ಐಟಿ ಪಾರ್ಕ್ ಸ್ಥಾಪನೆಗೆ ಮನವಿ
Team Udayavani, Oct 13, 2019, 12:03 PM IST
ಬೆಳಗಾವಿ: ನಗರದಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಉಪ ಮುಖ್ಯಮಂತ್ರಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ಥನಾರಾಯಾಣ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಅವರು, ಬೆಳಗಾವಿಯಲ್ಲಿ ಐಟಿ-ಪಾರ್ಕ್ ಸ್ಥಾಪಿಸುವ ಸಂಬಂಧ ತಮ್ಮ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ಆಯೋಜಿಸುವಂತೆ ಮನವಿ ಮಾಡಿದರು. ಬೆಳಗಾವಿಯು ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಇಲ್ಲಿ ಉತ್ತಮ ರೈಲ್ವೆ ಹಾಗೂ ವಿಮಾನ ಸೇವೆ ಲಭ್ಯವಿದೆ. ಸಂಪನ್ಮೂಲಗಳು ಸಹ ಸಮೃದ್ಧಿಯಾಗಿವೆ. ಹೀಗಿರುವಾಗ ಐಟಿ ಪಾರ್ಕ್ ಸ್ಥಾಪನೆ ಮಾಡಿದರೆ ಈ ಭಾಗದ ಅಭಿವೃದ್ಧಿಯ ಜೊತೆಗೆ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಲಿದೆ ಎಂದು ಹೇಳಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾಹಿತಿ ತಂತ್ರಜ್ಞಾನ ಸಚಿವರು ಆದಷ್ಟು ಬೇಗ ಬೆಂಗಳೂರಿನಲ್ಲಿ ಸಭೆ ನಡೆಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ