ಹುಕ್ಕೇರಿ ಹಿರೇಮಠದಿಂದ ಎರಡು ಆಂಬ್ಯುಲೆನ್ಸ್
ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದ ಶ್ರೀಗಳು! ವಾಹನಗಳ ಸದುಪಯೋಗಕ್ಕೆ ಸಲಹೆ
Team Udayavani, May 22, 2021, 9:52 PM IST
ಬೆಳಗಾವಿ: ಕೊರೊನಾ ಸೋಂಕಿನಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ. ಆರ್ಥಿಕ ಪರಿಸ್ಥಿತಿಯೂ ಕುಸಿದಿದೆ. ಇಂತಹ ಸಂದರ್ಭದಲ್ಲಿ ಸದಾ ಸಮಾಜಮುಖೀ ಕೆಲಸ ಮಾಡಿಕೊಂಡು ಬರುತ್ತಿರುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಜಿಲ್ಲೆಗೆ ಎರಡು ಆಂಬ್ಯುಲೆನ್ಸ್‌ಗಳನ್ನು ನೀಡಿದ್ದು ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಆಂಬ್ಯುಲೆನ್ಸ್‌ಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಶ್ರೀಮಠದಿಂದ ನೀಡಿರುವ ಅಂಬ್ಯುಲೆನ್ಸ್‌ಗಳನ್ನು ಸಂಕಷ್ಟದಲ್ಲಿರುವ ಜನರನ್ನು ಆಸ್ಪತ್ರೆಗೆ ಕರೆ ತರಲು, ಕಳುಹಿಸಲು ಸದ್ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ರಾಜ್ಯ ಸರಕಾರದ ಕೇಂದ್ರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಮಾತನಾಡಿ, ಸದಾ ಸಮಾಜಮುಖೀಯಾಗಿ ಕೆಲಸ ಮಾಡುತ್ತಿರುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಬೆಳಗಾವಿ ಜಿಲ್ಲೆಗೆ ಆದರ್ಶವಾಗಿರುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಠದ ವತಿಯಿಂದ ಬೆಳಗಾವಿ ನಗರ ಹಾಗೂ ಹುಕ್ಕೇರಿ ತಾಲೂಕಿನ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಎರಡು ಆಂಬ್ಯೂಲೆನ್ಸ್‌ಗಳನ್ನು ನೀಡಲಾಗಿದೆ ಎಂದರು. ಕೋವಿಡ್-19 ಎರಡನೇ ಅಲೆ ಭೀಕರವಾಗಿದೆ. ಈ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಜಾತ್ರಾಮಹೋತ್ಸವವನ್ನು ಬಿಟ್ಟು ಜನರ ನೆರವಿಗೆ ಮುಂದಾಗುವ ಮೂಲಕ ಹೀಗೆಯೂ ಜನಸೇವೆ ಮಾಡಬಹುದು ಎಂಬುದು ನಮ್ಮ ಉದ್ದೇಶ ಎಂದರು.
ಹುಕ್ಕೇರಿ ಹಿರೇಮಠದಿಂದ ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ಸುಮಾರು 12 ಲಕ್ಷ ರೂ. ಆಹಾರದ ಕಿಟ್‌ಗಳನ್ನು ಒದಗಿಸಲಾಗಿದೆ. ಪ್ರವಾಹದ ಸಂದರ್ಭದಲ್ಲಿಯೂ ಸಹ ಶ್ರೀಮಠ ಜನರ ಸೇವೆ ಮಾಡಿದೆ. ಈಗ ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಕಾರಣ ತಜ್ಞ ವೈದ್ಯರು ಹಳ್ಳಿ ಕಡೆ ಹೋಗಿ ಜನರ ಪ್ರಾಣ ಉಳಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್‌ಓ ಶಶಿಕಾಂತ ಮುನ್ಯಾಳ, ಅರುಣ ಐಹೋಳೆ, ಬುಡಾ ಎಂಜಿನಿಯರ್ ಮಹಾಂತೇಶ ಹಿರೇಮಠ, ವೀರೇಶ ಹಿರೇಮಠ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್