ಪ್ರೀತಿಸಿದ ತಪ್ಪಿಗೆ ಚಿತ್ರಹಿಂಸೆ: ಕಿಡ್ನಿ ಕಳೆದುಕೊಂಡ ಯುವಕ

Team Udayavani, Jun 25, 2019, 2:29 PM IST

Udayavani Kannada Newspaper

ಬೆಳಗಾವಿ: ಪ್ರೀತಿಸಿದ ತಪ್ಪಿಗೆ ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿ ಶಾಕ್‌ ಟ್ರೀಟ್ಮೆಂಟ್ ಕೊಟ್ಟು ಹಿಂಸಿಸಿದ್ದು, ಇದರಿಂದ ಕಿಡ್ನಿ ಕಳೆದುಕೊಂಡ ಯುವಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಧಾರವಾಡ ತಾಲೂಕಿನ ಗರಗ ಗ್ರಾಮದ ಮಡಿವಾಳ ರಾಯಬಾಗಕರ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮಾಜಿ ಸಚಿವ ವಿನಯ ಕುಲಕರ್ಣಿ ಕಡೆಯವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ. ಶಾಕ್‌ ಟ್ರಿಟ್ಮೆಂಟ್ ಕೊಟ್ಟಿದ್ದರಿಂದ ಯುವಕನ ಎರಡೂ ಕಿಡ್ನಿ ಹಾಳಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.ಘಟನೆ ವಿವರ: ಮಡಿವಾಳ ಎರಡು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಷಯ ಯುವತಿಯ ಮನೆಯಲ್ಲಿ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬದವರು ಯುವಕನನ್ನು ಹೆದರಿಸಿ ಊರು ಬಿಡಿಸಿದ್ದರು. ಇದಾದ ನಂತರ ಬೆಳಗಾವಿಯಲ್ಲಿ ನೆಲೆಸಿದ್ದ ಯುವಕ ಯುವತಿಯೊಂದಿಗೆ ಸಂಪರ್ಕದಲ್ಲಿದ್ದನು. ಈ ವಿಷಯ ಗೊತ್ತಾದ ನಂತರ ಬೆಳಗಾವಿಗೆ ಬಂದು ಆತನಿಗೆ ಶಾಕ್‌ ಟ್ರೀಟ್ಮೆಂಟ್ ಕೊಟ್ಟು ಚಿತ್ರಹಿಂಸೆ ನೀಡಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನನ್ನು ಭೇಟಿಯಾದ ಧಾರವಾಡ ಶಾಸಕ ಅಮೃತ ದೇಸಾಯಿ ಆರೋಗ್ಯ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಮೃತ ದೇಸಾಯಿ, ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬೆಂಬಲಿಗ, ಧಾರವಾಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉಳವಯ್ಯ ಸೇರಿದಂತೆ ಇತರರು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಡಿವಾಳ ಪ್ರೀತಿ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೆ ಯತ್ನಿಸಿದ್ದಾರೆ. ಕಾಲಿನಲ್ಲಿ ಮೊಳೆ ಹೊಡೆದು ಅದಕ್ಕೆ ವಿದ್ಯುತ್‌ ಶಾಕ್‌ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ವಿನಯ ಕುಲಕರ್ಣಿ ಅವರ ಆಪ್ತ ಎಂ.ಬಿ. ಪಾಟೀಲ ಅವರು ಗೃಹ ಸಚಿವರಾಗಿದ್ದರಿಂದ ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಆರೋಪಿಸಿದ ಅವರು, ಹಲ್ಲೆ ಮಾಡಿದ ಆರೋಪಿಗಳಿಗೆ ಗರಗ ಪೊಲೀಸ್‌ ಠಾಣೆ ಪಿಎಸ್‌ಐ ಆಪ್ತರಾಗಿದ್ದಾರೆ. ಹೀಗಾಗಿ ಇದರಿಂದ ಹೆದರಿದ ಮಡಿವಾಳ ಕುಟುಂಬಸ್ಥರು ಊರು ಬಿಟ್ಟಿದ್ದಾರೆ. ಅಪಹರಣ ಮಾಡಿ 18 ತಾಸು ಚಿತ್ರಹಿಂಸೆ ಮಾಡಲಾಗಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಯುವಕನಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು. ಬೆಳಗಾವಿ ಶಾಸಕ ಅನಿಲ ಬೆನಕೆ ಜೊತೆಯಲ್ಲಿದ್ದರು.

ಧಾರವಾಡ ತಾಲೂಕಿನ ಗರಗ ಗ್ರಾಮದ ಅಪ್ಪಾಸಾಬ ನದಾಫ, ಉಳ್ಳವಯ್ಯ ಚಿಕ್ಕಮಠ, ಉದ್ದಪ್ಪ ಮಡಿವಾಳನವರ, ಸಿದ್ದಯ್ಯ ಚಿಕ್ಕೊಪ್ಪ, ಮಡಿವಾಳಪ್ಪ ಕಾಳಿ, ಗುಲಾಬ ಪೀರಜಾದೆ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.