ಎರಡು ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗೊಂದಲ

ಹಾಲಿ-ಮಾಜಿ ಶಾಸಕರಿಂದ ಮೂರ್ತಿ ಪ್ರತಿಷ್ಠಾಪನೆ ಯತ್ನ•ಕುರುಬ ಸಮುದಾಯದ ವಿರೋಧ: ಪೊಲೀಸ್‌ ಬಂದೋಬಸ್ತ್

Team Udayavani, May 10, 2019, 1:28 PM IST

belegavi-tdy-3..

ರಾಮದುರ್ಗ: ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿರುವುದನ್ನು ಕೆಲ ಕುರುಬ ಸಮಾಜದ ಮುಖಂಡರು ವಿರೋಧಿಸಿದರು.

ರಾಮದುರ್ಗ: ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯ ಸೂಕ್ತ ಮಾಹಿತಿ ನೀಡದೇ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಕುರುಬ ಸಮಾಜದ ಒಂದು ಗುಂಪು ವಿರೋಧ ಮಾಡಿದ್ದರಿಂದ ಗುರುವಾರ ತುರನೂರ ಸಮೀಪದ ಹುಬ್ಬಳ್ಳಿ-ಬೆಳಗಾವಿ ರಸ್ತೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸೂಕ್ತ ಪೊಲೀಸ್‌ ಬಂದೋಬಸ್ತ್ ಒದಗಿಸಿ ಕುರುಬ ಸಮಾಜದವರನ್ನು ಸಮಾಧಾನ ಪಡಿಸಿದರು.

ಹಿಂದಿನ ಶಾಸಕ ಅಶೋಕ ಪಟ್ಟಣ ಅವರು ಹುಬ್ಬಳ್ಳಿ-ಬೆಳಗಾವಿ ಕ್ರಾಸ್‌ನಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪಿಸಲು ಧನಸಹಾಯ ಮಾಡುವುದಾಗಿ ಹೇಳಿದ್ದರು. ಅದೇ ರೀತಿ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದರೆ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ ಬಿಜೆಪಿಯ ಮಹಾದೇವಪ್ಪ ಯಾದವಾಡ ಅವರೂ ಭರವಸೆ ನೀಡಿದ್ದರು. ಈಗ ಇಬ್ಬರೂ ಮೂರ್ತಿ ತಯಾರಿಸಿ ತಂದಿದ್ದಾರೆ. ಅದರಲ್ಲಿ ಯಾವ ನಾಯಕರು ತಯಾರಿಸಿದ ಮೂರ್ತಿ ಸ್ಥಾಪನೆ ಮಾಡಬೇಕು ಎಂಬುದೇ ಸಮಸ್ಯೆಯಾಗಿದೆ.

ಗುರುವಾರ ಒಂದು ಗುಂಪು ರಾಯಣ್ಣನ ಮೂರ್ತಿ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಇನ್ನೊಂದು ಗುಂಪಿನ ಕೆಲವರು ಆಕ್ಷೇಪ ವ್ಯಕ್ತ ಪಡಿಸಿ ಮಹಾನ್‌ವ್ಯಕ್ತಿ ಮೂರ್ತಿ ಸ್ಥಾಪನೆಯನ್ನು ತರಾತುರಿಯಲ್ಲಿ ಮಾಡುವುದು ಬೇಡ ಎಂದು ವಾದಿಸಿದರು.

ಕಾಂಗ್ರೆಸ್‌ನ ಅಶೋಕ ಪಟ್ಟಣ ಮತ್ತು ಬಿಜೆಪಿಯ ಮಹಾದೇವಪ್ಪ ಯಾದವಾಡ ಇಬ್ಬರಿಂದಲೂ ವಂತಿಗೆ ಪಡೆದು ಉಭಯ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಭರ್ಜರಿ ಕಾರ್ಯಕ್ರಮ ನಡೆಸೋಣ ಎಂದು ಕೆಲವರು ಪಟ್ಟು ಹಿಡಿದರು. ಆಗ ಕೆಲವರ ಮಧ್ಯೆ ಮಾತಿನ ಚಕಮಕಿ ನಡೆದು ಬಿಗುವಿನಿಂದ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಜಾಗೃತಗೊಂಡ ಪೊಲೀಸರು ಹೆಚ್ಚಿನ ಸಿಬ್ಬಂದಿ ಕರೆಯಿಸಿ ಸೂಕ್ತ ಬಂದೋಬಸ್ತ್ ಏರ್ಪಡಿಸಿದರು.

ನಂತರ ಉಭಯ ಗುಂಪಿನ ನಾಯಕರನ್ನು ಕರೆಯಿಸಿ ಮೂರ್ತಿ ಸ್ಥಾಪನೆಗೆ ಪರವಾನಿಗೆ ಪಡೆದ ನಂತರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡುವುದಾಗಿ ಹೇಳಿ ಕಳುಹಿಸಿದರು.

ಸಮಾಜ ಸಂಘಟನೆಯಲ್ಲಿ ಎಲ್ಲ ಪಕ್ಷಗಳ ಸಹಾಯ ಸಹಕಾರ ಮುಖ್ಯ. ಆದರೆ ನಮ್ಮಲ್ಲಿಯ ಕೆಲವರು ಸಂಘಟನೆಯಲ್ಲಿ ರಾಜಕೀಯ ಬೆರೆಸಲು ಮುಂದಾಗುತ್ತಿರುವುದರಿಂದ ನಮಗೆ ಹಿನ್ನಡೆಯಾಗುತ್ತಿದೆ. ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕದ್ದುಮುಚ್ಚಿ ಪ್ರತಿಷ್ಠಾಪನೆ ಮಾಡುವುದು ಸೂಕ್ತವಲ್ಲ ಎಂದು ಸಮಾಜದ ಮುಖಂಡ ವಿಠಲ ಜಟಗನ್ನವರ ಪ್ರತಿಕ್ರಿಯೆ ವ್ಯಕ್ತ ಪಡಿಸಿದರು.

ಟಾಪ್ ನ್ಯೂಸ್

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.