ಮುಸ್ಲಿಂ ಕುಟುಂಬ ತಯಾರಿಸುವ ಗಣಪನಿಗೆ ಭಾರೀ ಬೇಡಿಕೆ

ಅಜ್ಜ, ಮುತ್ತಜ್ಜನ ಕಾಲದಿಂದ ಮೂರ್ತಿ ತಯಾರಿಕೆ| ಪ್ರತಿ ವರ್ಷ 250-300 ಮೂರ್ತಿ ತಯಾರಿಕ

Team Udayavani, Sep 8, 2021, 3:50 PM IST

vghfyt

ವರದಿ: ಮಹಾದೇವ ಪೂಜೇರಿ

ಚಿಕ್ಕೋಡಿ: ಮುಸ್ಲಿಂ ಕುಟುಂಬವೊಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಗಡಿ ಭಾಗದಲ್ಲಿ ಕೋಮು ಸೌಹಾರ್ದ ಮೆರೆಯುತ್ತಿರುವ ದೃಶ್ಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿಯಲ್ಲಿ ನೋಡಲು ಸಿಗುತ್ತದೆ.

ಕೃಷ್ಣಾ ನದಿ ತೀರದ ಮಾಂಜರಿವಾಡಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಕಳೆದ 60 ವರ್ಷಗಳಿಂದ ಪ್ರತಿ ವರ್ಷ ಗಣೇಶ ಮೂರ್ತಿ ತಯಾರಿಸುವ ಕಾಯಕದಲ್ಲಿ ತೊಡಗಿಕೊಂಡು ಹಿಂದು-ಮುಸ್ಲಿಂ ಬೇಧ-ಭಾವವಿಲ್ಲದೇ ಭಾವ್ಯಕ್ಯತೆ ಸಂದೇಶ ಸಾರುತ್ತಿದೆ.

ಗ್ರಾಮದ ಅಲ್ಲಾಬಕ್ಷ ಜಮಾದಾರ ಕುಟುಂಬ ಪ್ರತಿ ವರ್ಷ ನೂರಾರು ಗಣಪತಿ ಮೂರ್ತಿ ತಯಾರಿಸಿ ಭಕ್ತಾ ದಿಗಳಿಗೆ ನೀಡುವ ಕಾಯಕದಲ್ಲಿ ನಿರತವಾಗಿದೆ. ಮೂಲತ: ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರಾಗಿರುವ ಅಲ್ಲಾಬಕ್ಷ ಜಮಾದಾರ ಅವರು ತಮ್ಮ ಬಿಡುವಿನ ಸಮಯದಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಜಾತಿ-ಭೇದಭಾವ ಬದಿಗಿಟ್ಟು ಝಗಮಗಿಸುವ ಬಣ್ಣ ಬಣ್ಣಗಳಿಂದ ವಿಘ್ನೆಶ್ವರ ಮೂರ್ತಿ ತಯಾರಿಸುವ ಕಾಯಕ ತೃಪ್ತಿದಾಯಕ ತಂದಿದೆ ಎನ್ನುತ್ತಾರೆ ಅಲ್ಲಾಬಕ್ಷ ಜಮಾದಾರ.

ಮೊಹಮ್ಮದ್‌ ಜಮಾದಾರ್‌ ಅವರು ತನ್ನ ಸಹೋದರನ ಜೊತೆಗೂಡಿ ಗಣಪತಿ ವಿಗ್ರಹಗಳನ್ನ ತಯಾರು ಮಾಡುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಯಾರು ಏನೇ ಹೇಳಿದರೂ, ಜಾತಿ ಮತದ ಬಗ್ಗೆ ಪ್ರಸ್ತಾಪ ಮಾಡಿದರೂ ಅದನ್ನ ತಲೆಯಲ್ಲಿ ಹಾಕಿಕೊಳ್ಳದೇ ಇಡೀ ಕುಟುಂಬ ಗಣಪತಿಯನ್ನ ತಯಾರಿಸಿಕೊಂಡು ಬರುತ್ತಿದೆ. ಜಮಾದಾರ ಕುಟುಂಬ ತಯಾರು ಮಾಡುವ ಗಣಪತಿ ಮೂರ್ತಿಗಳಿಗೆ ಗಡಿ ಭಾಗದಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರ, ಯಡೂರವಾಡಿ, ಶಿರಗುಪ್ಪಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಭಕ್ತರು ಗಣೇಶ ಮೂರ್ತಿಗಳನ್ನು ಪೂಜೆಗೆ ತೆಗೆದುಕೊಂಡು ಹೋಗುತ್ತಾರೆ.

ಪ್ರಸಕ್ತ ವರ್ಷದಲ್ಲಿ ಜಮಾದಾರ ಕುಟುಂಬ ಸುಮಾರು 250 ರಿಂದ 300 ಗಣೇಶ ಮೂರ್ತಿಗಳನ್ನು ತಯಾರಿಸಿದ್ದು, ಗಣೇಶ ಚೌತಿ ಹಬ್ಬದ ಮುನ್ನಾ ದಿನ ಗಣೇಶ ಮೂರ್ತಿಗಳ ಅಂತಿಮ ಕೆಲಸ ಮುಕ್ತಾಯವಾಗಲಿದೆ ಎಂದು ಜಮಾದಾರ ಅತೀ ಉತ್ಸಾಹದಿಂದ ಅನಿಸಿಕೆ ಹಂಚಿಕೊಂಡರು. ಗಣೇಶ ಚತುರ್ಥಿಗೂ ಎರಡು ತಿಂಗಳು ಮುಂಚೆಯೇ ಜಮಾದಾರ್‌ ಕುಟುಂಬಸ್ಥರು ಗಣಪತಿ ಮೂರ್ತಿ ತಯಾರಿಸುವ ಕೆಲಸ ಶುರು ಮಾಡುತ್ತಾರೆ. ಒಬ್ಬರು ಮಣ್ಣು ಹದ ಮಾಡಿದರೆ, ಇನ್ನೊಬ್ಬರು ಮೂರ್ತಿಗೆ ಬೇಕಾದ ಸೊಂಡಿಲು, ಕೈ ಹಾಗೂ ಕೀರೀಟ ತಯಾರು ಮಾಡ್ತಾರೆ. ಮನೆಯ ಹೆಣ್ಣು ಮಕ್ಕಳೂ ಸಹ ಈ ಗಣೇಶ ಮೂರ್ತಿ ತಯಾರು ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಪ್ರತಿಯೊಬ್ಬರೂ ಸಹ ಒಂದೊಂದು ಕೆಲಸ ಹಂಚಿಕೊಂಡು ಭಕ್ತರಿಗೆ ಬೇಕಾದ ರೀತಿಯಲ್ಲಿ ವಿವಿಧ ಅಳತೆ, ಗಾತ್ರದ ಸುಂದರಮೂರ್ತಿಗಳನ್ನು ತಯಾರು ಮಾಡುತ್ತಿರುವ ಮುಸ್ಲಿಂ ಕುಟುಂಬದ ಕಾಯಕಕ್ಕೆ ಗಡಿ ಭಾಗದ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.