ಹಾಲು ಒಕ್ಕೂಟಕ್ಕೆ ವಿವೇಕರಾವ್‌ ಅಧ್ಯಕ್ಷ

•ಪುನರಾಯ್ಕೆಗೆ ಬಾಲಚಂದ್ರ ಸಾರಥ್ಯ•ಪ್ರಾಬಲ್ಯ ಸಾಬೀತು ಪಡಿಸಿದ ಸೋದರರು

Team Udayavani, May 11, 2019, 11:46 AM IST

belegavi-tdy-2..

ಬೆಳಗಾವಿ: ಸಾಕಷ್ಟು ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಹಾಲಿ ಅಧ್ಯಕ್ಷ ವಿವೇಕರಾವ್‌ ಪಾಟೀಲ ಪುನರಾಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ವಿವೇಕರಾವ್‌ ಪಾಟೀಲ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 14 ನಿರ್ದೇಶಕರನ್ನು ಹೊಂದಿರುವ ಒಕ್ಕೂಟದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸಲಿಲ್ಲ. ಇದರಿಂದ ವಿವೇಕರಾವ್‌ ಪಾಟೀಲ ಮತ್ತೆ ಅವಿರೋಧವಾಗಿ ಆಯ್ಕೆಯಾದರು. 14 ನಿರ್ದೇಶಕರ ಜೊತೆ ಐವರು ಸರಕಾರ ನಾಮನಿರ್ದೇಶಿತ ಪ್ರತಿನಿಧಿಗಳು ಮತದಾನದ ಹಕ್ಕು ಹೊಂದಿದ್ದರು.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಿತು. ಆಗ ವಿವೇಕರಾವ್‌ ಪಾಟೀಲ ಒಬ್ಬರೇ ನಾಮಪತ್ರ ಸಲ್ಲಿಸಿದರು. ನಂತರ ನಾಮಪತ್ರ ಪರಿಶೀಲನೆ ನಡೆದು ವಿವೇಕರಾವ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಯಶ್ರೀ ಶಿಂತ್ರಿ ಘೋಷಿಸಿದರು.

ಜಾರಕಿಹೊಳಿ ಹಿಡಿತ: ಜಿಲ್ಲೆಯ ರಾಜಕಾರಣದ ಮೇಲೆ ಬಲವಾದ ಹಿಡಿತ ಸಾಧಿಸುತ್ತಿರುವ ಜಾರಕಿಹೊಳಿ ಸಹೋದರರು ಬೆಳಗಾವಿ ಹಾಲು ಒಕ್ಕೂಟದಲ್ಲೂ ತಮ್ಮ ಪ್ರಾಬಲ್ಯ ಇದೆ ಎಂಬುದನ್ನು ಸಾಬೀತುಪಡಿಸಿದರು. ಜಾರಕಿಹೊಳಿ ಅವರ ಬೆಂಬಲಿಗರಿಗೇ ಅಧ್ಯಕ್ಷ ಪಟ್ಟ ಎಂದು ಗೊತ್ತಾಗಿದ್ದರಿಂದ ಬೇರೆ ಯಾವ ನಾಯಕರು ಇಲ್ಲಿ ತಮ್ಮ ಪ್ರಭಾವ ಪರೀಕ್ಷಿಸುವ ಪ್ರಯತ್ನ ಮಾಡಲಿಲ್ಲ. ಬೆಳಗಾವಿ ಹಾಲು ಒಕ್ಕೂಟವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶುಕ್ರವಾರ ಬೆಳಿಗ್ಗೆ ನಿರ್ದೇಶಕರ ಸಭೆ ನಡೆಸಿ ಚುನಾವಣೆ ನಡೆಯದೆ ಅವಿರೋಧ ಆಯ್ಕೆ ಮಾಡುವಲ್ಲಿ ಯಶಸ್ವಿಯಾದರು. ಬಾಲಚಂದ್ರ ಜಾರಕಿಹೊಳಿ ಗುಂಪಿನಲ್ಲಿ 10 ಜನ ನಿರ್ದೇಶಕರು ಇರುವುದರಿಂದ ಚುನಾವಣೆಗೆ ಪೈಪೋಟಿ ನಡೆಯಲೇ ಇಲ್ಲ.

ಕಳೆದ ತಿಂಗಳು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆ ನಡೆದಿತ್ತು. ಆಗ ಏಳು ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರಲ್ಲಿ ವಿವೇಕರಾವ ಪಾಟೀಲ ಹಾಗೂ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ ರಮೇಶ ಜಾರಕಿಹೊಳಿ ಅವರ ಪುತ್ರ ಅಮರನಾಥ ಜಾರಕಿಹೊಳಿ ಸಹ ಸೇರಿದ್ದರು. ಹೀಗಾಗಿ ಅಮರನಾಥ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲಿ ಮೂಡಿತ್ತು.

ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿವೇಕರಾವ್‌ ಪಾಟೀಲ ಮರಳಿ ಅಧಿಕಾರ ಸ್ವೀಕರಿಸಿದರು. ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ವಿವೇಕರಾವ್‌ ಪಾಟೀಲರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಶಾಸಕ ಅರವಿಂದ ಪಾಟೀಲ, ನಿರ್ದೇಶಕ ಅಮರನಾಥ ಜಾರಕಿಹೊಳಿ ಅಭಿನಂದಿಸಿದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.