ಅನುದಾನ ಬಿಡುಗಡೆಗೆ ಮನವಿ
Team Udayavani, Dec 9, 2019, 1:04 PM IST
ಚಿಕ್ಕೋಡಿ: ರಾಜ್ಯದ ಅಂಗನವಾಡಿ ಕಟ್ಟಡಗಳಿಗೆ ಪುನನಿರ್ಮಾಣ ಹಾಗೂ ನವೀಕರಣದ ಅವಶ್ಯಕವಿದ್ದು, ಕೂಡಲೇ ಕೇಂದ್ರ ಸಚಿವರು ಗಮನ ಹರಿಸಿ ಸೂಕ್ತ ಅನುದಾನ ಬಿಡುಗಡೆ ಮಾಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನಗೆ ಮನವಿ ಮಾಡಿದರು.
ನವ ದೆಹಲಿಯಲ್ಲಿ ಹಣಕಾಸು ಮತ್ತು ಕಾಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಾಲಾ ಸೀತಾರಾಮನವರನ್ನು ಸಚಿವೆ ಶಶಿಕಲಾ ಜೊಲ್ಲೆ, ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ಮಾಡಿ ರಾಜ್ಯದ ಅಂಗನವಾಡಿ ಕಟ್ಟಡಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಬಾಕಿ ಇರುವ ಹಣಕಾಸಿನ ಪ್ರಸ್ತಾವಣೆ ಕುರಿತು ಚರ್ಚೆ ನಡೆಸಿದರು.
ಬಡ ಕುಟುಂಬದ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ ಪೋಷಿಸುತ್ತಿರುವ ರಾಜ್ಯ ಅಂಗನವಾಡಿ ಕಟ್ಟಡಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಕೇಂದ್ರ ಸಚಿವರಿಗೆ ವಿವರಿಸಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ ಅವರು ಶೀಘ್ರವಾಗಿ ಪ್ರಸ್ತಾವಣೆ ಕಡತಗಳನ್ನು ಪರಿಶೀಲಿಸಿ ಅನುದಾನ ನೀಡುವ ಭರವಸೆ ನೀಡಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಇದ್ದರು.