ಬಿಮ್ಸ್ ಅವ್ಯವಸ್ಥೆ; ನಾಲ್ವರು ಮಂತ್ರಿಗಳು ಏಕೆ ಬೇಕು?
Team Udayavani, May 31, 2021, 7:16 PM IST
ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್ )ದಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುತ್ತೇನೆ ಎಂದಿದ್ದಾರೆ. ಮುಖ್ಯಮಂತ್ರಿಗಳೇ ಎಲ್ಲವನ್ನೂ ಮಾಡುವುದಾದರೇ ಜಿಲ್ಲೆಯ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಮಂತ್ರಿಗಳು ಬಿಮ್ಸ್‌ಗೆ ತೆರಳಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಬೇಕಿತ್ತು. ಕೆಲವು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿತ್ತು. ಎಲ್ಲವನ್ನೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ ಎಂದರು.
ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಿಯರೇ ಆಗಿರಬೇಕು. ಇದನ್ನು ನಾನು ಮೊದಲಿಂದಲೂ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಇದೇ ಕಾರಣದಿಂದ ಜಿಲ್ಲೆಯ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕಿತ್ತು. ಆದರೆ ಈ ಸರಕಾರಕ್ಕೆ ಜಿಲ್ಲೆಯ ಬಗ್ಗ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಮ್ಸ್ ಆಸ್ಪತ್ರೆ ಬಗ್ಗೆ ಸಾಕಷ್ಟು ದೂರು ಕೇಳಿಬರುತ್ತಿವೆ. ಅಲ್ಲಿನ ಅವ್ಯವಸ್ಥೆ ಬಗ್ಗೆ ಸುದ್ದಿಯಾಗಿದೆ. ಇಷ್ಟೆಲ್ಲ ಗೊತ್ತಿದ್ದರೂ ಜಿಲ್ಲೆಯ ಸಚಿವರು ಇದನ್ನು ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಈಗ ಮುಖ್ಯಮಂತ್ರಿಗಳು ನಾನೇ ಬಂದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ನಾಲ್ವರು ಸಚಿವರಿದ್ದು ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ
ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ
ಚಾ.ನಗರದಲ್ಲಿ ʼಬೈರಾಗಿʼ ವೀಕ್ಷಿಸಿದ ಶಿವಣ್ಣ: ಚಿತ್ರ ಪ್ರದರ್ಶನ ಯಾತ್ರೆಗೆ ಅದ್ದೂರಿ ಸ್ವಾಗತ
ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ
ಶಿವಮೊಗ್ಗ: ಮಂಡಗದ್ದೆ ಬಳಿಯ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ