ಸಮುದಾಯ ಭವನ ಕಾಮಗಾರಿಗೆ ಚಾಲನೆ

Team Udayavani, Sep 8, 2019, 10:07 AM IST

ಬೈಲಹೊಂಗಲ: ನನಗುಂಡಿಕೊಪ್ಪ ಗ್ರಾಮದಲ್ಲಿ ಸಮುದಾಯ ಭವನ ಕಾಮಗಾರಿಗೆ ಮಾಜಿ ಶಾಸಕ ಡಾ| ವಿಶ್ವನಾಥ ಪಾಟೀಲ ಚಾಲನೆ ನೀಡಿದರು.

ಬೈಲಹೊಂಗಲ: ಯಾರು ಎಷ್ಟೇ ಆರೋಪಗಳನ್ನು ಮಾಡಿದರೂ ತಲೆಕೆಡಿಸಿಕೊಳ್ಳದೆ ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದೆ. ಎಲ್ಲ ವರ್ಗದವರ ಸರ್ವಾಂಗೀಣ ಅಭಿವೃದ್ಧಿಯೇ ಸಿಎಂ ಯಡಿಯೂರಪ್ಪನವರ ಕನಸಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಹೇಳಿದರು.

ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಶಿವಾನಂದ ಮಠದ ಬಳಿ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಈ ಅವಧಿಯಲ್ಲಿ ಅಂದಾಜು 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸುಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನಿಂಗಪ್ಪ ಚೌಡಣ್ಣವರ ಮಾತನಾಡಿ, ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಅವರು ಕೂಡ ಗ್ರಾಮಕ್ಕೆ 5 ಲಕ್ಷ ರೂ.ಗಳ ಅನುದಾನ ನೀಡಿದ್ದಾರೆ. ಅದರ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು. ಗ್ರಾಪಂ ಸದಸ್ಯ ಮಹೇಶ ಯಡವಟ್ಟಿ, ಮುಖಂಡರಾದ ಅರ್ಜುನಗೌಡ ಪಾಟೀಲ, ಈರನಗೌಡ ಪಾಟೀಲ, ಮಹಾಂತೇಶ ಅಸುಂಡಿ, ಉದಯ ಕೊಟಬಾಗಿ, ಮುರಿಗೆಪ್ಪ ಅಡಕಿ, ಮುತ್ತು ಚುಳಕಿಮಠ, ವಿಠuಲ ಅಡಕಿ, ವಿರುಪಾಕ್ಷಿ ಆರೇರ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ