ಮತ್ತೆ ಕಬ್ಬಿಗರ “ದರ ಸಂಘರ್ಷ’; ದರ ನಿಗದಿ ಎಷ್ಟು?

ಒಂಬತ್ತು ಸಕ್ಕರೆ ಕಾರ್ಖಾನೆಗಳಿಗೆ 2821 ರೂ.ದಿಂದ 3477 ರೂ. ದರ ನಿಗದಿ

Team Udayavani, Oct 4, 2022, 6:12 PM IST

ಮತ್ತೆ ಕಬ್ಬಿಗರ “ದರ ಸಂಘರ್ಷ’; ದರ ನಿಗದಿ ಎಷ್ಟು?

ಬೆಳಗಾವಿ: ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭ ಮತ್ತು ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಎಫ್‌ಆರ್‌ಪಿ ಪ್ರಕಾರ ದರ ನಿಗದಿ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಗಳ ಮಧ್ಯೆ “ದರ ಸಂಘರ್ಷ’ ಉಂಟಾಗುವ ಲಕ್ಷಣಗಳು ಕಾಣುತ್ತಿವೆ.

ಸರ್ಕಾರ ದರ ನಿಗದಿ ಮಾಡಿ ಹೊರಡಿಸಿರುವ ಆದೇಶವನ್ನು ರಾಜ್ಯದ ಕಬ್ಬು ಬೆಳೆಗಾರರು ಒಪ್ಪುತ್ತಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಆದೇಶದ ಹಿಂದೆ ಸಕ್ಕರೆ ಕಾರ್ಖಾನೆಗಳ ಲಾಬಿ ಇದೆ. ಪ್ರಭಾವಿಗಳ ಒತ್ತಡ ಇದೆ ಎಂಬ ಅನುಮಾನವನ್ನು ರೈತ ಮುಖಂಡರು ವ್ಯಕ್ತಪಡಿಸಿರುವುದು ಇದಕ್ಕೆ ಪುಷ್ಟಿ ನೀಡಿದೆ.

ರಾಜ್ಯದ 73 ಸಕ್ಕರೆ ಕಾರ್ಖಾನೆಗಳಿಗೆ ಕಳೆದ ಸಾಲಿನಲ್ಲಿ ಕಬ್ಬಿನಿಂದ ಸಕ್ಕರೆ ಉತ್ಪಾದಿಸಿದ ಇಳುವರಿ ಆಧಾರದ ಮೇಲೆ ಸರ್ಕಾರ ಎಫ್‌ಆರ್‌ಪಿ ದರ ನಿಗದಿ ಮಾಡಿ ಆದೇಶ ಹೊರಡಿಸಿದ ನಂತರ ಕಬ್ಬು ಬೆಳೆಗಾರರು ಹಾಗೂ ರಾಜ್ಯ ರೈತ ಸಂಘದ ಸದಸ್ಯರು ಸರ್ಕಾರದ ಈ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಸಾಲಿನಲ್ಲಿ ರಾಜ್ಯದ 73 ಸಕ್ಕರೆ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಆಧಾರದ ಮೇಲೆ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 2800ರಿಂದ 3600 ರೂ.ವರೆಗೆ ದರ ನಿಗದಿ ಮಾಡಿದೆ. ಇದರ ಪ್ರಕಾರ ಹೋದರೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಕಡಿತ ಮಾಡಿ ಕೊನೆಗೆ ರೈತರಿಗೆ 2200ರಿಂದ 2800 ರೂ. ದರ ಮಾತ್ರ ಸಿಗಲಿದೆ. ಇದು ಕಬ್ಬು ಬೆಳೆಗಾರರಿಗೆ ಮಾಡಿರುವ ಮಹಾ ಮೋಸ. ಕಾರ್ಖಾನೆಗಳ ಲಾಬಿಗೆ ಮಣಿದು ಸರ್ಕಾರ ಈ ಆದೇಶ ಮಾಡಿದೆ ಎಂಬುದು ಕಬ್ಬು ಬೆಳೆಗಾರರ ಸಂಘದ ಮುಖಂಡರ ಆರೋಪ.

ಇಳುವರಿ ಆಧಾರದ ಮೇಲೆ ದರ ನಿಗದಿ ಮಾಡುವಲ್ಲಿ ಯಾವುದೇ ಆಕ್ಷೇಪ ಇಲ್ಲ. ಆದರೆ ಪ್ರತಿಟನ್‌ಗೆ ಕನಿಷ್ಟ 3500 ರೂ. ದರ ನಿಗದಿ ಮಾಡಬೇಕು ಎಂಬುದು ರೈತರ ಆಗ್ರಹ. ಸರ್ಕಾರ ಈಗ ಸಕ್ಕರೆ ಇಳುವರಿ ಆಧಾರದ ಮೇಲೆ ನಿಗದಿ ಮಾಡಿರುವ ದರದಲ್ಲಿ ಕೊನೆಗೆ ರೈತರಿಗೆ ಪ್ರತಿ ಟನ್‌ಗೆ 2200 ರಿಂದ 2800 ರೂ. ದರ ಮಾತ್ರ ಸಿಗುತ್ತದೆ.

ಇಳುವರಿಯಲ್ಲಿ ಭಾರೀ ಮೋಸ: ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯಲ್ಲಿ ವಂಚನೆ ಮಾಡುತ್ತಿವೆ. ಪ್ರತಿಶತ ಒಂದರಷ್ಟು ಇಳುವರಿ ಕಡಿಮೆ ತೋರಿಸಿ ಹಣ ಲೂಟಿ ಮಾಡುತ್ತಿವೆ. ಯಾವುದೇ ಒಂದು ಕಾರ್ಖಾನೆ ಕನಿಷ್ಟ 10 ಲಕ್ಷ ಟನ್‌ ಕಬ್ಬು ಅರಿದರೆ ಅವರಿಗೆ 3ರಿಂದ 4 ಕೋಟಿ ಉಳಿತಾಯವಾಗಲಿದೆ. ಇದು ರೈತರಿಗೆ ಗೊತ್ತಾಗುವುದಿಲ್ಲ. ಈ ರೀತಿ ಇಳುವರಿಯಲ್ಲಿ ವ್ಯತ್ಯಾಸ ತೋರಿಸುವುದು ಮೊದಲಿಂದಲೂ ನಡೆದಿದೆ ಎನ್ನುತ್ತಾರೆ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರ ಶಾಂತಕುಮಾರ. ರಾಜ್ಯದಲ್ಲಿ 73 ಸಕ್ಕರೆ ಕಾರ್ಖಾನೆಗಳ ಪೈಕಿ 38 ಕಾರ್ಖಾನೆಗಳು ರಾಜಕಾರಣಿಗಳ ಹಿಡಿತದಲ್ಲಿವೆ.

ಕಾನೂನು ಮಾಡುವವರು ಇವರೇ. ಇದಕ್ಕೆ ವಿರೋಧ ಮಾಡುವವರು ಇವರೇ. ಇವರಿಬ್ಬರ ಮಧ್ಯೆ ರೈತರು ಸಾಯುತ್ತಿದ್ದಾರೆ. ಪ್ರತಿಭಟನೆ ಮಾಡಿದರೆ ಇಲ್ಲಿ ನಮ್ಮ ಕಬ್ಬು ತೆಗೆದುಕೊಳ್ಳುವದಿಲ್ಲ ಎಂಬ ಭಯ ರೈತರನ್ನು ಕಾಡುತ್ತಿದೆ. ಹೀಗಾಗಿ ಯಾವ ರೈತರೂ ಕಾರ್ಖಾನೆಗಳ ವಿರುದ್ಧ ನಿಲ್ಲುತ್ತಿಲ್ಲ ಎಂಬುದು ಮುಖಂಡರ ನೋವು.

ದರ ನಿಗದಿ ಎಷ್ಟು?
ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿಯ ಅರಿಹಂತ ಶುಗರ್ಸ್‌ ಗೆ 3,462 ರೂ., ಅಥಣಿ ಶುಗರ್ಸ್‌ 3,355 ರೂ., ಬೆಳಗಾವಿ ಶುಗರ್ಸ್‌ 3,526 ರೂ., ಚಿಕ್ಕೋಡಿಯ ಚಿದಾನಂದ ಬಸವಪ್ರಭು ಕೋರೆ ಕಾರ್ಖಾನೆಗೆ 3,523 ರೂ., ರಾಮದುರ್ಗದ ಖಾನಪೇಟೆಯ ಇಐಡಿ ಪ್ಯಾರಿ ಕಾರ್ಖಾನೆಗೆ 3,636 ರೂ., ಘಟಪ್ರಭಾ ಎಸ್‌ಎಸ್‌ಕೆ ಕಾರ್ಖಾನೆ 3,355 ರೂ., ಗೋಕಾಕ ಶುಗರ್ಸ್‌ ಲಿಮಿಟೆಡ್‌ 3,492 ರೂ., ನಿಪ್ಪಾಣಿಯ ಹಾಲಸಿದ್ದನಾಥ ಕಾರ್ಖಾನೆ 3526
ರೂ., ಸವದತ್ತಿಯ ಹರ್ಷ ಶುಗರ್ಸ್‌ 3,270 ರೂ., ಹುಕ್ಕೇರಿಯ ಹಿರಣ್ಯಕೇಶಿ ಕಾರ್ಖಾನೆ 3,459 ರೂ., ಸವದತ್ತಿಯ ರೇಣುಕಾ ಶುಗರ್ಸ್‌ 3,660 ರೂ, ಸೇರಿದಂತೆ ಜಿಲ್ಲೆಯ 27 ಸಕ್ಕರೆ ಕಾರ್ಖಾನೆಗಳಿಗೆ ಗರಿಷ್ಠ 3590 ರೂ. ದರ ನಿಗದಿ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲೆಯ 12 ಸಕ್ಕರೆ ಕಾರ್ಖಾನೆಗಳಿಗೆ 3400 ರೂ.ದಿಂದ 3600 ರೂ. ವರೆಗೆ ದರ ನಿಗದಿ ಮಾಡಿದರೆ, ವಿಜಯಪುರ ಜಿಲ್ಲೆಯ ಒಂಬತ್ತು ಸಕ್ಕರೆ ಕಾರ್ಖಾನೆಗಳಿಗೆ 2821 ರೂ.ದಿಂದ 3477 ರೂ. ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಬೀದರ ಜಿಲ್ಲೆಯ ಆರು ಸಕ್ಕರೆ ಕಾರ್ಖಾನೆಗಳಿಗೆ 2821 ರೂ.ದಿಂದ 3184 ರೂ., ಮಂಡ್ಯ ಜಿಲ್ಲೆಯ ನಾಲ್ಕು ಸಕ್ಕರೆ ಕಾರ್ಖಾನೆಗಳಿಗೆ 2821 ರೂ., ಕಲಬುರಗಿಯ ನಾಲ್ಕು ಕಾರ್ಖಾನೆಗಳಿಗೆ 2989 ರೂ.ದಿಂದ 3358 ರೂ. ದರ ನಿಗದಿ ಮಾಡಲಾಗಿದೆ. ಆದರೆ ಈ ಯಾವ ಜಿಲ್ಲೆಯಲ್ಲೂ ಸರ್ಕಾರದ ಈ ಆದೇಶಕ್ಕೆ ಸಹಮತ ವ್ಯಕ್ತವಾಗಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ.

ಎಫ್‌ಆರ್‌ಪಿ ಎಂಬುದು ನಾಮಕೆವಾಸ್ಥೆ ಆದೇಶ. ಇದು ಸಂಪೂರ್ಣ ಅವೈಜ್ಞಾನಿಕ. ನಾವು ಪ್ರತಿಟನ್‌ ಕಬ್ಬಿಗೆ ಕನಿಷ್ಟ 3500 ರೂ. ದರ ನಿಗದಿ ಮಾಡಬೇಕೆಂದು ಕೇಳುತ್ತಿದ್ದೇವೆ. ಇದರಿಂದ ಇಳುವರಿ ಆಧಾರದ ಮೇಲೆ ಪ್ರತಿಟನ್‌ ಕಬ್ಬಿಗೆ 3800 ರೂ. ದಿಂದ 4200 ರೂ. ದರ ಸಿಗುತ್ತದೆ. ಈಗ ಸರ್ಕಾರ ಮಾಡಿರುವ ಆದೇಶದಿಂದ ಎಲ್ಲ ವೆಚ್ಚ ಕಡಿತಗೊಳಿಸಿ ಕೊನೆಗೆ ರೈತರಿಗೆ ಪ್ರತಿ ಟನ್‌ ಕಬ್ಬಿಗೆ 2400ದಿಂದ 2600 ರೂ. ದರ ಸಿಗುತ್ತದೆ. ಈ ನ್ಯಾಯ ಸರಿಯಿಲ್ಲ.
●ಸಿದಗೌಡ ಮೋದಗಿ, ಕಬ್ಬು
ನಿಯಂತ್ರಣ ಮಂಡಳಿ ಸದಸ್ಯ

ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವೇ ಇದೆ. ಅಲ್ಲಿ ಎಫ್‌ಆರ್‌ಪಿ ಪ್ರಕಾರ ಪ್ರತಿ ಟನ್‌ ಕಬ್ಬಿಗೆ 3800 ರಿಂದ 4500 ರೂ. ನಿಗದಿ ಮಾಡಿದ್ದಾರೆ. ಇದೇ ಆದೇಶ ನಮ್ಮಲ್ಲಿ ಜಾರಿ ಮಾಡಲು ಏನು ಸಮಸ್ಯೆ? ನಮ್ಮಲ್ಲಿನ ಈಗಿನ ಎಫ್‌ಆರ್‌ಪಿ ಪ್ರಕಾರ ಕಬ್ಬು ಬೆಳೆಗಾರರಿಗೆ 2200ದಿಂದ 2800 ರೂ. ಮಾತ್ರ ಸಿಗಲಿದೆ. ಸರ್ಕಾರ ಇಲ್ಲಿ ಕಾರ್ಖಾನೆಗಳ ಒತ್ತಡ, ರಾಜಕಾರಣಿಗಳ ಪ್ರಭಾವಕ್ಕೆ ಮಣಿದಿದೆ. ರೈತರನ್ನು ಮತ್ತೆ ತುಳಿದಿದೆ.
●ಕುರಬೂರು ಶಾಂತಕುಮಾರ, ರಾಜ್ಯ
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ

●ಕೇಶವ ಆದಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.