ಸವದತ್ತಿ: ಯಲ್ಲಮ್ಮ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆ ಜಾತ್ರೆಗೆ ಜನಸಾಗರ

ಭಂಡಾರ ಹಚ್ಚಿಕೊಂಡು, ಹರಕೆ ತೀರಿಸುವ ಕಾರ್ಯಗಳು ಭರದಿಂದ ಸಾಗಿದ್ದವು.

Team Udayavani, Feb 6, 2023, 5:15 PM IST

ಸವದತ್ತಿ: ಯಲ್ಲಮ್ಮ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆ ಜಾತ್ರೆಗೆ ಜನಸಾಗರ

ಸವದತ್ತಿ: ಸಪ್ತ ಕೊಳ್ಳದ ಅಧಿದೇವತೆ ರೇಣುಕಾ ಯಲ್ಲಮ್ಮಳ ಸನ್ನಿಧಾನದಲ್ಲಿ ರವಿವಾರ ಜರುಗಿದ ಭರತ ಹುಣ್ಣಿಮೆ ಜಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಕರ್ನಾಟಕ ಮಾತ್ರವಲ್ಲ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ ಸೇರಿ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಕಾಲ್ನಡಿಗೆ, ಚಕ್ಕಡಿ, ಟ್ರ್ಯಾಕ್ಟರ್‌ ಹಾಗೂ ಇತರೆ ವಾಹನಗಳ ಮೂಲಕ ಗುಡ್ಡಕ್ಕೆ ಆಗಮಿಸಿ ದೇವಿ ಕೃಪೆಗೆ ಪಾತ್ರರಾದರು.

ಕಣ್ಣು ಹಾಯಿಸಿದ ಕಡೆಯೆಲ್ಲ ಜನ ಸಮೂಹ. ಉಧೋ ಉಧೋ ಯಲ್ಲಮ್ಮ ನಿನ್ನಾಲ್ಕುಧೋ ಎಂಬ ದೇವಿಯ ನಾಮಸ್ಮರಣೆ ದಶ ದಿಕ್ಕುಗಳಲ್ಲಿ ಪ್ರತಿಧ್ವನಿಸಿತು. ಭಕ್ತ ಸಮೂಹ ಕುಟುಂಬ ಸಮೇತರಾಗಿ ಅಮ್ಮನ ಸನ್ನಿ ಧಿಗೆ ಬಂದು ವಿವಿಧ ಖಾದ್ಯ ತಯಾರಿಸಿ ನೈವೇದ್ಯ ಮತ್ತು ಪರಡಿ ತುಂಬಿಸಿದರು. ಸಂಪ್ರದಾಯದಂತೆ ಪೂಜಾದಿ ಕೈಂಕರ್ಯ ನಡೆಸಿ ಜಗವನ್ನು ರಕ್ಷಿಸಮ್ಮಾ ಜಗದಮ್ಮಾ ಎಂದು ಬೇಡಿಕೊಂಡರು.

ಬೆಳಿಗ್ಗೆ ಜೋಗುಳಬಾವಿ, ಎಣ್ಣೆ ಹೊಂಡದಲ್ಲಿ ಪವಿತ್ರ ಸ್ನಾನಗೈದ ಭಕ್ತರು ಬಳಿಕ ದೇವಿ ದರ್ಶನ ಪಡೆದು ಪುನೀತರಾದರು. ಜೋಗುತಿಯರು ದೇವಿಯ ಮೂರ್ತಿ ಹೊತ್ತು, ವಿವಿಧ ವಾದ್ಯಮೇಳಗಳೊಂದಿಗೆ ದೇವಸ್ಥಾನದತ್ತ ಹೆಜ್ಜೆ ಹಾಕಿದ್ದರು. ಭಂಡಾರ ಹಚ್ಚಿಕೊಂಡು, ಹರಕೆ ತೀರಿಸುವ ಕಾರ್ಯಗಳು ಭರದಿಂದ ಸಾಗಿದ್ದವು.

ಕುಂಕುಮ-ಭಂಡಾರ ವ್ಯಾಪಾರ ಬಲು ಜೋರು
ಅಮ್ಮನಿಗೆ ಪ್ರಿಯವೆನಿಸಿದ ಕುಂಕುಮ-ಭಂಡಾರ ವ್ಯಾಪಾರ ಬಲು ಜೋರಾಗಿತ್ತು. ದೇವಸ್ಥಾನ ಸುತ್ತಲಿರುವ ಕುಂಕುಮ-ಭಂಡಾರದ ಅಂಗಡಿಗಳಿಗೆ ಮುಗಿ ಬಿದ್ದು ಖರೀದಿ ನಡೆಸಿದರು. ಯಲ್ಲಮ್ಮ ದೇವಿ ಮುತ್ತೈದೆಯಾದ ಪೌರಾಣಿಕ ಹಿನ್ನೆಲೆಯಲ್ಲಿ ಭಕ್ತರು ಹಳೆ ಪರಡಿ ಬದಲಾಯಿಸಿ ಹೊಸ ಪರಡಿ, ಹಣ್ಣು, ಕಾಯಿ, ಬಳೆ, ಕುಂಕುಮ-ಭಂಡಾರ ಖರೀದಿಸಿ ಪರಡಿ ತುಂಬಿಸುವ ಕಾರ್ಯ ನಡೆಸಿದರು.

ಸದ್ದು ಮಾಡಿದ ಹಸಿರು ಬಳೆಗಳು
ಮುತ್ತೈದೆ ಹುಣ್ಣಿಮೆಯೆಂದು ಕರೆಯುವ ಭರತ ಹುಣ್ಣಿಮೆಯಂದು ಯಲ್ಲಮ್ಮ ದೇವಿ ಪತಿ, ಋಷಿ ಜಮದಗ್ನಿ ಮರುಜನ್ಮ ಪಡೆಯುತ್ತಾರೆ. ಇದರ ಪ್ರತೀಕವಾಗಿ ಪ್ರತಿವರ್ಷ ಭರತ ಹುಣ್ಣಿಮೆ ದಿನ ಎಲ್ಲ ಮುತ್ತೈದೆಯರು ದೇವಸ್ಥಾನಕ್ಕೆ ಬಂದು ಮೊದಲಿದ್ದ ಬಳೆಗಳನ್ನು ತೆಗೆಸಿ, ಹೊಸ ಹಸಿರು ಬಳೆಗಳನ್ನು ಧರಿಸುವ ವಾಡಿಕೆ ಇದೆ. ಹೀಗಾಗಿ ಗುಡ್ಡದಲ್ಲಿ ಹಸಿರು ಬಳೆಗಳ ವ್ಯಾಪಾರ ಭಾರೀ ಸದ್ದು ಮಾಡಿತು.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-bommai

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ

2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

1-qqewqewqe

ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್