ಕುಂಬ್ಳೆಗೆ ವಿಶ್ವಚೇತನ ಪ್ರಶಸ್ತಿ ಪ್ರದಾನ


Team Udayavani, Feb 6, 2019, 11:50 AM IST

6-february-23.jpg

ಚಿಕ್ಕೋಡಿ: ಶ್ರಮವಿಲ್ಲದೇ ಯಾವುದೇ ಕೆಲಸ ಆಗುವುದಿಲ್ಲ, ಇಂದಿನ ಯುವಕರು ಮೊಬೈಲ್‌ ವ್ಯಸನದಿಂದಾಗಿ ಆಟ ಆಡುವುದನ್ನೇ ಬಿಟ್ಟಿರುವುದು ವಿಷಾದನೀಯ. ಗಟ್ಟಿ ನಿರ್ಧಾರದಿಂದ ಮುನ್ನುಗಿದರೆ ಎಲ್ಲ ಕೆಲಸದಲ್ಲೂ ಯಶಸ್ಸು ಸಿಗುತ್ತದೆಂದು ಖ್ಯಾತ ಕ್ರಿಕೆಟ್ಪಟು ಅನಿಲ ಕುಂಬ್ಳೆ ಹೇಳಿದರು.

ಗಡಿಭಾಗದ ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಅಂಗವಾಗಿ ಸೋಮವಾರ ಸಂಜೆ ಆಯೋಜಿಸಿದ್ದ ವಿಶ್ವವಿಖ್ಯಾತ ವಿಶ್ವಚೇತನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶ್ವಚೇತನ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಮಕ್ಕಳು ಆಟ ಆಡುವುದು ತೀರ ವಿರಳವಾಗುತ್ತಿರುವುದರಿಂದ ನಾವು ಕ್ರೀಡೆಗಳಿಗೆ ಉತ್ತೇಜನ ನೀಡಬೇಕಾಗಿದೆ. ಕೆಎಲ್‌ಇ ಸಂಸ್ಥೆಯಂತೆ ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಮಾಡಿದ ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಾನು ಟೆನ್‌ ವೀಕ್ಸ್‌ ಎಂಬ ಕ್ರೀಡಾ ಸಂಸ್ಥೆಯನ್ನು ಹುಟ್ಟುಹಾಕಿ ನಾಡಿಗೆ ಸೇವೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಇತಿಹಾಸ ಪ್ರಸಿದ್ಧ ಪರಮ ಪವಿತ್ರ ತಾಣದಲ್ಲಿ ವಿಶ್ವಚೇತನ ಪ್ರಶಸ್ತಿ ನನಗೆ ಸಂದಿದ್ದು ಸಂತೋಷ ತಂದಿದೆ. ನಾನು ಸಹ ಮಧ್ಯಮ ವರ್ಗದಲ್ಲಿ ಆಡಿ ಬೆಳೆದಿದ್ದು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದೇನೆ. ನಾನು ಜಯನಗರದ ಯಡೂರಿನಲ್ಲಿ ಆಡಿ ಬೆಳೆದಿದ್ದು, ನನ್ನ ಪತ್ನಿಯ ಹೆಸರು ಚೇತನ ಎಂದಿದ್ದು, ಇಂದು ಯಡೂರಿನಲ್ಲಿ ವಿಶ್ವಚೇತನ ಪ್ರಶಸ್ತಿ ದೊರಕಿದ್ದು ನನ್ನ ಸೌಭಾಗ್ಯವೆಂದರು. ಇಂದು ಕರ್ನಾಟಕ ರಣಜಿ ಕ್ರಿಕೆಟ್ ತಂಡದಲ್ಲಿ ಗ್ರಾಮೀಣ ಪ್ರತಿಭೆಗಳು ಹೆಚ್ಚಿನ ಅವಕಾಶ ಪಡೆಯುತ್ತಿದ್ದು, ಹುಮ್ಮಸ್ಸು ನಿಷ್ಠೆ ಗ್ರಾಮೀಣ ಪ್ರದೇಶದ ಯುವಕರಲ್ಲಿ ಹೆಚ್ಚಾಗಿದೆ ಎಂದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್‌ ವಿರೋಧಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಕರ್ನಾಟಕ ರಾಜ್ಯಕ್ಕೆ ವೀರಶೈವ ಲಿಂಗಾಯತ ಮಠಗಳು ಕಾಯಕ ದಾಸೋಹದ ದೊಡ್ಡ ಕೊಡುಗೆ ನೀಡಿವೆ. ಕನ್ನಡಿಗ ಕ್ರಿಕೆಟ್ ಆಟಗಾರ ಅನಿಲ ಕುಂಬ್ಳೆಯಂತಹ ಆಟಗಾರರು ಇಂದಿನ ಯುವಕರಿಗೆ ಸ್ಫೂರ್ತಿಯಾಗಿದ್ದು, ಅವರಿಗೆ ಗಡಿಭಾಗದಲ್ಲಿ ಯಡೂರ ಶ್ರೀಮಠದಿಂದ ಗೌರವಿಸುತ್ತಿರುವುದು ಇತಿಹಾಸ ಸೃಷ್ಟಿಸಿದೆ. ಸಮಾಜದ ಉನ್ನತಿಗಾಗಿ ರಾಜಕಾರಣಿಗಳು ನುಡಿದಂತೆ ನಡೆಯಬೇಕಾಗಿದ್ದು ಶ್ರೀಮಠದ ಅಭ್ಯುದಯಕ್ಕೆ ಪಕ್ಷಾತೀತ ಕಾರ್ಯ ಮಾಡಬೇಕಾಗಿದೆ ಎಂದರು.

ಶ್ರೀಶೈಲ ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಕಾಶಿಪೀಠದ ಜಗದ್ಗುರು ಶ್ರೀ ಡಾ| ಚಂದ್ರಶೇಖರ ಶಿವಚಾರ್ಯ ಮಹಾಸ್ವಾಮೀಜಿ ಹಾಗೂ ನಿಡಸೋಶಿಯ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪಡಸಾವಳಗಿಯ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಅಕ್ಕಲಕೋಟದ ಬಸವಲಿಂಗ ಸ್ವಾಮೀಜಿ, ಬೆಂಗಳೂರಿನ ವಿಭೂತಿಮಠದ ಡಾ| ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಡಾ| ಪ್ರೀತಿ ದೊಡವಾಡ ಅಧ್ಯಕ್ಷತೆ ವಹಿಸಿದ್ದರು. ಬಸವ ಜ್ಯೋತಿಯುಥ್‌ ಫೌಂಡೇಶನ್‌ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ಶಿರಸಿಯ ಡಾ| ವೆಂಕಟರಮಣ ಹೆಗಡೆ, ಧಾರವಾಡದ ಭೀಮಾಂಬಿಕಾ ನಶಿಬಿ, ಡಿಕೆಎಸ್‌.ಎಸ್‌.ಕೆ. ಸಂಚಾಲಕ ಅಜೀತದೇಸಾಯಿ, ಯಡೂರ ಪಿ.ಕೆ.ಪಿ.ಎಸ್‌. ಅಧ್ಯಕ್ಷ ರಣಜೀತ ದೇಸಾಯಿ, ಗ್ರಾ.ಪಂ. ಅಧ್ಯಕ್ಷ ಭೀಮಗೌಡ ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.