ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಿ; ಇನ್ಸಪೆಕ್ಟರ್‌ ಸುನೀಲ

ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ಸದುಪಯೋಗಪಡಿಸಿಕೊಳ್ಳಬೇಕು.

Team Udayavani, Aug 17, 2022, 2:10 PM IST

ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಿ; ಇನ್ಸಪೆಕ್ಟರ್‌ ಸುನೀಲ

ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್‌ ಸುನೀಲ ಪಾಟೀಲ ಅಭಿಪ್ರಾಯಪಟ್ಟರು.

ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು.

ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಯಶಸ್ಸು ಸಾಧಿಸಲು ಸಾಧ್ಯವಿದೆ. ಸರಿಯಾದ ಪಠ್ಯಕ್ರಮ ಇಟ್ಟುಕೊಂಡು ಸತತ ಪರಿಶ್ರಮದಿಂದ ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನೀವು ಈಗ ಶ್ರಮಪಟ್ಟರೆ ಮುಂದಿನ ಭವಿಷ್ಯ ಉಜ್ವಲ ಆಗಿರುತ್ತದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿ ಬೀಳಬಾರದು. ಕೆಟ್ಟ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಕೆಟ್ಟವರಾಗಲು ಕ್ಷಣ ಮಾತ್ರ ಸಾಕು. ಆದರೆ ಒಳ್ಳೆಯವರಾಗಲು ಅನೇಕ ವರ್ಷಗಳು ಬೇಕಾಗುತ್ತವೆ. ನಿಮ್ಮ ತಂದೆ, ತಾಯಿ, ಶಿಕ್ಷಕರು, ಶಾಲೆಯ ಹೆಸರನ್ನು ಉನ್ನತ ಮಟ್ಟಕ್ಕೆ ಏರಿಸಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ತಂದೆಯವರಾದ ದಿ| ಬಾಳಾಸಾಹೇಬ ಪಾಟೀಲ ಅವರ ಸ್ಮರಣಾರ್ಥ ಪ್ರಾಯೋಜಕತ್ವದಲ್ಲಿ ಪತ್ರಿಕೆಗಳು ನಿಮಗೆ ತಲುಪಲಿವೆ. ಇದರ ಸದುಪಯೋಗ ಆಗಬೇಕು ಎಂದರು. ಉದಯವಾಣಿ ಜಿಲ್ಲಾ ವರದಿಗಾರ ಭೆ„ರೋಬಾ ಕಾಂಬಳೆ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ಅನುಕೂಲಕರವಾಗಿದೆ.

ಶಿಕ್ಷಣ ಮಾರ್ಗದರ್ಶಿ ಜತೆಗೆ ಇತರೆ ಸುದ್ದಿಗಳನ್ನು ಓದಿ ಪ್ರಚಲಿತ ವಿದ್ಯಮಾನಗಳ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಟಾಪರ್‌ಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು.

ಪ್ರಭಾರಿ ಮುಖ್ಯೋಪಾಧ್ಯಾಯರಾದ ದೇವಮ್ಮ ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತರಗತಿಯಲ್ಲಿ ಕಲತಿದ್ದನ್ನು ಮನೆಯಲ್ಲಿ ಓದಿ, ಅರ್ಥೈಸಿಕೊಳ್ಳಬೇಕು. ಶಿಕ್ಷಣ ಮಾರ್ಗದರ್ಶಿಯ ಲಾಭ ಪಡೆದುಕೊಳ್ಳಬೇಕು ಎಂದರು. ಶಿಕ್ಷಕಿ ಸುಧಾ ಹೆಬ್ಬಳ್ಳಿ, ವೈ.ಬಿ. ಪೆಂಟಿ, ಅನುಸೂಯಾ ಹತ್ತಿಕಾಳ, ಪಿ.ಜಿ. ಖೋತ ಸೇರಿದಂತೆ ಇತರರು ಇದ್ದರು. ಶಿಕ್ಷಕ ಎ.ವೈ. ಅವತಾಳೆ ನಿರೂಪಿಸಿದರು. ಅಕ್ಕಮ್ಮ ಕುರಣಿ ವಂದಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.