ಉಪ ಸಮರ: ಲಖನ್ ಸ್ಪರ್ಧೆಯ ಸುಳಿವು ನೀಡಿದ ರಮೇಶ್ ಜಾರಕಿಹೊಳಿ

Team Udayavani, Sep 22, 2019, 9:26 AM IST

ಬೆಳಗಾವಿ: ಸಹೋದರ ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ. ಅವನು ಸತೀಶ್ ಜಾರಕಿಹೊಳಿ ಜೊತೆಗೆ ಸೇರಿ ಹಾಳಾಗುವುದು ಬೇಡ. ಲಖನ್ ಶಾಸಕ ಆದ್ರೆ ಮೊದಲು ಸಂತೋಷ ನಾನು ಪಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಲಖನ್ ಅವರನ್ನು ಕಣಕ್ಕಿಳಿಸುವ ಸುಳಿವು ನೀಡಿದ್ದಾರೆ.

ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದ ಜನರಿಗೆ ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಮಾಡುತ್ತಿದ್ದಾರೆ‌ ಅಂತಾ ಗೊತ್ತು.  ಜನರು ಸತೀಶ್ ಗೆ ಯಾವಾಗ ಬುದ್ದಿ ಕಲಿಸಬೇಕು ಕಲಿಸುತ್ತಾರೆ. ಸತೀಶ್ ವಿರೋಧ ಮಾಡಿದಷ್ಟು ನನಗೆ ಒಳ್ಳೆಯದಾಗುತ್ತೆ ಎಂದರು.

ಅತೀ ಶೀಘ್ರದಲ್ಲಿ ನನ್ನ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ ಎಂದಿರುವ ರಮೇಶ್,  ಮತದಾರರು ಯಾರು ಸಂಶಯ ಮತ್ತು ಡೈವರ್ಟ್ ಆಗೊದು ಬೇಡ. ಅಂಬಿರಾವ್ ಪಾಟೀಲ್ ಕಳೆದ ಮೂವತ್ತು ವರ್ಷಗಳಿಂದ ಗೋಕಾಕ್ ನಲ್ಲಿ ಬಂದುಳಿದಿದ್ದಾನೆ. ಯಾವುದೇ ಕೇಸ್ ಬಂದರು ಕೋರ್ಟ್ ಕಳುಹಿಸದೆ ಇಲ್ಲೇ ಮುಗಿಸಿ ಕಳುಹಿಸುತ್ತಾರೆ. ಬಡ ಜನರಿಗೆ ಈ ಮೂಲಕ ಅನುಕೂಲ ಮಾಡುತ್ತಿದ್ದಾನೆ. ಸತೀಶ್ ಕ್ಷೇತ್ರದಲ್ಲಿ ಪಿಎಗಳ ಹಾವಳಿ ಇದೆ. ಅಂಬಿರಾವ್ ಪಾಟೀಲ್ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅಂಬಿರಾವ್ ಪಾಟೀಲ್ ವಿರುದ್ಧ ಯಾರಾದರೂ ತಪ್ಪಾಗಿ ಹೇಳಿದ್ರೆ ಇಂದೇ ಆತನ ತೆಗೆಯುತ್ತೇನೆ. ಸತೀಶ್ ನಮ್ಮ ಕ್ಷೇತ್ರ ಸುತ್ತಿ ಮುಜುಗರವಾಗಿ ಮಾತನಾಡುತ್ತಿದ್ದಾರೆ. ಇಂತಹ ಮಾತುಗಳಿಗೆ ಕ್ಷೇತ್ರದ ಜನರು ಕಿವಿಗೊಡಬಾರದು ಎಂದು ಅಂಬಿರಾವ್ ಪಾಟೀಲ್ ವಿರುದ್ಧ ಸತೀಶ್ ಜಾರಕಿಹೊಳಿ ಆರೋಪ ವಿಚಾರವಾಗಿ ರಮೇಶ್ ಜಾರಕಿಹೊಳಿ ಉತ್ತರಿಸಿದರು.

ನಾನು ರಾಜೀನಾಮೆ ಕೊಟ್ಟ ದಿನವೇ ಚುನಾವಣೆಗೆ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ದನಾಗಿದ್ದೇನೆ. ಕಾನೂನು ಅಡಚಣೆ, ತಾಂತ್ರಿಕ ಸಮಸ್ಯೆ ಬಗ್ಗೆ ವಕೀಲರೊಂದಿಗೆ ಚರ್ಚೆ ಮಾಡುತ್ತೇವೆ. ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಅಂತಾ ಮುಖ್ಯ ಚುನಾವಣಾ ಅಧಿಕಾರಿ ಸ್ಪೀಕರ್ ಅವರ ಆದೇಶ ಓದಿ ಹೇಳಿದ್ದಾರೆ. ಸ್ಪೀಕರ್‌ ರಮೇಶ್ ಕುಮಾರ್ ಆದೇಶ ಸುಪ್ರೀಂ ಕೋರ್ಟ್ ನಲ್ಲಿ ಒಂದು ತಾಸು ನಿಲ್ಲುವುದಿಲ್ಲ. ರಮೇಶ್ ಕುಮಾರ್ ಕಾನೂನು ಬಾಹಿರವಾಗಿ ಆದೇಶ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನೂರಕ್ಕೆ ನೂರರಷ್ಟು ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಜಯ ಸಿಗುತ್ತೆ. ನಮ್ಮ‌ ಕ್ಷೇತ್ರದಲ್ಲಿ ನಾವೇ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಅಂತಾ ತೀರ್ಮಾನ ಮಾಡಿಲ್ಲ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ