ಈ ಸಮಯ ಯೋಗಮಯ

Team Udayavani, Jun 21, 2019, 8:15 AM IST

bg-tdy-2..

ಬೆಳಗಾವಿ: 40 ವರ್ಷಗಳ ಹಿಂದೆ ಉಡುಪಿ ಜಿಲ್ಲೆ ಬಿಟ್ಟು ಗಡಿ ಜಿಲ್ಲೆ ಬೆಳಗಾವಿಗೆ ಉಪ ಜೀವನ ನಡೆಸಲು ಬಂದ ಈ ವ್ಯಕ್ತಿ ಈಗ ಯೋಗ ಮಾಸ್ಟರ್‌. ಡಾ. ರಾಜಕುಮಾರ ಅವರ ಕಾಮನ ಬಿಲ್ಲು ಸಿನಿಮಾದಿಂದ ಪ್ರೇರಿತರಾಗಿ ಯೋಗ ಕಲಿತಿರುವ ಮುರಳೀಧರ ಪ್ರಭು ತಮ್ಮ ಮಕ್ಕಳನ್ನು ಅಂತಾರಾಷ್ಟ್ರೀಯ ಯೋಗ ಪಟುಗಳನ್ನಾಗಿ ಬೆಳೆಸುತ್ತಿದ್ದಾರೆ.

ಮೂಲತಃ ಉಡುಪಿಯವರಾದ ಮುರಳೀಧರ ಪ್ರಭು ಅವರು ಬೆಳಗಾವಿಯಲ್ಲಿ ಪಾನ್‌ ಬೀಡಾ ಅಂಗಡಿ ನಡೆಸುತ್ತಾರೆ. 80ರ ದಶಕದಲ್ಲಿ ಬಿಡುಗಡೆಯಾದ ಡಾ| ರಾಜಕುಮಾರ ಅವರ ಕಾಮನಬಿಲ್ಲು ಸಿನಿಮಾದಲ್ಲಿ ಯೋಗ ಮಾಡುತ್ತಿರುವ ದೃಶ್ಯದಿಂದ ಪ್ರೇರಿತಗೊಂಡರು. 35 ವರ್ಷಗಳ ಹಿಂದೆ ಹನುಮಂತರಾವ ಸಾವಂತ ಎಂಬ ಗುರುವಿನ ಬಳಿ ಯೋಗ ಕಲಿತರು.

ತಮ್ಮ ಆರೋಗ್ಯವನ್ನು ಸದೃಢವಾಗಿಟ್ಟುಕೊಂಡಿರುವ ಮುರಳೀಧರ ಸುಮಾರು 15 ವರ್ಷಗಳಿಂದ ಯೋಗ ಕಲಿಸುತ್ತಿದ್ದಾರೆ. ಬೆಳಗಾವಿ ನಗರದ ಶ್ರೀಮಾತಾ ಯೋಗ ಮಂದಿರಲ್ಲಿ ಯೋಗ ತರಬೇತಿ ಕೇಂದ್ರ ನಡೆಸುತ್ತಿದ್ದಾರೆ. ನಿತ್ಯ 70ಕ್ಕೂ ಹೆಚ್ಚು ಜನ ಯೋಗ ಕಲಿಯಲು ಬರುತ್ತಾರೆ. ಪುರುಷರು, ಮಹಿಳೆಯರು ಹಾಗೂ ಚಿಕ್ಕ ಮಕ್ಕಳೂ ತರಬೇತಿ ಪಡೆಯುತ್ತಿದ್ದಾರೆ.

ಖನ್ನತೆ, ಅನಾರೋಗ್ಯ, ಬೆನ್ನು ನೋವು, ಕುತ್ತಿಗೆ ನೋವು, ಕೌಟುಂಬಿಕ ಕಲಹದಿಂದ ಮಾನಸಿಕ ತೊಂದರೆಯಿಂದ ಬಳಲುತ್ತಿರುವವರು ಮುರಳೀಧರ ಬಳಿ ಯೋಗ, ಪ್ರಾಣಾಯಾಮದಿಂದ ಗುಣಮುಖರಾಗಿದ್ದಾರೆ. ಅನಾರೋಗ್ಯ ಪೀಡಿತರಾದವರೇ ಮುರಳೀಧರ ಅವರ ಯೋಗ ತರಬೇತಿ ಕೇಂದ್ರಕ್ಕೆ ಬಂದು ಮತ್ತೆ ಆರೋಗ್ಯ ಮರಳಿ ಪಡೆದ ಉದಾಹರಣೆಗಳು ಬಹಳಷ್ಟಿವೆ.

ಮುರಳೀಧರ ಪ್ರಭು ಗರಡಿಯಲ್ಲಿ ಯೋಗ ಕಲಿತವರಲ್ಲಿ ನಾಲ್ವರು ಅಂತಾರಾಷ್ಟ್ರೀಯ, ಐದಕ್ಕೂ ಹೆಚ್ಚು ಜನ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಕೆಲ ಕಾಲೇಜು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲ್ಯೂ ಆಗಿದ್ದಾರೆ. ಇವರ ಮಗಳು ನವ್ಯ ಪ್ರಭು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪದಕ ಗಿಟ್ಟಿಸಿಕೊಂಡಿದ್ದಾಳೆ. ಮಗ ನಾಗರಾಜ ಪ್ರಭು ಕೂಡ ರಾಜ್ಯ ಮಟ್ಟದಲ್ಲಿ ಮಿಂಚಿ ಹೆಸರು ಮಾಡಿದ್ದಾನೆ. ಜಯ ಶೈಲೇಶ ಪ್ರಭು ಎಂಬ ವಿದ್ಯಾರ್ಥಿ ಸಿಂಗಾಪುರ ಹಾಗೂ ಮಲೇಷಿಯಾದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾನೆ. ವಿಶ್ವನಾಥ ಮಣಗುತಕರ ಎಂಬ ವಿದ್ಯಾರ್ಥಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ.

ಪಾಶ್ಚಾತ್ಯ ದೇಶಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನ ಇದೆ. ನಮ್ಮ ಯೋಗವನ್ನೇ ಆಧುನಿಕವಾಗಿ ಬಳಸಿಕೊಂಡಿರುವ ವಿದೇಶಿಗರು ಯೋಗಾಸನಗಳಿಗೆ ಬೇರೆ ಬೇರೆ ಹೆಸರನ್ನಿಟ್ಟು ತಮ್ಮದೇ ಕಲೆ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಮೂಲತಃ ನಮ್ಮ ಭಾರತೀಯ ಪರಂಪರೆಯ ಯೋಗ ಭಾರತದಲ್ಲಿ ಇನ್ನೂ ಗಟ್ಟಿಯಾಗಬೇಕಿದೆ. ಯೋಗದಿಂದ ರೋಗ ಮುಕ್ತರಾಗಬೇಕೆನ್ನುವ ಸಂದೇಶ ರವಾನಿಸುವ ಕಾರ್ಯ ಆಗಬೇಕಿದೆ ಎನ್ನುತ್ತಾರೆ ಮುರಳೀಧರ ಪ್ರಭು.

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.