ಸುರೇಶ್ ಅಂಗಡಿ ಪುತ್ರಿ, ಜಗದೀಶ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ರಾಜಕೀಯಕ್ಕೆ ಎಂಟ್ರಿ!
Team Udayavani, Dec 26, 2020, 8:30 AM IST
ಬೆಳಗಾವಿ: ತಂದೆ ಸುರೇಶ ಅಂಗಡಿ ಅಕಾಲಿಕ ನಿಧನದ ನಂತರ ಇದೇ ಮೊದಲ ಬಾರಿಗೆ ಪುತ್ರಿ ಶ್ರದ್ಧಾ ಶೆಟ್ಟರ್ ಬಹಿರಂಗ ಸಮಾರಂಭದಲ್ಲಿ ಕಾಣಿಸಿಕೊಳ್ಳುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಜಗದೀಶ ಶೆಟ್ಟರ್ ಅವರ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡರು.
ಕಾರ್ಯಕ್ರಮದ ನಂತರ ಲವಲವಿಕೆಯಿಂದ ಎಲ್ಲ ಕಡೆಗೂ ಓಡಾಡಿದ ಶ್ರದ್ಧಾ ಶೆಟ್ಟರ್ ರೈತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಮಹಿಳಾ ರೈತರನ್ನು ಅಪ್ಪಿಕೊಂಡು ಯೋಗಕ್ಷೇಮ ವಿಚಾರಿಸುತ್ತಿರುವುದು ಗಮನ ಸೆಳೆಯಿತು.
ಇದನ್ನೂ ಓದಿ:ರಾತ್ರಿ ಕರ್ಫ್ಯೂ: ಡಿಕೆಶಿ, ಸುಧಾಕರ್ ನಡುವೆ ವಾಕ್ಸಮರ
ತಂದೆ ಸುರೇಶ ಅಂಗಡಿ ನಿಧನದ ನಂತರ ಯಾವ ಕಾರ್ಯಕ್ರಮದಲ್ಲಿಯೂ ಬಹಿರಂಗವಾಗಿ ಶ್ರದ್ಧಾ ಕಾಣಿಸಿಕೊಂಡಿರಲಿಲ್ಲ. ಬೆಳಗಾವಿ ಲೋಕಸಭೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿರುವ ಸೊಸೆ ಶ್ರದ್ಧಾಗೆ ಟಿಕೆಟ್ ಕೊಡಿಸಲು ಸಚಿವ ಜಗದೀಶ ಶೆಟ್ಟರ್ ದೆಹಲಿ ಸೇರಿದಂತೆ ರಾಜ್ಯಮಟ್ಟ ದಲ್ಲಿ ತೀವ್ರ ಲಾಬಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಕ್ರಿಯ ರಾಜಕಾರಣದಲ್ಲಿ ಭಾಗವಹಿಸಿರುವ ಶ್ರದ್ಧಾ ಕೆಲವು ದಿನಗಳಿಂದ ಸದ್ದಿಲ್ಲದೇ ಬಿಜೆಪಿ ಶಾಸಕರು, ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ.
ಲೋಕಸಭೆ ಟಿಕೆಟ್ ಬಗ್ಗೆ ಏನೂ ಹೇಳಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಶ್ರದ್ಧಾ ಶೆಟ್ಟರ್, ಸ್ಪರ್ಧೆಗೆ ಸಂಬಂ ಧಿಸಿದಂತೆ ಈಗಲೇ ಏನೂ ಹೇಳುವುದಿಲ್ಲ. ಅಭಿಮಾನಿಗಳು ತಂದೆ ನಿಧನದ ನಂತರ ನಮ್ಮನ್ನು ಭೇಟಿ ಮಾಡುತ್ತಿದ್ದಾರೆ. ಅಭಿಮಾನಿಗಳು ನಮ್ಮ ಕುಟುಂಬದ ಮೇಲೆ ತೋರುತ್ತಿರುವ ಪ್ರೀತಿ ಕಂಡು ಖುಷಿಯಾಗುತ್ತಿದೆ. ಅಭಿಮಾನಿಗಳ ಜತೆ ಸಂಪರ್ಕ ಬೆಳೆಸಿಕೊಂಡು ಹೋಗುತ್ತೇವೆ ಎಂದಷ್ಟೇ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
1 ರಿಂದ 5 ನೇ ತರಗತಿಗಳ ಆರಂಭ ಸದ್ಯಕ್ಕಿಲ್ಲ: ಸುರೇಶ್ ಕುಮಾರ್
ಸರ್ಕಾರ ವಚನ ಭ್ರಷ್ಟವಾಗಬಾರದು; ಸಾರಿಗೆ ನೌಕರರ ಮನವಿಗೆ ಸ್ಪಂದಿಸಬೇಕು:ಕೋಡಿಹಳ್ಳಿ ಚಂದ್ರಶೇಖರ್
ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ
ಶಿವಮೊಗ್ಗ: ಜಿ.ಪಂ ಚುನಾವಣೆ ಒಳಗೆ ‘ಒಂದು ದೃಢ ನಿರ್ಧಾರ’ ಮಾಡುತ್ತೇನೆ: ಮಧು ಬಂಗಾರಪ್ಪ
ಅವಕಾಶ ಸಿಕ್ಕರೆ ಖಂಡಿತ ಬಿಗ್ ಬಾಸ್ ನಲ್ಲಿ ಭಾಗವಹಿಸುತ್ತೇನೆ : ಎಚ್. ವಿಶ್ವನಾಥ್