Sankeshwara; ಭಾರಿ ಅಗ್ನಿಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಆಹುತಿ
Team Udayavani, Feb 8, 2024, 11:13 PM IST
ಸಂಕೇಶ್ವರ : ಪಟ್ಟಣದ ಪ್ರಮುಖ ರಸ್ತೆಯಲ್ಲಿ ಇದ್ದ ಪಿಯುಸಿ ಪೈಪ್ ಅಂಗಡಿಯೊಂದಕ್ಕೆ ಆಕಸ್ಮಿಕ ವಾಗಿ ಬೆಂಕಿ ಬಿದ್ದ ಪರಿಣಾಮವಾಗಿ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಸಂಕೇಶ್ವರ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಸಂಗಮೇಶ್ವರ ಡ್ರೆಡರ್ಸ್ ಎಂಬ ಪಿಯುಸಿ ಪೈಪ್ ಅಂಗಡಿಗೆ ಗುರುವಾರ ರಾತ್ರಿ 8. 30ರ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಈ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.