ಕುಂದರನಾಡಿನ ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಸ್ವಾಮೀಜಿ ವಿಧಿವಶ
Team Udayavani, Apr 3, 2023, 7:44 AM IST
ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು(78) ಸೋಮವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ವಿಧಿವಶರಾದರು.
ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿ ವಿಧಿವಶರಾದರು. ಇಂದು ಸಂಜೆ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ.
ಕುಂದರನಾಡು ಹಾಗೂ ಗೋಕಾಕ ತಾಲೂಕಿನಲ್ಲಿ ಶ್ರೀಗಳ ನಿಧನದಿಂದ ದುಃಖ ಮಡುಗಟ್ಟಿದೆ. ಶ್ರೀಗಳ ನಿಧನಕ್ಕೆ ಭಕ್ತರು ಶೋಕ ವ್ಯಕ್ತಪಡಿಸಿದ್ದಾರೆ.