“ಬೊಮ್ಮಾಯಿ ಸಿಎಂ ಆಗಿದ್ದು ಸಂತಸ ತಂದಿದೆ’’  : ರಮೇಶ್

­ಮಂತ್ರಿಸ್ಥಾನ ತ್ಯಾಗಕ್ಕೆ ಕುಮಠಳ್ಳಿಗೆ ಉತ್ತಮ ಫಲ ­ಷಡ್ಯಂತ್ರಗಳಿಗೆ ನಾನು ಹೆದರುವವನಲ್ಲ 

Team Udayavani, Aug 15, 2021, 1:16 PM IST

dfdgd

ಅಥಣಿ: ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿರುವುದು ವೈಯಕ್ತಿಕವಾಗಿ ಸಂತಸ ತಂದಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಅಥಣಿ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿ ಆಗುವುದು ಬಿಡುವುದು ಆ ಮೇಲಿನ ಮಾತು. ಈಗ ಮಂತ್ರಿಯಾಗಲು ನನ್ನ ತಮ್ಮ ಸೇರಿ ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಠಳ್ಳಿ ಇದ್ದಾರೆ. ಮಂತ್ರಿಯಾಗಲು ಹೈ ಕಮಾಂಡ್‌ ಅಥವಾ ಸಂಘ ಪರಿವಾರದ ಮೇಲೆ ಯಾವುದೇ ಒತ್ತಡ ತಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಂತ್ರಿ ಆಗುವುದಕ್ಕಿಂತ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳ ಅನುಷ್ಠಾನಗೊಳ್ಳುವುದೇ ನನಗೆ ಪ್ರಾಮುಖ್ಯವಾಗಿದೆ. ಐದಾರು ತಿಂಗಳ ಅವ ಧಿಯಲ್ಲಿ ಅಥಣಿ ಅಭಿವೃದ್ಧಿ ಕುಂಠಿತಗೊಂಡಿತ್ತು. ನೀರಾವರಿ ಯೋಜನೆಗಳಿಗೆ ಚಾಲನೆ ಸಿಗಲಿದ್ದು, ಈ ಕಾರಣಕ್ಕಾಗಿಯೇ ಅಥಣಿಗೆ ಭೇಟಿ ನೀಡಿರುವೆ ಎಂದರು.

ಸಿಡಿ ಪ್ರಕರಣ ಅಂತ್ಯಗೊಳಿಸಿ ನಿಮ್ಮನ್ನು ಬೊಮ್ಮಾಯಿ ಸರಕಾರದಲ್ಲಿ ಬಿಜೆಪಿ ಹೈ ಕಮಾಂಡ್‌ ಮಂತ್ರಿ ಮಾಡಬಹುದಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಪ್ರಕರಣದ ಕುರಿತಾಗಿ ಈಗಲೇ ನಾನು ಉತ್ತರಿಸುವುದಿಲ್ಲ. 2023ರ ವರೆಗೆ ಬಿಜೆಪಿಯನ್ನು ಮತ್ತಷ್ಟು ಭದ್ರಗೊಳಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಶಾಸಕರನ್ನು ಗೆಲ್ಲುವಂತೆ ಮಾಡಿ ಬಿಜೆಪಿ ಮತ್ತೂಮ್ಮೆ ಅಧಿ ಕಾರಕ್ಕೆ ತರುವ ಗುರಿ ತಮ್ಮದಾಗಿದೆ ಎಂದರು.

ನಾನು ನೀರಾವರಿ ಸಚಿವನಾಗಲು ಅಥಣಿ ಶಾಸಕ ಮಹೇಶ ಕುಮಠಳ್ಳಿಯೇ ಕಾರಣ. ಮಹೇಶ ಕುಮಠಳ್ಳಿ ಇಂದು ತಮ್ಮ ಮಂತ್ರಿ ಸ್ಥಾನ ತ್ಯಾಗ ಮಾಡಿದ್ದಾರೆ. ಬಿಜೆಪಿ ಹೈ ಕಮಾಂಡ್‌ ಕೈಗೊಂಡ ನಿರ್ಣಯಕ್ಕೆ ಅವರು ಬದ್ಧರಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಈ ತ್ಯಾಗಕ್ಕೆ ಉತ್ತಮ ಫಲ ಸಿಗಲಿದೆ. ರಾಜಕೀಯದಲ್ಲಿ ಷಡ್ಯಂತ್ರಗಳು ಸಾಮಾನ್ಯ. ಅದರಲ್ಲಿ ತಮಗಿಂತ ಶೂರರಿದ್ದವರಿಗಂತೂ ಷಡ್ಯಂತ್ರ ಮಾಡೇ ಮಾಡುತ್ತಾರೆ. ಇವುಗಳಿಗೆ ನಾನು ಹೆದರುವನಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಸಂತೋಷವಾಗಿದ್ದೇನೆ. ಬಿಜೆಪಿ ರಾಜ್ಯ ಹಾಗೂ ದಿಲ್ಲಿ ಮಟ್ಟದ ಹೈ ಕಮಾಂಡ್‌ ಮತ್ತು ಸಂಘ ಪರಿವಾರ ನನಗೆ ಪ್ರೀತಿ, ವಿಶ್ವಾಸ ನೀಡಿದೆ. ನಾನು 20 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿದ್ದರೂ ಕೂಡ ಅಲ್ಲಿ ನನಗೆ ಪ್ರೀತಿ. ವಿಶ್ವಾಸ ಸಿಗಲಿಲ್ಲ. ಆದರೆ ಸಂಘ ಪರಿವಾರ ಮತ್ತು ಬಿಜೆಪಿ ನನ್ನನ್ನು ಗೌರವಿಸಿದೆ. ಹೀಗಾಗಿ ಬಿಜೆಪಿಯಲ್ಲಿ ಇರುವುದು ನನಗೆ ಸಂತೋಷ ತಂದಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ, ಧುರೀಣರಾದ ಕಿರಣಕುಮಾರ ಪಾಟೀಲ, ಮಲ್ಲಪ್ಪ ಹಂಚಿನಾಳ, ಅಮೂಲ ನಾಯಿಕ, ಸುರೇಶ ಮಾಯಣ್ಣವರ, ಮಲ್ಲಿಕಾರ್ಜುನ ಅಂದಾನಿ, ಶಿಬಗೌಡ ಜಗದೇವ, ಅನೀಲ ಸೌದಾಗರ, ಶಶಿಕಾಂತ ಸಾಳವಿ ಇದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.