ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ

Team Udayavani, Jun 20, 2021, 10:34 AM IST

ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ

ಬೆಳಗಾವಿ: ಜಿಲ್ಲೆಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಮಳೆಯಾಗಿದೆ. ಆದರೆ ಪ್ರವಾಹ ಸ್ಥಿತಿ ಉದ್ಭವಿಸಿಲ್ಲ. ವೇದಗಂಗಾ ನದಿ ಮಾತ್ರ ಸ್ವಲ್ಪಮಟ್ಟಿಗೆ ಹೆಚ್ಚಿನ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿ ಕಾರಿ ಎಂ.ಜಿ.ಹಿರೇಮಠ ಹೇಳಿದರು

ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಅನುಭವದ ಆಧಾರದ ಮೇಲೆ 208 ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಲಾಗಿರುವ ಪ್ರವಾಹ ನಿರ್ವಹಣಾ ತಂಡಗಳ ಸದಸ್ಯರಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ತಾಲೂಕು ಮಟ್ಟದ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗ 26 ಬೋಟ್‌ಗಳು ಲಭ್ಯವಿದ್ದು, ನದಿತೀರದ ಗ್ರಾಮಗಳಲ್ಲಿ ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ಎರಡು ಎಸ್‌.ಡಿ.ಆರ್‌. ಎಫ್‌. ಹಾಗೂ ಒಂದು ಎನ್‌.ಡಿ.ಆರ್‌.ಎಫ್‌. ತಂಡಗಳು ಬೀಡು ಬಿಟ್ಟಿವೆ. ಕಾಳಜಿ ಕೇಂದ್ರದ ಸಮೀಪದಲ್ಲಿ 230 ಜಾನುವಾರು ಶಿಬಿರಗಳನ್ನು ಗುರುತಿಸಲಾಗಿದೆ. ಸಾಕಷ್ಟು ಮೇವು ದಾಸ್ತಾನು ಕೂಡ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಡಳಿತದ ಪಿಡಿ ಖಾತೆಯಲ್ಲಿ ಈಗ 92 ಕೋಟಿ ರೂ. ಲಭ್ಯವಿದ್ದು, ಪ್ರವಾಹ ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮಹಾರಾಷ್ಟ್ರದಿಂದ ಬಿಡುಗಡೆಯಾದ ನೀರು ಬೆಳಗಾವಿ ಮತ್ತಿತರ ನದಿ ಪಾತ್ರದ ಜಿಲ್ಲೆಗಳಿಗೆ ತಲುಪಲು ಒಂದು ದಿನ ಬೇಕಾಗುವುದರಿಂದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸಮಯಾವಕಾಶ ದೊರಕಲಿದೆ. ಆದ್ದರಿಂದ ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ನೀರಿನ ಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು ಮತ್ತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ಪ್ರಸ್ತುತ ಸನ್ನಿವೇಶದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಜನರು ಮತ್ತು ಜಾನುವಾರುಗಳರಕ್ಷಣೆ ಮತ್ತು ತಾತ್ಕಾಲಿಕ ಪುನರ್ವಸತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಪ್ರಾದೇಶಿಕ ಆಯುಕ್ತರಾದ ಆಮ್ಲಾನ್‌ ಆದಿತ್ಯ ಬಿಸ್ವಾಸ್‌, ನಗರ ಪೊಲೀಸ್‌ ಆಯುಕ್ತರಾದ ಡಾ.ಕೆ.ತ್ಯಾಗರಾಜನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ದರ್ಶನ್‌ ಎಚ್‌.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.