ಅನಧಿಕೃತ ಲೇಔಟ್: ಕ್ರಮದ ಎಚ್ಚರಿಕೆ

• ಅಧಿಕಾರಿಗಳೇ ಜವಾಬ್ದಾರರು • ಟಾಪ್‌ 3ರಲ್ಲಿ ಸ್ಥಾನ ಪಡೆಯಲು ಸೂಚನೆ

Team Udayavani, Jul 6, 2019, 10:34 AM IST

bg-tdy-4..

ಬೆಳಗಾವಿ: ಅಶೋಕ ನಗರದಲ್ಲಿ ಸ್ಥಾಪಿತವಾದ ವ್ಯಾಯಾಮ ಶಾಲೆಯನ್ನು ಸಚಿವ ಪರಿಶೀಲಿಸಿದರು.

ಬೆಳಗಾವಿ: ಅನಧಿಕೃತ ಲೇ ಔಟ್‌ಗಳ ಮೂಲಕ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಎಚ್ಚರಿಕೆ ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಲೇಔಟ್ ನಿರ್ಮಾಣವಾಗಿರುವುದು ಗಮನಕ್ಕೆ ಬಂದಿದೆ. ಗೊತ್ತಿದ್ದೂ ಇಂಥ ಚಟುವಟಿಕೆಗೆ ಕುಮಕ್ಕು ನೀಡುವ ಅಧಿಕಾರಿಗಳೇ ನೇರ ಜವಾಬ್ದಾರರಾಗುತ್ತಾರೆ. ಯಾವುದೇ ಒತ್ತಡಕ್ಕೆ ಒಳಗಾಗದೇ ಇಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಳಗಾವಿ ದೇಶದಲ್ಲಿ 40ನೇ ಸ್ಥಾನ ಹಾಗೂ ರಾಜ್ಯದಲ್ಲಿ 5ನೇ ಸ್ಥಾನದಲ್ಲಿದೆ. ಎಲ್ಲ ನಗರದಲ್ಲೂ ಈ ಯೋಜನೆಯ ಕಾರ್ಯ ವಿಳಂಬವಾಗಿದೆ. ಕೆಲ ತೊಡಕುಗಳು ಇರುವುದರಿಂದ ಇದು ನಿಧಾನ ಗತಿಯಲ್ಲಿ ಸಾಗಿದೆ. ಇನ್ನು ಕಾಮಗಾರಿ ವೇಗ ಪಡೆದುಕೊಂಡಿದ್ದು, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ರಾಜ್ಯದ ಟಾಪ್‌ 3ರಲ್ಲಿ ಬೆಳಗಾವಿಯ ಸ್ಥಾನ ಭದ್ರಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಬೆಳಗಾವಿ ನಗರಕ್ಕೆ ನೀರಿನ ಮೂಲ ಇದೆ. ಸಮರ್ಪಕ ಪೂರೈಕೆ ಮಾಡುವ ದೃಷ್ಟಿಯಿಂದ ನಿರಂತರ ಕುಡಿಯುವ ನೀರಿನ ಯೋಜನೆಗೆ 420 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು, ಇನ್ನು ಮೂರು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. 24X7 ನೀರು ಎಲ್ಲರಿಗೂ ಲಭ್ಯ ಆಗಲಿದೆ ಎಂದರು.

ಬೆಳಗಾವಿಗೆ ನಗರೋತ್ಥಾನ ಯೋಜನೆಯಡಿ 125 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಆಗಲಿದೆ. ಜತೆಗೆ ಸ್ಮಾರ್ಟ್‌ ಸಿಟಿಯ ವಾರ್ಷಿಕ ಅನುದಾನ ಕೂಡಿಸಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ವರ್ಷ ತಲಾ 100 ಕೋಟಿ ರೂ. ಅನುದಾನ ನೀಡುತ್ತಿದ್ದು, ಈವರೆಗೆ ಬಂದ ಅನುದಾನದಲ್ಲಿ ಬ್ಯಾಂಕಿನಿಂದ 52 ಕೋಟಿ ರೂ. ಬಡ್ಡಿ ಬಂದಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ವೇತನವನ್ನು ಹಂತ ಹಂತವಾಗಿ ಪಾವತಿಸಲಾಗುತ್ತಿದೆ. ಇನ್ನು 15 ದಿನಗಳ ವೇತನ ಪಾವತಿ ಮಾಡಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.