ಸರಸ್ವತಿ ವಾಚನಾಲಯ ಕಾರ್ಯ ಪ್ರಶಂಸನಾರ್ಹ

Team Udayavani, Feb 24, 2019, 9:35 AM IST

24-february-15.jpg

ಬೆಳಗಾವಿ: ಇಂದಿನ ತಾಂತ್ರಿಕ ಯುಗದಲ್ಲಿ ಅಧ್ಯಯನ ಪ್ರವೃತ್ತಿ ಕಡಿಮೆಯಾಗುತ್ತಿದೆ. ಓದುವುದರಿಂದ ಜ್ಞಾನಿಗಳ, ವಿಚಾರವಾದಿಗಳ ಮಹತ್ವದ ಒಳ್ಳೆಯ ವಿಚಾರಗಳು ನಮಗೆ ಲಭ್ಯವಾಗುತ್ತವೆ. ಗುರುಗಳ ಆಶಿರ್ವಾದ ನಮ್ಮ ಮೇಲಿರುತ್ತದೆ. ಶಾಲೆಯ ಓದಿಗಿಂತ ಜೀವನದ ಓದು ಹೆಚ್ಚು ಕಲಿಸುತ್ತದೆ ಎಂದು ಹಿರಿಯ ಪತ್ರಕರ್ತ ಕಿರಣ ಠಾಕೂರ ಹೇಳಿದರು.

ನಗರದ ಶಹಪೂರದ ಸರಸ್ವತಿ ವಾಚನಾಲಯ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಮಾಯಿ ಠಾಕೂರ ಸಭಾಗೃಹ ನವೀಕರಣ, ಡಾ| ಶಕುಂತಲಾ ಗಿಜರೆ ಸಭಾಗೃಹ ಉದ್ಘಾಟನೆ ಹಾಗೂ ಬೆಳಗಾವಿ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಓದುವ ಹವ್ಯಾಸ ಬೆಳೆಸುವ ಕಾರ್ಯವನ್ನು ಹಲವಾರು ದಶಕಗಳಿಂದ ಮಾಡುತ್ತ ಬಂದಿರುವ ಸರಸ್ವತಿ ವಾಚನಾಲಯದ ಕೆಲಸ ಪ್ರಶಂಸನಾರ್ಹ ಎಂದರು.

ಅತಿಥಿಗಳಾಗಿ ಆಗಮಿಸಿದ್ದ ಉದ್ಯಮಿ ಮಲ್ಲಿಕಾರ್ಜುನ ಜಗಜಂಪಿ ಮಾತನಾಡಿ, ಧರ್ಮಯೋಗ, ಭಕ್ತಿಯೋಗ, ಧ್ಯಾನಯೋಗ ಹಾಗೂ ಜ್ಞಾನಯೋಗಗಳಲ್ಲಿ ಜ್ಞಾನಯೋಗ ಮಹತ್ತರವಾದುದು. ಈ ಮಹತ್ವದ ಕಾರ್ಯವನ್ನು ಹಲವಾರು ದಶಕಗಳನ್ನು ಸರಸ್ವತಿ ವಾಚನಾಲಯ ಮಾಡುತ್ತ ಬಂದಿದೆ ಎಂದು ಹೇಳಿದರು. 

ಸ್ತ್ರೀರೋಗ ತಜ್ಞ ಡಾ. ದತ್ತಪ್ರಸಾದ ಗಿಜರೆ ಮಾತನಾಡಿ, ಸರಸ್ವತಿಯನ್ನು ಒಲಿಸಿಕೊಂಡರೆ ಲಕ್ಷ್ಮೀ ತಾನಾಗಿಯೇ ಒಲಿದು ಬರುತ್ತಾಳೆ. ನಾವು ಓದುವ ಹವ್ಯಾಸವನ್ನು ಬೆಳಿಸಿಕೊಳ್ಳಬೇಕು. ಇಂದು ಬೆಳೆಯುತ್ತಿರುವ ತಾಂತ್ರಿಕತೆಯಿಂದ ಓದು ಕೊನೆಯ ಸ್ಥಾನ ಪಡೆದಿರುವುದು ಖೇದದ ಸಂಗತಿ. ಇಂತ ವಾತಾವರಣದಲ್ಲಿಯೂ ಸರಸ್ವತಿ ವಾಚನಾಲಯದವರು ಓದುವ ಅಭಿರುಚಿ ಬೆಳೆಸುತ್ತಿರುವ ಕಾರ್ಯ ಮೆಚ್ಚುವಂತಹದ್ದು ಎಂದರು.

ಇದೇ ಸಂದರ್ಭದಲ್ಲಿ ಕಿರಣ ಠಾಕೂರ ಅವರಿಗೆ ಬೆಳಗಾವಿ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಲ್ಲಿಕಾರ್ಜುನ ಜಗಜಂಪಿ, ಜಗದೀಶ ಕುಮಟೆ, ಪಿ.ಜಿ. ಕುಲಕರ್ಣಿ, ಸವಿತಾ, ಮಿಲಿಂದ ಗಾಡಗೀಳ, ಮಹೇಶ ನಾಯಿಕ, ಸುಧಾ ಬಾತಖಾಂಡೆ, ಸರಳಾ ಹೇರೇಕರ, ವಿಲಾಸ ಅಧ್ಯಾಪಕ, ಅಮಿತ ಜೈನ ಮುಂತಾದವರನ್ನು ಸನ್ಮಾನಿಸಲಾಯಿತು. ಜ್ಞಾನದೀಪ ಸ್ಮರಣ ಸಂಚಿಕೆಯನ್ನು ಪಿ. ಎಸ್‌. ಕುಲಕರ್ಣಿ ಬಿಡುಗಡೆ ಮಾಡಿದರು. ಡಾ| ದತ್ತಪ್ರಸಾದ ಗಿಜರೆ, ಸುಹಾಸ ಸಾಂಗ್ಲಿಕರ ಇದ್ದರು.ಪಿ. ಜಿ. ಕುಲಕರ್ಣಿ ಸ್ವಾಗತಿಸಿದರು. ಆನಂದರಾವ ಕುಲಕರ್ಣಿ ವಂದಿಸಿದರು. ಮೀರಾ ಅಜಗಾಂವಕರ ಪ್ರಿಯಾ ಕವಟೆಕರ ನಿರೂಪಿಸಿದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.