ಹುಕ್ಕೇರಿ ಪ್ರಕಾಶಿಸಲು ಕೈ ಜೋಡಿಸಿದ ಸತೀಶ

Team Udayavani, May 12, 2019, 3:37 PM IST

Udayavani Kannada Newspaper

ಬೆಳಗಾವಿ: ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಪೈಪೋಟಿ ಕಾಣುತ್ತಿರುವ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಮುನ್ನಡೆಯ ವಿಚಾರವಾಗಿ ಬಹಳ ಕುತೂಹಲದ ಚರ್ಚೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ಪ್ರಚಾರ ಹಾಗೂ ಜನ ಬೆಂಬಲದ ಆಧಾರದ ಮೇಲೆ ಎಷ್ಟು ಮುನ್ನಡೆ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ

ಎಲ್ಲಕ್ಕಿಂತ ಮುಖ್ಯವಾಗಿ ಇದು ಸಚಿವ ಸತೀಶ ಜಾರಕಿಹೊಳಿ ಅವರ ಸ್ವಕ್ಷೇತ್ರ. ಸಹಜವಾಗಿಯೇ ಎಲ್ಲರ ಗಮನ ಇದರ ಮೇಲಿರುತ್ತದೆ. ಇದಲ್ಲದೇ ಪಕ್ಕದ ಹುಕ್ಕೇರಿಯ ಬಿಜೆಪಿ ಶಾಸಕ ಉಮೇಶ ಕತ್ತಿ ಹಾಗೂ ಅವರ ಸಹೋದರ ರಮೇಶ ಕತ್ತಿ ಅವರ ನಡೆ ಕೂಡ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅಷ್ಟೇ ಅಲ್ಲದೇ ಇದು ಚುನಾವಣೆ ಲೆಕ್ಕಾಚಾರದ ಮೇಲೆ ಕೂಡ ಪರಿಣಾಮ ಬೀರಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಹಳ ಕಡಿಮೆ ಮತಗಳ ಅಂತರದಿಂದ ಈ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಅಂತಹ ತಪ್ಪುಗಳಿಗೆ ಅವಕಾಶ ನೀಡದಂತೆ ಪ್ರಚಾರ ಮಾಡಿದೆ. ಕಾಂಗ್ರೆಸ್‌ ಅಭ್ಯರ್ಥಿಯ ಜೊತೆಗೆ ಸ್ಥಳೀಯ ಶಾಸಕರ ಜೊತೆ ಬಿಜೆಪಿ ಕಾರ್ಯಕರ್ತರು ಪೈಪೋಟಿ ನಡೆಸಿರುವುದರಿಂದ ಮತಗಳ ಮುನ್ನಡೆ ಲೆಕ್ಕಾಚಾರ ಬಹಳ ಕುತೂಹಲ ಮೂಡಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಒಂದೇ ಒಂದು ದಿನ ಪ್ರಚಾರ ಮಾಡದೇ ಬಹಳ ಪ್ರಯಾಸದಿಂದ ಜಯಗಳಿಸಿದ್ದ ಕಾಂಗ್ರೆಸ್‌ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿಗೆ ಲೋಕಸಭೆ ಚುನಾವಣೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆ. ಸತೀಶ ಅವರ ಮೇಲೆ ಬಹಳ ನಂಬಿಕೆ ಇಟ್ಟುಕೊಂಡಿರುವ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಯಮಕನಮರಡಿ ಕ್ಷೇತ್ರದಿಂದ ಹೆಚ್ಚಿನ ಮುನ್ನಡೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿಯಲ್ಲಿನ ಅಸಮಾಧಾನ ಹಾಗೂ ನಾಯಕರ ನಿರಾಸಕ್ತಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ, ವಿಧಾನಸಭೆ ಚುನಾವಣೆ ಪೆಟ್ಟಿನಿಂದ ಎಚ್ಚೆತ್ತುಕೊಂಡಿದ್ದ ಸತೀಶ ಜಾರಕಿಹೊಳಿ ಲೋಕಸಭೆ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದರು. ಕ್ಷೇತ್ರದ ಮೇಲಿನ ತಮ್ಮ ಹಿಡಿತ ಕಳೆದುಕೊಳ್ಳಬಾರದು ಎಂಬ ಉದ್ದೇಶದಿಂದ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿದರು. ಇದು ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ನೆರವಾಗಲಿದೆ ಎಂಬುದು ಕ್ಷೇತ್ರದಲ್ಲಿ ಕೇಳಿಬರುತ್ತಿರುವ ಮಾತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆ ಹಾಗೂ ರಾಜ್ಯ ನಾಯಕರ ಬೆಂಬಲ ಇಲ್ಲದೇ ಇದ್ದರೂ ಬಿಜೆಪಿ ಅಲ್ಪಮತಗಳ ಅಂತರದಿಂದ ಸೋಲು ಕಾಣಬೇಕಾಯಿತು. ಆಗ ಚುನಾವಣೆಯಲ್ಲಿ ಯಾವ ನಾಯಕರೂ ಪ್ರಚಾರಕ್ಕೆ ಬರಲಿಲ್ಲ. ಜೊತೆಗೆ ನಾಯಕರ ಮಧ್ಯೆ ಹೊಂದಾಣಿಕೆ ರಾಜಕಾರಣ ನಡೆಯಿತು. ಅದೇ ರೀತಿ ಲೋಕಸಭೆ ಚುನಾವಣೆ ಸಮಯದಲ್ಲೂ ರಾಜ್ಯ ಹಾಗೂ ಜಿಲ್ಲಾ ನಾಯಕರು ಕ್ಷೇತ್ರಕ್ಕೆ ಬರಲೇ ಇಲ್ಲ ಎಂಬ ಅಸಮಾಧಾನ ಕಾರ್ಯಕರ್ತರಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಹಿನ್ನಡೆ ಕಂಡರೆ ಅದಕ್ಕೆ ನಾಯಕರೇ ಕಾರಣ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳುತ್ತಿದೆ.

ಕೇಶವ ಆದಿ

ಟಾಪ್ ನ್ಯೂಸ್

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ

asaduddin-owaisi

Asaduddin Owaisi; ಸದನದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಓವೈಸಿ; ಬಿಜೆಪಿ ಆಕ್ಷೇಪ

BJP-protest

Congress Government: ತೈಲ, ಹಾಲಿನ ದರ ಹೆಚ್ಚಿಸಿ ಬಡವರಿಗೆ ಅನ್ಯಾಯ 

10-koratagere

Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

6-Chikodi

Chikodi: ತುರ್ತು ಪರಿಸ್ಥಿತಿ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

Chikkodi; ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

D.K. Shivakumar ನಾಟಕ ಚನ್ನಪಟ್ಟಣದಲ್ಲಿ ನಡೆಯದು: ಆರ್‌. ಅಶೋಕ್‌

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ

asaduddin-owaisi

Asaduddin Owaisi; ಸದನದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಓವೈಸಿ; ಬಿಜೆಪಿ ಆಕ್ಷೇಪ

BJP-protest

Congress Government: ತೈಲ, ಹಾಲಿನ ದರ ಹೆಚ್ಚಿಸಿ ಬಡವರಿಗೆ ಅನ್ಯಾಯ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.