ಬೆಳಗಾವಿಯಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ
Team Udayavani, Dec 18, 2021, 8:42 AM IST
ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿ ದುಷ್ಕರ್ಮಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿನ ಅನಗೋಳದ ಕನಕದಾಸ ಗಲ್ಲಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕನ್ನಡ ಸಂಘಟನೆಗಳ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಮೆ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಶುಕ್ರವಾರ ರಾತ್ರಿ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಜೀಪ್ ಹಾಗೂ ಸರ್ಕಾರಿ ವಾಹನಗಳು ಸೇರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದರು.
ಇದನ್ನೂ ಓದಿ:ಬೆಳಗಾವಿ ಕಲ್ಲು ತೂರಾಟ : ಪುಂಡರನ್ನು ಸರ್ಕಾರ ಸುಮ್ಮನೆ ಬಿಡಲ್ಲ : ಆರಗ ಜ್ಞಾನೇಂದ್ರ
ಮಧ್ಯರಾತ್ರಿ ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ನಗರದಲ್ಲಿ ಸೆಕ್ಶನ್ 144 ಕಲಂ ಜಾರಿಗೊಳಿಸಲಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ
ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ
ಮಲೆನಾಡಿನಲ್ಲಿ ಮಳೆ ಅಬ್ಬರ: 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 4 ಹಸುಗಳು ಸಾವು
ಕಾಂಗ್ರೆಸ್ ಕೋಳಿ ಕೂಗಿದರೆ ಬೆಳಕು ಹರಿಯುತ್ತದೆಂಬ ಕಾಲ ಹೋಯಿತು: ಕುಮಾರಸ್ವಾಮಿ