ಅಭಿವೃದ್ಧಿ ವಂಚಿತ ಉತ್ತರ ಕರ್ನಾಟಕ: ಡಾ| ಪ್ರಭಾಕರ ಕೋರೆ ವಿಷಾದ

70ರ ದಶಕದಲ್ಲೇ ದಕ್ಷಿಣ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು ಅನುಷ್ಠಾನಗೊಂಡಿವೆ

Team Udayavani, Nov 2, 2022, 1:15 PM IST

ಅಭಿವೃದ್ಧಿ ವಂಚಿತ ಉತ್ತರ ಕರ್ನಾಟಕ: ಡಾ| ಪ್ರಭಾಕರ ಕೋರೆ ವಿಷಾದ

ಚಿಕ್ಕೋಡಿ: ಕರ್ನಾಟಕ ಏಕೀಕರಣದ ಕನಸು ಮೊದಲು ಕಂಡವರು ಉತ್ತರ ಕರ್ನಾಟಕದವರು. ಪೇಶ್ವೆ ಕಾಲದಲ್ಲಿ ಕನ್ನಡ ದುಸ್ಥಿತಿಯಲ್ಲಿದ್ದಾಗ ಚಳವಳಿ ಆರಂಭಗೊಂಡಿತ್ತು. ಕರ್ನಾಟಕವೂ ಒಂದಾಯಿತು. ಆದರೆ, ಉತ್ತರ ಕರ್ನಾಟಕ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕೆ.ಎಲ್‌.ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಡಾ|ಅನಿಲ ಕಮತಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕನ್ನಡೋತ್ಸವ-35 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪೇಶ್ವೆ ಕಾಲದಲ್ಲಿ ಧಾರವಾಡ, ಹುಬ್ಬಳ್ಳಿ, ಹರಿಹರತನಕ ಮರಾಠಿ ಶಾಲೆಗಳಿದ್ದವು. ಕನ್ನಡ ದುಸ್ಥಿತಿಯಲ್ಲಿತ್ತು. ಕನ್ನಡ ಮುಳುಗುವ ಸನ್ನಿವೇಶದಲ್ಲಿ ಕರ್ನಾಟಕ ಏಕೀಕರಣದ ಕನಸು ಕಂಡವರು ಉತ್ತರ ಕರ್ನಾಟಕದವರು. ಮೈಸೂರು ಪ್ರಾಂತ್ಯದವರು ಮೈಸೂರು ಮಹಾರಾಜರ ಆಸರೆಯಲ್ಲಿದ್ದರು.

ಉತ್ತರ ಕರ್ನಾಟಕದಲ್ಲಿಯೇ ಕರ್ನಾಟಕ ಏಕೀಕರಣದ ಕಹಳೆ ಮೊಳಗಿಸಲಾಗಿತ್ತು. ಹಲವು ಹೋರಾಟಗಳ ಫಲವಾಗಿ ಕರ್ನಾಟಕ ಒಂದಾಯಿತು. ಆದರೆ, ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕ ಪ್ರದೇಶಗಳು ಇನ್ನೂ ಅಭಿವೃದ್ಧಿಯಿಂದ ವಂಚಿತವಾಗಿವೆ. ಅನ್ಯಾಯ ನಿವಾರಣೆಗೆ ಹಲವು ಆಯೋಗಗಳು ರಚನೆಯಾದರೂ ಪ್ರಯೋಜನವಾಗಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ಚಿತ್ರನಟ ಎನ್‌.ರಾಮಕೃಷ್ಣ ಮಾತನಾಡಿ, ಶಿಕ್ಷಣ, ಆರೊಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಮೂಲಕ ಪ್ರಭಾಕರ ಕೋರೆ ಅವರು ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ. ಡಾ| ಅನಿಲ ಕಮತಿ ಅವರು ಗಡಿ ಭಾಗದಲ್ಲಿ ಕನ್ನಡ ಬೆಳವಣಿಗೆಗೆ ಸಲ್ಲಿಸಿರುವ ಸೇವೆ ಅನುಕರಣೀಯ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಉತ್ತರ ಕರ್ನಾಟಕದ ಕೂಗು ಸರ್ಕಾರಗಳಿಗೆ ಕೇಳುತ್ತಿಲ್ಲ. ಬೆಂಗಳೂರು ಕೇಂದ್ರಿತ ಆಡಳಿತದಿಂದಾಗಿ ಜಾರಿಗೊಳ್ಳುವ ಯೊಜನೆಗಳ ಮೊದಲ ಪಾಲು ಅಲ್ಲಿನ ಶಾಸಕರಿಗೆ ದೊರಕುತ್ತದೆ. ನಮಗೆ ಕಡೆ ಪಾಲು. ಹೀಗಾಗಿ ಉತ್ತರ ಕರ್ನಾಟಕ ಹಿಂದುಳಿದಿದೆ. 70ರ ದಶಕದಲ್ಲೇ ದಕ್ಷಿಣ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು ಅನುಷ್ಠಾನಗೊಂಡಿವೆ. ಆದರೆ, ಉತ್ತರ ಕರ್ನಾಟಕದಲ್ಲಿ ಕೃಷ್ಣಾ ಬಚಾವತ್‌ ತೀರ್ಪಿನನ್ವಯ ನೀರಿನ ಸದ್ಬಳಕೆ ಆಗುತ್ತಿಲ್ಲ. ಇದಕ್ಕೇ ಇಲ್ಲಿನವರ ರಾಜಕೀಯ ಇಚ್ಛಾಶಕ್ತಿ ಕೊರತೆಯೇ ಕಾರಣ ಎಂದರು.

ನಿಡಸೋಶಿ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಳಗದ ಖಜಾಂಚಿ ವಿಜಯ ದಾನವಾಡೆ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಶೃತಿ ಹೆಗ್ಗೆ ವಿರಚಿತ ಬಣ್ಣದ ಗರಿ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು. ಜನ್ಮದಿನದ ಅಮೃತ ಮಹೋತ್ಸವ ಪ್ರಯುಕ್ತ ಡಾ| ಪ್ರಭಾಕರ ಕೋರೆ ಅವರನ್ನು ಬಳಗದ ಪರವಾಗಿ ಸತ್ಕರಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಭರತೇಶ ಬನವಣೆ, ಸಂಚಾಲಕರಾದ ಮಲ್ಲಪ್ಪ ಮೈಶಾಳೆ, ಅಣ್ಣಾಸಾಹೇಬ ಪಾಟೀಲ, ಚೇತನ ಪಾಟೀಲ ಹಾಗೂ ನಿಖೀಲ್‌ ಕಮತಿ, ಮಹೇಶ ಬಾಕಳೆ, ಮಲ್ಲಿಕಾರ್ಜುನ ದಡ್ಡಿಕರ, ಜಯಶ್ರೀ ನಾಗರಳ್ಳಿ, ರವಿ ಹಂಪಣ್ಣವರ, ಕಲ್ಯಾಣಜೀ ಕಮತೆ, ಕೆ.ಎನ್‌. ಕುಂಬಾರ, ಸದಾನಂದ ಹಿರೇಮಠ, ಶಿವಗೌಡ ಬಾವಚೆ ಮೊದಲಾ ದವರು ಉಪಸ್ಥಿತರಿದ್ದರು. ಡಾ.ಸುಬ್ರಾವ ಎಂಟೆತ್ತಿನವರ ಸ್ವಾಗತಿಸಿದರು. ಎಸ್‌.ಆರ್‌.ದಳವಾಯಿ ಮತ್ತು ಆರ್‌.ಎಸ್‌.ಉಮರಾಣಿ ನಿರೂಪಿಸಿದರು. ಎಂ.ವಿ.ಮಾಳಗೆ ವಂದಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.