿಗೆ ವಸಾಹತುಶಾಹಿಗಳಿಂದ ರೈತರನ್ನು ನಿಯಂತ್ರಿಸುವ ವ್ಯವಸ್ಥೆ ಖಂಡನೀಯ ಎಂದು ಮನವಿ ಸಲ್ಲಿಸಿದರು.
ರೈತ ಮುಖಂಡರಾದ ಚೂನಪ್ಪ ಪೂಜೇರಿ, ಜಯಶ್ರೀ ಗುರೆಣ್ಣವರ, ರಾಘವೇಂದ್ರ ನಾಯ್ಕ, ಪ್ರಕಾಶ ನಾಯ್ಕ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ
Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು