ಆರ್‌ಸಿಯುಗೆ ಮೂಲ ಸೌಕರ್ಯ ಕಲ್ಪಿಸಿ


Team Udayavani, Mar 3, 2020, 3:25 PM IST

bg-tdy-1

ಬೆಳಗಾವಿ: ಇಲ್ಲಿಯ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮೂಲ ಸೌಕರ್ಯ ಒದಗಿಸಬೇಕು. ಕೊಠಡಿ ನಿರ್ಮಿಸಲು ಸ್ವಂತ ಜಾಗ ನೀಡಬೇಕು ಎಂದು ಆಗ್ರಹಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳು ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಂಡು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ 2009-10ರಲ್ಲಿ ಆರಂಭಗೊಂಡಿದೆ. ಸುಮಾರು 10 ವಷಗಳು ಕಳೆದರೂ ಇನ್ನೂ ಅನೇಕ ಸೌಲಭ್ಯಗಳಿಂದ ವಿಶ್ವವಿದ್ಯಾಲಯ ವಂಚಿತಗೊಂಡಿದೆ. ಇನ್ನೂವರೆಗೆ ಸ್ವಂತ ಕಟ್ಟಡ ಇಲ್ಲದೇ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪರದಾಡುವಂತಾಗಿದೆ. ಸುಮಾರು ಎರಡು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು, ಅಗತ್ಯ ಕೊಠಡಿಗಳು ಇಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು. ಕಲಿಕೆ ಪೂರಕವಾದ ಕೊಠಡಿಗಳಿಲ್ಲದೇ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಶೌಚಗೃಹ, ಶುದ್ಧ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆಗಳನ್ನು ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ. ಈ ಬಗ್ಗೆ ಅಧಿ ಕಾರಿಗಳನ್ನು ಕೇಳಿದರೆ ಸ್ವಂತ ಜಾಗ ಇಲ್ಲದಿರುವುದು ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನೆಪ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 365ಕ್ಕಿಂತ ಹೆಚ್ಚು ಕಾಲೇಜುಗಳು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿವೆ. ಸದ್ಯ 19 ಕೋರ್ಸ್‌ಗಳ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಟ್ಟಡ ಕೊರತೆಯಿಂದ ಇಲ್ಲಿ ಹೆಚ್ಚಿನ ಕೋರ್ಸ್‌ಗಳನ್ನು ಅಭ್ಯಸಿಸುವ ಅವಕಾಶವೂ ಕೈತಪ್ಪುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಾದರಿ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಸರ್ಕಾರ ಸ್ವಂತ ಜಮೀನು ನೀಡಬೇಕು. ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಗೆ ಮಾನ್ಯತೆ ನೀಡಿ ಸ್ವಂತ ಜಾಗದ ಅನುಮತಿ ಕೊಟ್ಟು ವಿವಿ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ವಿಶ್ವವಿದ್ಯಾಲಯಕ್ಕೆ ಬರಲು ಸರಿಯಾದ ಬಸ್‌ ಸೇವೆ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ 4ರಿಂದ ನಡೆದುಕೊಂಡು ಬರುವಂತಾಗಿದೆ. ಕೆಲವೇ ಕೆಲವು ಬಸ್‌ ಸಂಚಾರ ಇರುವುದರಿಂದ ಬೇರೆ ಸಮಯದಲ್ಲಿ ಬೆಳಗಾವಿಗೆ ಹೋಗಲು ಅನುಕೂಲ ಇಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು. ಮಾ. 11ರೊಳಗಾಗಿ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿ ಪ್ರತಿನಿಧಿಗಳಾದ ಅನಿಲ ನಡುವಿನಕೇರಿ, ಕಾವೇರಿ ಕುಂತಕಲ, ಗೋಪಾಲ ದಳವಾಯಿ, ಆರತಿ ಜಿ., ಅಕ್ಷತಾ ಬಾಳಿಕಾಯಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.