Thief: ಪಕ್ಕದ ಮನೆಗಳಿಗೆ ಬೀಗ ಹಾಕಿ ನಿವೃತ್ತ ಶಿಕ್ಷಕಿಯ ಮನೆಯ ನಗ ನಗದು ದೋಚಿದ ಕಳ್ಳರು…
Team Udayavani, Feb 19, 2024, 3:25 PM IST
ಸಂಕೇಶ್ವರ: ಅಕ್ಕ ಪಕ್ಕದ ಮನೆಗಳಿಗೇಲ್ಲ ಬೀಗ ಹಾಕಿದ ಖದೀಮರು ನಿವೃತ್ತ ಶಿಕ್ಷಕಿಯ ಮನೆಯಲ್ಲಿದ್ದ 70 ಗ್ರಾಂ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಹಣವನ್ನು ದೋಚಿರುವ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ರವಿವಾರ ತಡರಾತ್ರಿ ಖದೀಮರ ತಂಡವು ಅಕ್ಕ ಪಕ್ಕದ ಮನೆಗಳಿಗೆ ಹೊರಗಡೆಯಿಂದ ಬಾಗಿಲಿಗೆ ಬೀಗ ಹಾಕಿ ನಿವೃತ್ತ ಶಿಕ್ಷಕಿ ಆಶಾ ಮೋಹಿತೆ ಎಂಬುವರ ಮನೆಗೆ ಹಾಕಲಾಗಿದ್ದ ಬೀಗ ಮುರಿದು ಮನೆಯಲ್ಲಿನ ಕಪಾಟಿನಲ್ಲಿ ಇರಿಸಲಾಗಿದ್ದ ಸುಮಾರು 70 ಗ್ರಾಂ (7 ತೊಲೆ) ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದ ಸಂಕೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿದ್ದು ಖದೀಮರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದಾರೆ.
ಇದನ್ನೂ ಓದಿ: Hubli; ವಸತಿ ಶಾಲೆಗಳ ದ್ವಾರ ಬರಹ ಬದಲಾವಣೆ ಸಮರ್ಥನೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ