ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್: ICUನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್
Team Udayavani, Apr 5, 2021, 7:09 PM IST
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಾಲೂಕು ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ನ ಐಸಿಯು ವಿಭಾಗದಲ್ಲಿ ರಮೇಶ್ ಜಾರಕಿಹೊಳಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿಡಿಯೋ ವೈರಲ್ ಆಗಿದೆ.
ಗೋಕಾಕ್ ನ ತಾಲೂಕು ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ರಮೇಶ್ ಜಾರಕಿಹೊಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಅಲ್ಲಿಯ ಸ್ಥಳೀಯ ವೈದ್ಯರೇ ವಿಡಿಯೋ ಮಾಡಿ ಹರಿ ಬಿಟ್ಟಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡುತ್ತಿರುವುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಮಹಾರಾಷ್ಟ್ರಕ್ಕೆ ರಮೇಶ್ ಜಾರಕಿಹೊಳಿ ಹೋಗಿ ಬಂದಿದ್ದರು. ರ್ಯಾಪಿಡ್ ಟೆಸ್ಟ್ ಮಾಡಿದ್ದರಿಂದ ಸೋಂಕು ದೃಢಪಟ್ಟಿದೆ. ರಮೇಶ್ ಇರುವ ಆಸ್ಪತ್ರೆಯ ಐಸಿಯು ವಿಭಾಗದ ಮುಂಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಾರಕಿಹೊಳಿ ಅವರ ಸಂಪರ್ಕಕ್ಕೆ ಬಂದಿರುವ ಕಾರು ಚಾಲಕ ಹಾಗೂ ಅಡುಗೆ ಸಿಬ್ಬಂದಿಗೂ ಸೋಕು ವ್ಯಾಪಿಸಿದೆ. ಇವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ :ತಿಂಗಳ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿ : ಸಚಿವ ನಿರಾಣಿ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ