ಕ್ಯಾನ್ಸರ್‌ಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಿ; ಡಾ| ಎಂ.ವಿ. ಜಾಲಿ

ಈ ಹಿಂದೆ ಕುಷ್ಟರೋಗ ಅತ್ಯಂತ ಮಾರಕವಾಗಿತ್ತು. ಈಗ ಅದು ನಿರ್ಮೂಲನೆ ಹಂತ ತಲುಪಿದೆ.

Team Udayavani, Feb 16, 2022, 6:06 PM IST

ಕ್ಯಾನ್ಸರ್‌ಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಿ; ಡಾ| ಎಂ.ವಿ. ಜಾಲಿ

ಬೆಳಗಾವಿ: ಕ್ಯಾನ್ಸರ್‌ ರೋಗವನ್ನು ಪ್ರಥಮ ಹಂತದಲ್ಲಿರುವಾಗಲೇ ಪತ್ತೆ ಹಚ್ಚಿ, ಚಿಕಿತ್ಸಾ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಗುಣಪಡಿಸಲು ಸಾಧ್ಯವಿದೆ. ಮುಖ್ಯವಾಗಿ ಎಲ್ಲ ಮಕ್ಕಳಿಗೂ ಚಿಕಿತ್ಸೆ ಲಭಿಸಲು ಅನುಕೂಲವಾಗುವುದಕ್ಕೆ ಪ್ರಥಮ ಹೆಜ್ಜೆಯಾಗಿ ಜಾಗೃತಿ ಮೂಡಿಸಬೇಕಿದೆ ಎಂದು ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ| ಎಂ.ವಿ. ಜಾಲಿ ಹೇಳಿದರು.

ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್‌ ದಿನಾಚರಣೆ ಅಂಗವಾಗಿ ಮಂಗಳವಾರ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಚಿಕ್ಕಮಕ್ಕಳ ಕ್ಯಾನ್ಸರ್‌ ವಿಭಾಗವು ಏರ್ಪಡಿಸಿದ್ದ ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತರು ಮನೆಮನೆಗೆ ತೆರಳಿ ಪಾಲಕ ಮತ್ತು ಮಕ್ಕಳಿಗೆ ರೋಗದ ಬಗ್ಗೆ ಅರಿವು ಮೂಡಿಸಬೇಕು. ವಿದೇಶಗಳಲ್ಲಿ ಶೇ. 80ರಷ್ಟು ಮಕ್ಕಳು ಗುಣಮುಖರಾಗುತ್ತಿದ್ದರೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವೂ ಸೇರಿದಂತೆ ಶೇ. 50ಕ್ಕಿಂತ ಕಡಿಮೆ ಮಕ್ಕಳು ಗುಣಮುಖರಾಗುತ್ತಿದ್ದಾರೆ ಎಂದರು.

ವಿಶ್ವದಾದ್ಯಂತ ಪ್ರತಿವರ್ಷ ಸುಮಾರು 3 ಲಕ್ಷ ಮಕ್ಕಳಲ್ಲಿ ಕ್ಯಾನ್ಸರ್‌ ರೋಗದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಪೈಕಿ ಭಾರತ ದೇಶದಲ್ಲಿಯೇ 85 ಸಾವಿರ ಮಕ್ಕಳು ಕ್ಯಾನ್ಸರ್‌ ನಿಂದ ಬಳಲುತ್ತಿರುವುದು ಸಮೀಕ್ಷೆಯಿಂದ ತಿಳಿದುಬಂದಿದೆ. ಕಳೆದ 10 ವರ್ಷಗಳಲ್ಲಿ ಇದು ದ್ವಿಗುಣಗೊಂಡಿದ್ದು ಅತ್ಯಂತ ಕಳವಳಕಾರಿ ಸಂಗತಿ ಎಂದರು.

ರೋಗ ಪತ್ತೆ ಮಾಡುವಲ್ಲಿ ವಿಳಂಬ, ಕೈಗೆಟುಕದ ಚಿಕಿತ್ಸಾ ಕೇಂದ್ರಗಳು, ಅರ್ಧದಲ್ಲಿಯೇ ಚಿಕಿತ್ಸೆಯನ್ನು ನಿಲ್ಲಿಸುವುದರಿಂದ ಪ್ರಾಣಾಪಾಯದಂತ ಸಮಸ್ಯೆಗಳು ಬಂದೆರಗುತ್ತವೆ. ಈ ಹಿಂದೆ ಕುಷ್ಟರೋಗ ಅತ್ಯಂತ ಮಾರಕವಾಗಿತ್ತು. ಈಗ ಅದು ನಿರ್ಮೂಲನೆ ಹಂತ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮದೇ ಆದ ಅತ್ಯಾಧುನಿಕ ವೈದ್ಯಕೀಯ ಸಲಕರಣೆಯುಳ್ಳ ಕ್ಯಾನ್ಸರ್‌ ಆಸ್ಪತ್ರೆ ಕಾರ್ಯನಿರ್ವಹಿಸಲಿದೆ. ಇದರಿಂದ ಕ್ಯಾನ್ಸರ್‌ ಗೆ ಅವಶ್ಯವಿರುವ ಅನೇಕ ವಿಧವಾದ ಚಿಕಿತ್ಸೆಗಳು ಒಂದೆ ಸೂರಿನಲ್ಲಿ ಸಿಗಲಿವೆ ಎಂದು ಹೇಳಿದರು.

ಜೆಎನ್‌ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಎನ್‌.ಎಸ್‌. ವಹಾಂತಶೆಟ್ಟಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ಚಿಕ್ಕಮಕ್ಕಳಲ್ಲಿರುವ ಕ್ಯಾನ್ಸರ್‌ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈಗಿನಂತೆ ಅತ್ಯಾಧುನಿಕ ಚಿಕಿತ್ಸಾ ಕ್ರಮಗಳಿಲ್ಲದೇ ಮಕ್ಕಳು ಬದುಕುಳಿವ ಸಾಧ್ಯತೆ ಕಡಿಮೆ ಇತ್ತು. ಆದರೆ ಈಗ ಸುಲಭ ಚಿಕಿತ್ಸೆ ಲಭಿಸುತ್ತಿರುವುದರಿಂದ ಗುಣಪಡಿಸಲು ಸಾಧ್ಯವಿದೆ ಎಂದರು.

ಚಿಕ್ಕಮಕ್ಕಳ ಹಿರಿಯ ತಜ್ಞ ವೈದ್ಯರಾದ ಡಾ| ವಿ.ಡಿ. ಪಾಟೀಲ, ಬಾಲ ಕ್ಯಾನ್ಸರ್‌ ತಜ್ಞ ಡಾ| ಅಭಿಲಾಷಾ ಸಂಪಗಾರ, ಡಾ| ವಿಶ್ವನಾಥ ಪಟ್ಟಣಶೆಟ್ಟಿ, ಡಾ| ಆರಿಫ್‌ ಮಾಲ್ದಾರ, ಡಾ| ಸುಜಾತಾ ಜಾಲಿ, ಡಾ| ಮನಿಷಾ ಭಾಂಡನಕರ, ಡಾ| ತನ್ಮಯಾ ಮೆಟಗುಡ್‌, ಡಾ| ರೋಹನ ಭಿಸೆ, ಡಾ| ಭಾವನಾ ಕೊಪ್ಪದ ಮುಂತಾದವರು ಇದ್ದರು. ಡಾ| ಗೋಪಿಕಾ ನಿರೂಪಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.