ಆರು ಸೇತುವೆ ಜಲಾವೃತ

Team Udayavani, Jul 9, 2019, 8:29 AM IST

bg-tdy-3..

ಚಿಕ್ಕೋಡಿ: ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ದತ್ತ ಮಂದಿರ ಕೃಷ್ಣಾ ಮತ್ತು ಪಂಚಗಂಗಾ ನದಿಯಲ್ಲಿ ಜಲಾವೃತ ಗೊಂಡಿದೆ.

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಗಡಿ ಭಾಗದ ನದಿಗಳು ಉಕ್ಕಿ ಹರಿಯುತ್ತ್ತಿವೆ. ಕೃಷ್ಣಾ, ದೂಧಗಂಗಾ, ವೇಧಗಂಗಾ ನದಿ ನೀರಿನ ಮಟ್ಟ ನಾಲ್ಕು ಅಡಿ ಏರಿಕೆ ಕಂಡಿದೆ. ಆರು ಸೇತುವೆ ಜಲಾವೃತವಾಗಿವೆ.

ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರ ಹಾಗೂ ರಾಜ್ಯದ ಗಡಿ ಭಾಗದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಅದರಂತೆ ಮಹಾರಾಷ್ಟ್ರದ ನರಸಿಂಹವಾಡಿ ಹತ್ತಿರ ಹರಿಯುವ ಪಂಚಗಂಗಾ ನದಿ ನೀರಿನ ಮಟ್ಟವೂ ಗಣನೀಯ ಏರಿಕೆ ಕಂಡಿದೆ. ಪಂಚಗಂಗಾ ನದಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಕೃಷ್ಣಾ ನದಿಗೆ ಸೇರುತ್ತದೆ. ಹೀಗಾಗಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಾಗುತ್ತದೆ.

ಮಹಾರಾಷ್ಟ್ರದಿಂದ ಜಲಾನಯನ ಪ್ರದೇಶಗಳಾದ ರಾಧಾನಗರಿ, ಪಾಟಗಾಂವ, ಕಾಳಮ್ಮವಾಡಿ ಭಾಗದಲ್ಲಿ ಭಾರಿ ಮಳೆ ಸುರಿಯುವುದರಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯರಲಾರಂಭಿವೆ. ದೂಧಗಂಗಾ ನದಿ ನೀರಿನ ಮಟ್ಟ ನಾಲ್ಕು ಅಡಿಯಷ್ಟು ಹೆಚ್ಚಾದರೆ ಕೃಷ್ಣಾ ನದಿಯಲ್ಲಿಯೂ ನೀರಿನ ಪ್ರಮಾಣ ಏರಿಕೆ ಕಂಡು ಬರುವುದರಿಂದ ನದಿ ಒಡಲುಕ್ಕಿ ಹರಿಯುತ್ತವೆ.ಆರು ಸೇತುವೆಗಳು ಜಲಾವೃತ: ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಕಲ್ಲೋಳ-ಯಡೂರ ಸೇತುವೆ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ ನಿರ್ಮಿಸಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇದಗಂಗಾ ನದಿಗೆ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ ಸೇತುವೆಗಳು ಮುಳುಗಡೆಗೊಂಡು ನಾಲ್ಕು ದಿನಗಳು ಕಳೆದಿವೆ. ಎಲ್ಲ ಸೇತುವೆಗಳ ಮೇಲೆ ನಾಲ್ಕೈದು ಅಡಿಯಷ್ಟು ನೀರು ಹರಿಯುತ್ತಿದೆ. ಇದೇ ರೀತಿ ರಾಧಾನಗರಿ ಪ್ರದೇಶದಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿದ್ದರೆ ಚಿಕ್ಕೋಡಿ ತಾಲೂಕಿನ ಮತ್ತೆ ಎರಡು ಸೇತುವೆಗಳು ಮುಳುಗುವ ಸಾಧ್ಯತೆ ಇದೆ.ದೇವಸ್ಥಾನಗಳಲ್ಲಿ ನೀರು: ದೂಧಗಂಗಾ ನದಿ ಒಡಲಿನಲ್ಲಿರುವ ಯಕ್ಸಂಬಾದ ಮುಲ್ಲಾನಕ್ಕಿ ದರ್ಗಾ ಜಲಾವೃತಗೊಂಡಿದೆ. ಕಲ್ಲೋಳ ಬಳಿ ಇರುವ ಕೃಷ್ಣಾ ನದಿ ನೀರಿನಲ್ಲಿ ದತ್ತ ದೇವಸ್ಥಾನದ ಬಳಿ ನೀರು ನುಗ್ಗಿದೆ. ಹೀಗಾಗಿ ರೈತರು ಪಂಪಸೆಟ್‌ಗಳನ್ನು ತೆರವುಗೊಳಿಸುತ್ತಿದ್ದಾರೆ.

ಈಗಾಗಲೇ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 59653 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಅದರಂತೆ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 45 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ ಎಂದು ತಹಶೀಲ್ದಾರ ಡಾ. ಸಂತೋಷ ಬಿರಾದಾರ ಮಾಹಿತಿ ನೀಡಿದರು.ಮಳೆ ಪ್ರಮಾಣ: ಕೊಯ್ನಾ-139 ಮಿಮೀ, ವಾರಣಾ-155 ಮಿಮೀ, ಕಾಳಮ್ಮವಾಡಿ- 136 ಮಿಮೀ, ನವಜಾ-115, ಸಾಂಗ್ಲಿ-6 ಮಿಮೀ, ರಾಧಾನಗರಿ-100 ಮಿಮೀ, ಪಾಟಗಾಂವ-111 ಮಿಮೀ, ಮಹಾಬಲೇಶ್ವರ-127ಮಿಮೀ, ಕೊಲ್ಲಾಪೂರ-29 ಮಿಮೀ ಮಳೆ ಆಗಿದೆ.ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-2.5 ಮಿಮೀ, ಅಂಕಲಿ-4.2 ಮಿಮೀ, ನಾಗರಮುನ್ನೋಳ್ಳಿ-0.8 ಮಿಮೀ, ಸದಲಗಾ-10.2 ಮಿಮೀ, ಗಳತಗಾ-3.0 ಮಿಮೀ, ನಿಪ್ಪಾಣಿ ಪಿಡಬ್ಲುಡಿ-9.6 ಮಿಮೀ, ನಿಪ್ಪಾಣಿ ಎಆರ್‌ಎಸ್‌-10.6 ಮಿಮೀ, ಸೌಂದಲಗಾ-5.3 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.