
ಸ್ವಗ್ರಾಮಕ್ಕೆ ಕತ್ತಿ ಪಾರ್ಥೀವ ಶರೀರ ಏರ್‌ಲಿಫ್ಟ್ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ಸಂಸ್ಕಾರ
Team Udayavani, Sep 7, 2022, 7:43 AM IST

ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಉಮೇಶ್ ಕತ್ತಿ ಪಾರ್ಥೀವ ಶರೀರ ಏರ್‌ಲಿಫ್ಟ್ ಮೂಲಕ ಬೆಳಗಾವಿಗೆ ಒಯ್ಯಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಸದ್ಯ ಕತ್ತಿ ಅವರ ಪಾರ್ಥೀವ ಶರೀರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿದ್ದು, ಅಲ್ಲಿಂದ ಎಚ್‌ಎಎಲ್ ವಿಮಾನ ನಿಲ್ದಾಣದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್‌ಲಿಫ್ಟ್ ಮೂಲಕ ಸಾಗಿಸಲಾಗುತ್ತದೆ .
ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಹುಟ್ಟೂರಲ್ಲಿ ಅಂತ್ಯಕ್ರಿಯೆ:
ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಳಗಾವಿಯ ಅವರ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ತಯಾರಿ ನಡೆಸಲಾಗುತ್ತದೆ. ಮಧ್ಯಾಹ್ನ 5 ಗಂಟೆಯವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು, ಆತ್ಮೀಯ ವಲಯ, ಅಭಿಮಾನಿಗಳು, ಹಿತೈಶಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ.
ಸಂಜೆ ಕತ್ತಿ ಅವರ ತೋಟದಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನಡೆಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
