ಒತ್ತಡದಿಂದ ಹೇಳಿಕೆ ವಾಪಸ್‌ ಪಡೆದಿಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ನನ್ನ ವೈಯಕ್ತಿಕ ಹೇಳಿಕೆ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ...

Team Udayavani, Nov 10, 2022, 9:31 PM IST

Satish Jaraki

ಬೆಳಗಾವಿ: ಹಿಂದೂ ಪದದ ಬಗ್ಗೆ ನಾನು ನೀಡಿದ್ದ ಹೇಳಿಕೆ ವಾಪಸ್‌ ಪಡೆದಿದ್ದರ ಹಿಂದೆ ಯಾವುದೇ ಒತ್ತಡ ಇರಲಿಲ್ಲ. ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದು ಎಂಬ ಏಕೈಕ ಉದ್ದೇಶದಿಂದ ನನ್ನ ಹೇಳಿಕೆ ವಾಪಸ್‌ ಪಡೆದು ವಿಷಾದ ವ್ಯಕ್ತಪಡಿಸಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ನೀಡಿದ್ದ ಹೇಳಿಕೆ ಹಿಂದಕ್ಕೆ ಪಡೆಯಲು ಸರ್ಕಾರ ಅಥವಾ ಯಾರ ಒತ್ತಡವೂ ಇರಲಿಲ್ಲ. ಪಕ್ಷಕ್ಕೆ ಹಾನಿ ಆಗಬಾರದೆಂದು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಸ್ವತಃ ನಾನೇ ಈ ನಿರ್ಣಯ ಕೈಗೊಂಡಿದ್ದೇನೆ. ನಿಪ್ಪಾಣಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ನಾನು ನೀಡಿದ್ದ ಹೇಳಿಕೆಯನ್ನು ಬೇರೆ ರೀತಿ ತಿರುಚಿ ಹೇಳುವ ಕೆಲಸವಾಯಿತು. ಇದರಿಂದ ವಿವಾದ ಸೃಷ್ಟಿಯಾಯಿತು. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲಾಯಿತು. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಈ ಹೇಳಿಕೆಯನ್ನು ಹಿಂದಕ್ಕೆ ಪಡೆದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದರು.

ನಿಪ್ಪಾಣಿಯಲ್ಲಿ ನಡೆದಿದ್ದು ಖಾಸಗಿ ಕಾರ್ಯಕ್ರಮ. ಅದು ನನ್ನ ವೈಯಕ್ತಿಕ ಹೇಳಿಕೆ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ. ಈ ಹೇಳಿಕೆಯಿಂದ ವಿವಾದ ಉಂಟಾಗಿದ್ದಲ್ಲದೆ ನನ್ನ ಮೇಲೆಯೇ ಆರೋಪ ಬಂತು. ಆದರೆ ನಾನು ನನ್ನ ಸಿದ್ಧಾಂತದಿಂದ ಹಿಂದೆ ಸರಿದಿಲ್ಲ. ಮುಂದಿನ ದಿನಗಳಲ್ಲಿ ನನ್ನ ಹೇಳಿಕೆ ಸಾಬೀತುಗೊಳಿಸುವ ಪ್ರಯತ್ನ ಮುಂದುವರಿಸುತ್ತೇನೆ. ಪೂರಕ ದಾಖಲೆಗಳೊಂದಿಗೆ ವಿವಿಧ ವೇದಿಕೆಗಳ ಮೇಲೆ ಇದರ ಬಗ್ಗೆ ಮನವರಿಕೆ ಮಾಡಿಕೊಡುತ್ತೇನೆ ಎಂದರು.

ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲಾಗಿದೆ. ನನ್ನ ಹೆಸರಿಗೆ ಕಳಂಕ ಹಚ್ಚಲಾಗಿದೆ. ಏನೂ ತಪ್ಪು ಮಾಡದೆ ನಾನು ಕಳಂಕ ಹೊರಲು ಸಿದ್ಧವಿಲ್ಲ. ಚುನಾವಣಾ ಸಂದರ್ಭದಲ್ಲಿ ಈ ವಿಷಯ ಮತ್ತೆ ಪ್ರಸ್ತಾಪವಾಗುತ್ತದೆ ಎಂಬುದು ನನಗೆ ಗೊತ್ತಿದೆ. ಹೀಗಾಗಿ ಇದಕ್ಕೆ ಯಾವ ರೀತಿ ಉತ್ತರ ಕೊಡಬೇಕು. ನಮ್ಮ ಕಾರ್ಯಕರ್ತರು ಏನು ಮಾಡಬೇಕು ಎಂಬುದರ ಬಗ್ಗೆ ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಸತೀಶ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್‌ ಸಹವಾಸದಿಂದ ಅವರಿಗೆ ಹೀಗಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾನು ಎಂದಿಗೂ ದುಡುಕಿಲ್ಲ. ನನ್ನ ಹೇಳಿಕೆಯನ್ನೇ ಸೂಕ್ಷ್ಮವಾಗಿ ಗಮನಿಸಿ ಎಂದಿದ್ದೇನೆ. ಆದರೆ ಸರ್ಕಾರದ ಮಟ್ಟದಲ್ಲಿ ಮತ್ತು ಸಮಾಜದಲ್ಲಿ ಗೊಂದಲವಾಗಬಾರದೆಂಬ ಉದ್ದೇಶದಿಂದ ಹೇಳಿಕೆ ವಾಪಸ್‌ ಪಡಿದಿದ್ದೇನೆ ಎಂದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಸತೀಶ ಜಾರಕಿಹೊಳಿ ತಮ್ಮ ಹೇಳಿಕೆ ವಾಪಸ್‌ ಪಡೆದು ಈ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಎಲ್ಲ ವಿಚಾರಗಳನ್ನು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಹಾಗಾಗಿ ಈ ವಿವಾದವನ್ನು ಇಲ್ಲಿಯೇ ಮುಗಿಸಿಬಿಡಿ ಎಂದು ಕೈ ಮುಗಿದು ಮನವಿ ಮಾಡಿದರು. ಶಾಸಕ ಗಣೇಶ ಹುಕ್ಕೇರಿ, ಪಕ್ಷದ ಮುಖಂಡರಾದ ಲಕ್ಷ್ಮಣರಾವ್‌ ಚಿಂಗಳೆ, ವಿನಯ ನಾವಲಗಟ್ಟಿ, ವೀರಕುಮಾರ ಪಾಟೀಲ ಇದ್ದರು.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.