ಬೆಳಗಾವಿಯಲ್ಲಿ ಮಸೀದಿ ಮೇಲೆ ಕೇಸರಿ ಧ್ವಜ, ಉದ್ವಿಗ್ನ ವಾತಾವರಣ; ಪ್ರಕರಣ ದಾಖಲು
Team Udayavani, May 11, 2022, 5:28 PM IST
ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿ ಮಸೀದಿಯ ಮೇಲೆ ಬುಧವಾರದಂದು ರಾಜ್ಯದಲ್ಲಿ ಧ್ವನಿವರ್ಧಕದ ಗದ್ದಲದ ನಡುವೆ ಕೇಸರಿ ಧ್ವಜ ಹಾರಿಸಿರುವುದು ಕಂಡುಬಂದಿದೆ.
ಬುಧವಾರ ಬೆಳಗಿನ ಜಾವ 3.30ರಿಂದ 5.30ರ ನಡುವೆ ದುಷ್ಕರ್ಮಿಗಳು ಧ್ವಜ ಹಾಕಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಮಸೀದಿ ಖಾಜಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಉದ್ವಿಗ್ನತೆ ಉಂಟಾಗುವುದನ್ನು ತಪ್ಪಿಸಲು ಪೊಲೀಸರು ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳ ಮುಖಂಡರ ನಡುವೆ ಶಾಂತಿ ಸಭೆ ನಡೆಸಿದ್ದಾರೆ.
ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ