ಜಾನಪದ ಕಲೆ ಉಳಿಸಿ-ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ; ಬಸಗೌಡ ಪಾಟೀಲ

ಜಾನಪದ ಕಲೆಗಳ ಕಡೆಗೆ ಒಲವು ತೋರಿಸಿ, ಉಳಿಸಲು ಮುಂದಾಗಬೇಕು

Team Udayavani, Mar 1, 2023, 2:45 PM IST

ಜಾನಪದ ಕಲೆ ಉಳಿಸಿ-ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ; ಬಸಗೌಡ ಪಾಟೀಲ

ಮೂಡಲಗಿ: ಜಾನಪದ ಕಲೆಗಳು ನಶಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು.

ಕಲ್ಲೋಳಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣ ಜಾನಪದ ಕಲೆಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಕಲೆಗಳು ನಮ್ಮ ನಾಡಿನ ಸಂಸ್ಕೃತಿಯ ಜೀವಾಳವಾಗಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಪಾರಿಜಾತ ಕಲಾವಿದ ಭೀಮಪ್ಪ ಕಡಾಡಿ ಮಾತನಾಡಿ, ಮೊಬೈಲ್‌ ಹಾವಳಿಯಲ್ಲಿ ಜನಪದ ಕಲೆಗಳು ಮರೆಯಾಗುತ್ತಲಿವೆ. ಯುವ ಪೀಳಿಗೆಯು ಜಾನಪದ ಕಲೆಗಳ ಕಡೆಗೆ ಒಲವು ತೋರಿಸಿ, ಉಳಿಸಲು ಮುಂದಾಗಬೇಕು ಎಂದರು.

ಸಾಹಿತಿ ಡಾ| ಸುರೇಶ ಹನಗಂಡಿ ಪ್ರಾಸ್ತಾವಿಕ ಮಾತನಾಡಿ, ಗ್ರಾಮೀಣ ಭಾಗದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವುದು ಮತ್ತು ವಿದ್ಯಾರ್ಥಿಗಳು ಮತ್ತು ಹೊಸ ಪೀಳಿಗೆಗೆ ಜಾನಪದ ಕಲೆಗಳನ್ನು ಪರಿಚಯಿಸಿ ಅವುಗಳ ಬಗ್ಗೆ ಅಭಿರುಚಿ ಮೂಡಿಸುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದರು.

ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್‌ ಎನ್‌. ನಮ್ರತಾ ಮಾತನಾಡಿ, ಕಲ್ಲೋಳಿಯಲ್ಲಿ ವಿಚಾರ ಸಂಕಿರಣವನ್ನು ಉತ್ತಮವಾಗಿ ಸಂಘಟಿಸಿದ್ದು ಶ್ಲಾಘನೀಯವಾಗಿದೆ ಎಂದರು. ಕರ್ನಾಟಕ ಜಾನಪದ ಅಕಾಡೆಮಿ ಅಧಿಧೀಕ್ಷಕ ಪ್ರಕಾಶ, ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಿ.ಎಸ್‌. ಗೊರೋಶಿ, ಎಸ್‌.ಬಿ. ಜಗದಾಳೆ, ಎಸ್‌.ಎಂ. ಖಾನಾಪುರ, ಎಂ.ಎಸ್‌. ಕಪ್ಪಲಗುದ್ದಿ, ಬಾಳವ್ವ ಕಂಕಣವಾಡಿ, ಎಂ.ಡಿ. ಕುರಬೇಟ, ಬಿ.ಕೆ. ಗೋರೋಶಿ, ಕಿತ್ತೂರ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಗುಳಪ್ಪಾ ವಿಜಯನಗರ ಇದ್ದರು.

ಸಮಾರಂಭದಲ್ಲಿ ಕಲ್ಲೋಳಿಯ 30 ಮಾಜಿ ಯೋಧರು ಸೇರಿದಂತೆ ಕ್ರೀಡೆ ಮತ್ತು ವಿಶ್ವವಿದ್ಯಾಲಯಕ್ಕೆ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪ್ರೊ| ಡಿ.ಎಸ್‌. ಹುಗ್ಗಿ ಸ್ವಾಗತಿಸಿದರು, ಡಾ| ಕೆ.ಎಸ್‌. ಪರವ್ವಗೋಳ, ಪ್ರೊ| ಶಂಕರ ನಿಂಗನೂರ ನಿರೂಪಿಸಿದರು.

ಕಲಾ ಮೆರವಣಿಗೆ: ಸಮಾರಂಭದ ಪೂರ್ವದಲ್ಲಿ ವಿವಿಧ ಕಲಾ ತಂಡಗಳಿಂದ ಪಟ್ಟಣ ಪಂಚಾಯ್ತಿಯಿಂದ ಸಮಾರಂಭ ನಡೆಯುವ ಸ್ಥಳದವರೆಗೆ ಮೆರವಣಿಗೆ ಜರುಗಿತು. ತಾಸವಾದ, ಕೈಪಟ್ಟಿ, ಪುರವಂತಿಕೆ, ಸಂಬಾಳ, ವೀರಗಾಸೆ, ಕರಡಿ ಮಜಲು, ಚೌಡಕಿ, ಸಿದ್ದಿ ಸೋಗು ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.