ಕಿತ್ತೂರು ನೆಲದಲ್ಲಿ ಉತ್ಸವಕ್ಕೆ ವರ್ಣ ರಂಜಿತ ತೆರೆ

ರಾಣಿ ಚನ್ನಮ್ಮನ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮ ಈ ಭಾಗದ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

Team Udayavani, Oct 25, 2021, 7:36 PM IST

ಕಿತ್ತೂರು ನೆಲದಲ್ಲಿ ಉತ್ಸವಕ್ಕೆ ವರ್ಣ ರಂಜಿತ ತೆರೆ

ಚನ್ನಮ್ಮನ ಕಿತ್ತೂರು: ಪ್ರವಾಹ ಮತ್ತು ಕೋವಿಡ್‌ ಮಹಾಮಾರಿ ಹಿನ್ನೆಲೆಯಲ್ಲಿ ಎರಡು ವರ್ಷಗಳ ಕಾಲ ಇಲ್ಲವಾಗಿದ್ದ ಕಿತ್ತೂರು ಉತ್ಸವ ಈ ಬಾರಿ ಎರಡು ದಿನಗಳ ಅತ್ಯಂತ ಸಡಗರ ಸಂಭ್ರಮದಿಂದ ಬೆಳ್ಳಿ ಹಬ್ಬ ಆಚರಣೆ ಆಗುವ ಮೂಲಕ ವರ್ಣರಂಜಿತವಾಗಿ ಉತ್ಸವಕ್ಕೆ ತೆರೆ ಬಿದ್ದಿತು.

ಕೋವಿಡ್‌ ಆತಂಕದ ಮಧ್ಯೆಯೂ ಈ ಭಾಗದ ಜನತೆ ಕೋವಿಡ್‌ ಲೆಕ್ಕಕ್ಕೇ ಇಲ್ಲ ಎಂಬಂತೆ ಉತ್ಸಾಹದಿಂದ ಭಾಗವಹಿಸಿದ್ದರು. ಎರಡು ವರ್ಷಗಳ ಕಾಲ ಇಂಥ ಉತ್ಸವ, ಜಾತ್ರೆಗಳ ಸಂಭ್ರಮ ಇಲ್ಲದೇ ಮನೆಯಲ್ಲಿಯೇ ಇದ್ದ ಜನರಿಗೆ ಈ ಬಾರಿ ಉತ್ಸವ ಉತ್ಸಾಹ ಮೂಡಿಸಿತು. ಜನರು ಅತ್ಯಂತ ಸಂಭ್ರಮದಿಂದ ಉತ್ಸವದಲ್ಲಿ ಪಾಲ್ಗೊಂಡು ಚನ್ನಮ್ಮನ ಗತವೈಭವಕ್ಕೆ ಸಾಕ್ಷಿಯಾದರು. ಎರಡು ವರ್ಷಗಳ ಕಾಲ ಸರಳ ಹಾಗೂ ಸಾಂಕೇತಿಕವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು. ವೀರ ಸೇನಾನಿಗಳ ನಾಡಿನಲ್ಲಿ ಯಾವುದೇ ಅಬ್ಬರ ಇರಲಿಲ್ಲ,

ಕಿತ್ತೂರು ಚನ್ನಮ್ಮನ ಇತಿಹಾಸದ ಪುಟಗಳ ಕಲರವ ಕಂಡಿರಲಿಲ್ಲ, ಬ್ರಿಟಿಷರನ್ನು ಸದೆಬಡಿದ ನೆನಪುಗಳನ್ನು ಮೆಲುಕು ಹಾಕುವ ಗೋಜಿಗೂ ಹೋಗಿರಲಿಲ್ಲ. ಈ ಬಾರಿ ಕಾಕತಾಳೀಯ ಎಂಬಂತೆ ಕೋಟೆ ಆವರಣದಲ್ಲಿ ಉತ್ಸವದ 25ನೇ ವರ್ಷಾಚರಣೆ ಹೊಸ ಮೆರಗು ತಂದಿದೆ.
ಸ್ವಾತಂತ್ರ್ಯ ಸಂಗ್ರಾಮದ ಧ್ರುವತಾರೆ ರಾಣಿ ಚನ್ನಮ್ಮನ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮ ಈ ಭಾಗದ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

ಪ್ರತಿವರ್ಷ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯುತ್ತಿತ್ತು. ಈ ಸಲ ಒಂದು ದಿನಕ್ಕೆ ಕಡಿವಾಣ ಹಾಕಿ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈ ಅವ ಧಿಯಲ್ಲಿ ಕಲಾವಾಹಿನಿ ಮೆರವಣಿಗೆ, ಜಾನಪದ ಸೊಗಡು, ವಿವಿಧ ಸಾಂಸ್ಕೃತಿಕ, ಸಂಗೀತ ರಸದೌತಣ, ಚನ್ನಮ್ಮನ ಇತಿಹಾಸ ಸಾರುವ ಗೋಷ್ಠಿಗಳು, ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತಷ್ಟು ಮೆರಗು ಹೆಚ್ಚಿಸಿವೆ. ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಗೋಷ್ಠಿಗಳಲ್ಲೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಕಿಕ್ಕಿರಿದ್ದು ಸೇರಿದ್ದ ಜನಸಾಗರ
ಕೋವಿಡ್‌-19 ಇದ್ದರೂ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿತ್ತು. ಕಿತ್ತೂರು ತಾಲೂಕಿನ ಹಳ್ಳಿ ಹಳ್ಳಿಗಳಿಂದ ಜನರು ಶನಿವಾರ ಮತ್ತು ರವಿವಾರ ದಿನ ಕಂಡು ಬಂದರು. ರವಿವಾರ ಬೆಳಗಿನ ಜಾವದವರೆಗೂ ಜನ ದಟ್ಟಣೆ ಇತ್ತು. ಕೋಟೆ ಆವರಣದಲ್ಲಿ ಹಾಕಿರುವ ಮಳಿಗೆಗಳ ಬಳಿ ಆಟಿಕೆಗಳ ಸಾಮಾನುಗಳ ಖರೀದಿಯಲ್ಲಿ ತೊಡಗಿದ್ದರು. ಕೋಟೆ ಸುತ್ತಲೂ ಜಾತ್ರೆಯ ಚಿತ್ರಣವೇ ಕಂಡು ಬಂತು. ಕೆಎನ್‌ವಿಎಸ್‌ ಕಾಲೇಜು ಆವರಣದಲ್ಲಿ ಹಾಕಿದ್ದ ವಸ್ತು ಪ್ರದರ್ಶನ ಮಳಿಗೆಗಳಲ್ಲೂ ಜನ ರು ಕಿಕ್ಕಿರಿದ್ದು ಸೇರಿದ್ದರು.

ಮೌಡ್ಯದ ವಿರುದ್ಧ ತೊಡೆ ತಟ್ಟಿದ ಸಿಎಂ
ಕಿತ್ತೂರು ಉತ್ಸವಕ್ಕೆ ಬರುವ ಮುಖ್ಯಮಂತ್ರಿಗಗಳು ಅಧಿ ಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ವಿರುದ್ಧ ಈ ಸಲದ ಉತ್ಸವದಲ್ಲಿ ಭಾಗಿಯಾಗುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಡ್ಡು ಹೊಡೆದಿದ್ದಾರೆ. ಈ ಮುಂಚೆ  ಬಹುತೇಕ ಮುಖ್ಯಮಂತ್ರಿಗಳು ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಿದ್ದರು. ಇಂಥ ಕೆಟ್ಟ ಸಂಪ್ರದಾಯಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ
ಬೊಮ್ಮಾಯಿ ಅವರು ಬಂದು ಉದ್ಘಾಟಿಸುವ ಮೂಲಕ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದರು.

ಕಿತ್ತೂರಿನ ಹೃದಯ ಗೆದ್ದ ಸಿಎಂ
ಅನೇಕ ವರ್ಷಗಳ ಕಿತ್ತೂರು ಭಾಗದ ಸಮಸ್ಯೆಗಳಿಗೆ ಕಿವಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಇಲ್ಲಿಯ ಜನರ ಹೃದಯ ಗೆದ್ದಿದ್ದಾರೆ. ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧರಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದು ಮಹತ್ವದ ನಿರ್ಧಾರವಾಗಿದೆ. ಕಿತ್ತೂರು ಉತ್ಸವವನ್ನು ರಾಜ್ಯ ಉತ್ಸವವಾಗಿ ಮಾಡಲು ಘೋಷಿಸಿದರು. ಜತೆಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಹಾಗೂ ಕಿತ್ತೂರು ಅಭಿವೃದ್ಧಿಗಾಗಿ ಮಾಸ್ಟರ್‌ ಪ್ಲಾನ್‌, ಮುಂದಿನ ವರ್ಷದಿಂದ ಜ್ಯೋತಿ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಆದೇಶಿಸಿದ್ದು ಬಹುತೇಕ ಎಲ್ಲ ಬೇಡಿಕೆಗೂ ಬೊಮ್ಮಾಯಿ ಸ್ಪಂದಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.