ಪ್ರವಾಹ ಪರಿಸ್ಥಿತಿಗೆ ತೀವ್ರ ಕಟ್ಟೆಚ್ಚರ

•ದತ್ತ ದೇವಸ್ಥಾನ ಜಲಾವೃತ •ನದಿ ನೀರಿನ ಮಟ್ಟ 6 ಅಡಿ ಏರಿಕೆ •70 ಸಾವಿರ ಕ್ಯೂಸೆಕ್‌ ಒಳಹರಿವು

Team Udayavani, Jul 10, 2019, 10:21 AM IST

bg-tdy-3..

ಚಿಕ್ಕೋಡಿ: ಮಹಾರಾಷ್ಟ್ರದ ಜಲಘಟ್ಟದ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಒಡಲುಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಚಿಕ್ಕೋಡಿ ಉಪವಿಭಾಗ ತೀವ್ರ ಕಟ್ಟೆಚರ ವಹಿಸಿದೆ.

ಮಹಾರಾಷ್ಟ್ರದಿಂದ ಜಲಾನಯನ ಪ್ರದೇಶಗಳಾದ ರಾಧಾನಗರಿ, ಪಾಟಗಾಂವ, ಕಾಳಮ್ಮವಾಡಿ ಭಾಗದಲ್ಲಿ ಭಾರಿ ಮಳೆ ಸುರಿಯುವುದರಿಂದ ಕೃಷ್ಣಾ, ದೂಧಗಂಗಾ, ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಮಂಗಳವಾರ ಆರು ಅಡಿಯಷ್ಟು ನೀರು ಏರಿಕೆ ಕಂಡಿದೆ. ಸುಕ್ಷೇತ್ರ ನರಸಿಂಹವಾಡಿ ಹತ್ತಿರ ಪಂಚಗಂಗಾ ನದಿಯಲ್ಲಿಯೂ ಕೂಡಾ ನೀರಿನ ಪ್ರಮಾಣ ಏರಿಕೆ ಕಂಡಿದೆ.

ಈಗಾಗಲೇ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜದಿಂದ ರಾಜ್ಯಕ್ಕೆ 55 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇಧಗಂಗಾ ನದಿಯಿಂದ 15 ಸಾವಿರ ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 64 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಅಲ್ಲಿಂದ 6850 ಕ್ಯೂಸೆಕ್‌ ನೀರನ್ನು ಆಲಮಟ್ಟಿಯಿಂದ ಹೊರಬಿಡಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ತಿಳಿಸಿದರು.

ಕಳೆದ ಹತ್ತು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ರಾಜ್ಯದ ಗಡಿ ಭಾಗದಲ್ಲಿಯೂ ಸಹ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತಿದೆ. ಪ್ರತಿ ದಿನ ಹೋಲಿಕೆ ಮಾಡಿದರೇ 10 ಸಾವಿರ ಕ್ಯೂಸೆಕ್‌ ನೀರು ಹರಿದು ಬರುವುದರಿಂದ ಸಂಭವನೀಯ ಪ್ರವಾಹ ಉಂಟಾಗುವುದು ಸಾಧ್ಯತೆ ಹೆಚ್ಚಿದೆ. ಇದರಿಂದ ನದಿ ತೀರದ ಕಡೆಗಳಲ್ಲಿ ತಾಲೂಕಾಡಳಿತ ಪೂರ್ಣ ಪ್ರಮಾಣದ ಕಟ್ಟೆಚರ ವಹಿಸಿದೆ.

ಸೇತುವೆಗಳ ಮೇಲೆ ನಾಲ್ಕು ಅಡಿಯಷ್ಟು ನೀರು: ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಾಗಿರುವದರಿಂದ ಕಲ್ಲೋಳ-ಯಡೂರ ಸೇತುವೆ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ ಸೇತುವೆಗಳು ಮುಳುಗಡೆಗೊಂಡಿವೆ. ಎಲ್ಲ ಸೇತುವೆಗಳ ಮೇಲೆ ನಾಲ್ಕ್ತ್ರೈದು ಅಡಿಯಷ್ಟು ನೀರು ಹರಿಯುತ್ತದೆ.

ಮಳೆ ಪ್ರಮಾಣ: ಕೋಯ್ನಾ-95 ಮಿಮೀ, ವಾರಣಾ-154 ಮಿಮೀ, ಕಾಳಮ್ಮವಾಡಿ- 184 ಮಿಮೀ, ನವಜಾ-83 ಸಾಂಗ್ಲೀ-6 ಮಿಮೀ, ರಾಧಾನಗರಿ-130 ಮಿಮೀ, ಪಾಟಗಾಂವ-114 ಮಿಮೀ, ಮಹಾಬಲೇಶ್ವರ-128ಮಿಮೀ, ಕೊಲ್ಲಾಪುರ-18 ಮಿಮೀ ಮಳೆ ಆಗಿದೆ.

ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-1.0 ಮಿಮೀ, ಅಂಕಲಿ-8.6 ಮಿಮೀ, ನಾಗರಮುನ್ನೋಳ್ಳಿ-1.8 ಮಿಮೀ, ಸದಲಗಾ-5.5 ಮಿಮೀ, ಗಳತಗಾ-11.0 ಮಿಮೀ, ಜೋಡಟ್ಟಿ-1.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-5.0 ಮಿಮೀ, ನಿಪ್ಪಾಣಿ ಎಆರ್‌ಎಸ್‌-10.6 ಮಿಮೀ, ಸೌಂದಲಗಾ-17.1 ಮಿಮೀ ಈ ರೀತಿಯಾಗಿ ಮಳೆಯಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.