ಶಿಕ್ಷಕರ ಸಹಕಾರಿ ರಾಜ್ಯಕ್ಕೆ ಮಾದರಿ: ಷಡಕ್ಷರಿ


Team Udayavani, May 17, 2022, 12:46 PM IST

11

ಬೆಳಗಾವಿ: ರಾಜ್ಯ ಸರಕಾರಿ ನೌಕರ ಸಂಘದ ಏಳ್ಗೆಯಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಪಾರದರ್ಶಕ, ಶಿಕ್ಷಕ ಸ್ನೇಹಿಯಾಗಿ ಕ್ರಿಯಾಶೀಲವಾಗಿ ಸಂಸ್ಥೆ ಮುನ್ನಡೆಯುತ್ತಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್‌. ಷಡಕ್ಷರಿ ಹೇಳಿದರು.

ನಗರದ ಗಾಂಧಿಭವನದಲ್ಲಿ ಬೆಳಗಾವಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ವತಿಯಿಂದ ನಡೆದ ನಿವೃತ್ತ ಸದಸ್ಯ ಶಿಕ್ಷಕರ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಮಾದರಿಯಾಗಿರುವ ಸಂಸ್ಥೆ ಬೆಳಗಾವಿಯಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದೆ. ಶಿಕ್ಷಕರಿಗೆ ಆರ್ಥಿಕವಾಗಿ ಬಲ ನೀಡಿ ಉತ್ತಮ ಜೀವನ ನಿರ್ವಹಣೆಗೆ ಸಹಕಾರಿಯಾಗಿದೆ ಎಂದರು.

ರಾಜ್ಯ ಸರಕಾರವು ನೌಕರರಿಗೆ ಕೇಂದ್ರ ಸರಕಾರದ ಮಾದರಿ ವೇತನ ಶ್ರೇಣಿ ಜಾರಿಗೊಳಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು. ಎನ್‌ಪಿಎಸ್‌ ಯೋಜನೆ ಕೈಬಿಟ್ಟು ಓಪಿಎಸ್‌ ಜಾರಿಗೊಳಿಸಲು ಪ್ರಯತ್ನಿಸಲಾಗುವುದು. ನೌಕರರಿಗೆ ಆರೋಗ್ಯ ಸಂಜೀವಿನಿ ಜಾರಿಗೊಳಿಸಲು ಬದ್ದವಾಗಿದ್ದೇವೆ. ತಮ್ಮ ಎರಡು ವರ್ಷದ ಅವಧಿಯಲ್ಲಿ ನೌಕರರ ಹಲವಾರು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇನ್ನುಳಿದ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದರು.

ಡಯಟ್‌ ಪ್ರಾಚಾರ್ಯ ಎಂ.ಎಂ ಸಿಂದೂರ ಮಾತನಾಡಿ, ಶಿಕ್ಷಕರ ಪ್ರತಿಭೆಯನ್ನು ಗುರುತಿಸಿ ಸತ್ಕರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಿವೃತ್ತ ಶಿಕ್ಷಕರು ಮತ್ತು ಸದಸ್ಯ ಶಿಕ್ಷಕರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಬೆಳಗಾವಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಶೇಖರ್‌ ಕರಂಬಳಕರ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್‌ ತಿಮ್ಮೆಗೌಡ, ಆರ್‌.ಶ್ರೀನಿವಾಸ್‌, ಮಲ್ಲಿಕಾರ್ಜುನ್‌ ಬಳ್ಳಾರಿ, ಬಿ.ಎಚ್‌. ವೆಂಕಟೇಶಯ್ಯ, ಬೆಳಗಾವಿ ಗ್ರಾಮೀಣ ಬಿಇಓ ಆರ್‌, ಪಿ ಜುಟ್ಟನವರ, ಬಸವರಾಜ ರಾಯಪ್ಪಗೋಳ, ಮೀನಾಕ್ಷಿ ಕುಡಿಸೋಮಣ್ಣವರ್‌, ಶಂಕರ್‌ ಗೋಕಾವಿ, ಎಸ್‌.ಡಿ.ಗಂಗಣ್ಣವರ ಬೆಳಗಾವಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘ ಸಂಘದ ಅಧ್ಯಕ್ಷ ಅನ್ವರ್‌ ಲಂಗೋಟಿ, ಉಪಾಧ್ಯಕ್ಷೆ ರೇವಾಣಿ ಮೋದಗೇಕರ ಉಪಸ್ಥಿತರಿದ್ದರು. ಎ.ಎಚ್‌.ಲಂಗೋಟಿ ಸ್ವಾಗತಿಸಿದರು. ಎ.ಜಿ.ಮುಲ್ಲಾ, ಎಂ ಚೌಗಲೆ ನಿರೂಪಿಸಿದರು.ಎ.ಬಿ.ಮಡಿವಾಳರ ವಂದಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.