2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು

Team Udayavani, Mar 25, 2023, 6:11 PM IST

2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

ಬೆಳಗಾವಿ: ಕ್ಷಯರೋಗ ನಿರ್ಮೂಲನೆಯಡಿಯಲ್ಲಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸಮಾಜದ ಕೊನೆಯ ವ್ಯಕ್ತಿಗಳಿಗೆ ತಲುಪಿಸಿ 2025 ನೇ ವೇಳೆಗೆ ಕ್ಷಯ ಮುಕ್ತ ಭಾರತವನ್ನು ಮಾಡುವ ಭಾರತ ಸರ್ಕಾರದ ಗುರಿಯನ್ನು ಮುಟ್ಟಲು ಎಲ್ಲರೂ ಕೂಡಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಕರೆ ನೀಡಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ , ರೆಡಕ್ರಾಸ್‌ ಸಂಸ್ಥೆ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯಪಾಲರಾದ ತಾವರಚಂದ ಗೇಹಲೋಟ ಅವರು ಬೆಳಗಾವಿ ಜಿಲ್ಲೆಯ 10 ಕ್ಷಯರೋಗ ಫಲಾನುಭವಿಗಳನ್ನು ದತ್ತು ಪಡೆದಿದ್ದು, ಅವರಿಗೆ ರೆಡಕ್ರಾಸ್‌ ಸಂಸ್ಥೆಯ ಮೂಲಕ ಪೌಷ್ಟಿಕ ಆಹಾರದ ಕಿಟ್‌ಗಳನ್ನು ಜಿಲ್ಲಾಧಿಕಾರಿಗಳು ವಿತರಿಸಿ ಆರೋಗ್ಯ ಶಿಕ್ಷಣ ಪರಿಕರಗಳನ್ನು ಬಿಡುಗಡೆ ಮಾಡಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ| ಅಶೋಕ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಅನಿಲ ಕೋರಬು, ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಕೈಕೊಂಡ ಕ್ರಮಗಳ ಕುರಿತು ವಿವರಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ಷಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಗಿರೀಶ ದಂಡಗಿ ಮಾತನಾಡಿ, ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದರು.

ಬೆಳಗಾವಿ ತಾಲೂಕಾ ಆರೋಗ್ಯಾಧಿಕಾರಿ ಡಾ| ಶಿವಾನಂದ ಮಾಸ್ತಿಹೋಳಿ ಉಪನ್ಯಾಸ ನೀಡಿದರು. ಬಿಮ್ಸ್‌ನ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ| ಸುಧಾಕರ್‌ ಆರ್‌.ಸಿ, ವೈದ್ಯಕೀಯ ಅಧೀಕ್ಷಕರಾದ ಡಾ| ಅಣ್ಣಾಸಾಹೆಬ ಪಾಟೀಲ, ಮನೋ ವೈದ್ಯರಾದ ಡಾ.ಚಂದ್ರಶೇಖರ, ಜಿಲ್ಲಾ ಸರ್ವೇಕ್ಷಾಧಿಕಾರಿ ಡಾ| ಬಿ. ಎನ್‌ ತುಕ್ಕಾರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ವ್ಹಿ ಕಿವುಡಸಣ್ಣವರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಚಾಂದನಿ ದೇವಡಿ, ಬಿಮ್ಸ್‌ ಆಸ್ಪತ್ರೆ ಕ್ಷಯರೋಗ ಅಧಿಕಾರಿ ಡಾ| ನಾಗಲೇಕರ್‌, ರೆಡ್‌ಕ್ರಾಸ್‌ ಸಂಸ್ಥೆಯ ಖಜಾಂಚಿ ಪ್ರಿಯಾ ಪುರಾಣಿಕ ಉಪಸ್ಥಿತರಿದ್ದರು.ಪ್ರವೀಣ ಬೇಟಿಗಾರ ಸ್ವಾಗತಿಸಿದರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಯಲಿಗಾರ ನಿರೂಪಿಸಿದರು, ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಶಿವಾಜಿ ಮಾಳಗೇನ್ನವರ ವಂದಿಸಿದರು.

ಟಾಪ್ ನ್ಯೂಸ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

1-sfdas-dasd

Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ನಾವೀನ್ಯತೆ-ಕ್ರಿಯಾಶೀಲತೆ ಮುಖ್ಯ: ಪ್ರೊ. ರುಸಾಕ್‌

ಬೆಳಗಾವಿ: ನಾವೀನ್ಯತೆ-ಕ್ರಿಯಾಶೀಲತೆ ಮುಖ್ಯ: ಪ್ರೊ. ರುಸಾಕ್‌

ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

1-sadsad

Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

ಚಿಕ್ಕೋಡಿ:ಕೇಂದ್ರದ ಸಾಧನೆ ಮನೆ ಮನೆಗೆ ತಲುಪಿಸಿ: ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ:ಕೇಂದ್ರದ ಸಾಧನೆ ಮನೆ ಮನೆಗೆ ತಲುಪಿಸಿ: ಅಣ್ಣಾಸಾಹೇಬ ಜೊಲ್ಲೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ