ಒಗ್ಗಟ್ಟಿಲ್ಲದ ಪ್ರತಿಪಕ್ಷಗಳಿಂದ “ಬಚಾವಾದ’ ಸರ್ಕಾರ

Team Udayavani, Nov 13, 2017, 7:15 AM IST

suvarna–800.jpg

ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುವರ್ಣಸೌಧದಲ್ಲಿ ನಡೆಸಿದ ನಾಲ್ಕೂ ಅಧಿವೇಶನಗಳಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಸ್ವಲ್ಪ ಮಟ್ಟಿಗೆ ವಿಫ‌ಲವಾದವು ಎಂದರೆ ತಪ್ಪಾಗಲಾರದು.

ಬಿಜೆಪಿ ಹಾಗೂ ಜೆಡಿಎಸ್‌ ಒಟ್ಟಾಗಿ ಆಡಳಿತಾರೂಢ ಕಾಂಗ್ರೆಸ್‌ ಮೇಲೆ ಮುಗಿಬೀಳುವ ಅವಕಾಶ ಸಿಕ್ಕರೂ ಬಳಸಿಕೊಳ್ಳಲಿಲ್ಲ. ಜತೆಗೆ ಬಿಜೆಪಿ ಪ್ರಸ್ತಾಪಿಸಿದ ವಿಷಯಕ್ಕೆ ಜೆಡಿಎಸ್‌ ಬೆಂಬಲ ಸಿಗದೆ, ಜೆಡಿಎಸ್‌ ಪ್ರಸ್ತಾಪಿಸಿದ ವಿಷಯಕ್ಕೆ ಬಿಜೆಪಿ ಕೈ ಜೋಡಿಸದ ಕಾರಣಕ್ಕೆ ಸರ್ಕಾರ “ಬಚಾವಾದ’ಘಟನೆಗಳೂ ನಡೆದವು.

ಯಾವುದೇ ಒಂದು ವಿಷಯ ಪ್ರಸ್ತಾಪವಾದಾಗ “ಕ್ರೆಡಿಟ್‌’ ವಿಚಾರವನ್ನು ಬಿಜೆಪಿ ಹಾಗೂ ಜೆಡಿಎಸ್‌ ಪ್ರತಿಷ್ಠೆಯಾಗಿ ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು. ಹೀಗಾಗಿ, ಆಡಳಿತಾರೂಢ ಕಾಂಗ್ರೆಸ್‌ ವಿರುದಟಛಿದ ಪ್ರಬಲ ಹೋರಾಟ ಸಾಧ್ಯವಾಗಲೇ ಇಲ್ಲ. ಹೀಗಾಗಿ, ಮೂಲ ಆಶಯವಾದ ಆ ಭಾಗದ ಸಮಸೆ‌Âಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ನಡೆಯಲೇ ಇಲ್ಲ.

ವಿಠಲ್‌ ಅರಬಾವಿ ಆತ್ಮಹತ್ಯೆ ಹೊರತುಪಡಿಸಿದರೆ ಕಬ್ಬು ಬೆಳೆಗಾರರು ಸೇರಿ ರೈತರ ಸಮಸ್ಯೆಯಾದಿಯಾಗಿ
ಮಹದಾಯಿ ವಿಚಾರದವರೆಗೂ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಸರ್ಕಾರದ ವಿರುದಟಛಿ ಹೋರಾಟ ಮಾಡಿದ್ದೇ ಇಲ್ಲ. ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಯಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಕಳೆದ ಎರಡೂವರೆ  ರ್ಷದಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ, ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ಅಧಿಕೃತ ಪ್ರತಿಪಕ್ಷ ಬಿಜೆಪಿ ಈ ವಿಷಯದಲ್ಲಿ ಯಾವುದೇ ಪರಿಹಾರಾತ್ಮಕ ಪ್ರಯತ್ನ ನಡೆಸುವಲ್ಲಿ ವಿಫ‌ಲವಾಗಿರುವುದು ಆ ಭಾಗದ ಜನರಲ್ಲಿ ನೋವು ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪ ಮಾಡುವ ಮೂಲಕ ಐದು ವರ್ಷ ಅನಗತ್ಯವಾಗಿ ಕಾಲಹರಣ ಮಾಡಿದ್ದು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಸಮಸ್ಯೆಗೆ ಯಾವುದೇ ಸಕಾರಾತ್ಮಕ ಚರ್ಚೆ ನಡೆಯದಿರುವುದು ಕೂಡ ವಿಪರ್ಯಾಸ. ಸಮಸ್ಯೆ ಬಗೆಹರಿಸುವಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ವಿಫ‌ಲವಾಗಿ ರಾಜಕೀಯ ಲಾಭಕ್ಕಾಗಿ ಹಾತೊರೆಯುತ್ತಿವೆ ಎಂದು ಆರೋಪ ಮಾಡಿ ಜೆಡಿಎಸ್‌ ಕೈ ತೊಳೆದುಕೊಂಡಿತು.

ನಂಜುಂಡಪ್ಪ ವರದಿ ಚರ್ಚೆಗೆ ಸೀಮಿತ: ಇನ್ನು, ಡಾ. ನಂಜುಂಡಪ್ಪ ವರದಿ ಕುರಿತು ಚರ್ಚೆಗಳು ನಡೆಯಿತೆ
ವಿನಹಃ ಯಾವುದೇ ಪ್ರಗತಿ ಮಾಡಿದ ಕುರಿತು ಸರ್ಕಾರವೂ ಸ್ಪಷ್ಟ ಮಾಹಿತಿ ನೀಡುವ ಗೋಜಿಗೆ ಹೋಗಲಿಲ್ಲ. ಪ್ರತಿಪಕ್ಷಗಳೂ ಈ ವಿಷಯದಲ್ಲಿ ಸರ್ಕಾರದ ವೈಫ‌ಲ್ಯವನ್ನು ಎತ್ತಿ ತೋರಿಸುವ ಪ್ರಯತ್ನ ನಡೆಸಿಲ್ಲ. 

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ವಿಚಾರದಲ್ಲೂ ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹಾಕಿ ಸಂಪೂರ್ಣ ಬಾಕಿ ಪಾವತಿಸುವಲ್ಲಿ ಯಶಸ್ವಿಯಾಗಲಿಲ್ಲ. ಬಹುತೇಕ ಸಕ್ಕರೆ ಕಾರ್ಖಾನೆಗಳಿಗೆ ಶಾಸಕ, ಸಚಿವ ಸೇರಿ ರಾಜಕೀಯ ನಾಯಕರೇ ಮಾಲೀಕರಾಗಿರುವುದು ಇದಕ್ಕೆ ಕಾರಣ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರತಿವರ್ಷ ಹತ್ತು ದಿನ ನಡೆಯುವ ಅಧಿವೇಶನ ಹೊರತು ಪಡಿಸಿ, ಇಡೀ ಸುವರ್ಣ ಸೌಧ ಬಳಕೆಯಾಗದೇ ಖಾಲಿ ಉಳಿಯುವ ಬಗ್ಗೆಯೂ ಸಾಕಷ್ಟು ಬಾರಿ ಚರ್ಚೆಯಾದರೂ, ಸರ್ಕಾರ ಆ ಭಾಗದಲ್ಲಿ ಹೆಚ್ಚು ಜನತೆಗೆ ಅನುಕೂಲವಾಗುವ ತೋಟಗಾರಿಕೆ, ಸಹಕಾರ, ಸಕ್ಕರೆ ಇಲಾಖೆಯಂತ ಕನಿಷ್ಠ 10 ಇಲಾಖೆಗಳನ್ನು ಸುವರ್ಣ ಸೌಧಕ್ಕೆ ವರ್ಗಾಯಿಸುವ ವಿಚಾರದಲ್ಲೂ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಪ್ರತಿಪಕ್ಷಗಳು ವಿಫ‌ಲವಾದವು ಎಂದೇ ಹೇಳಬಹುದು.

–  ಶಂಕರ್‌ ಪಾಗೋಜಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.