ಬರಿದಾಗುತ್ತಿದೆ ಮಲಪ್ರಭೆ ಒಡಲು


Team Udayavani, May 27, 2019, 7:17 AM IST

bg-tdy-1..

ಬೆಳಗಾವಿ: ನೀರಿಲ್ಲದೇ ಬರಿದಾಗಿ ಕಾಣುತ್ತಿರುವ ಮಲಪ್ರಭಾ ಜಲಾಶಯ ಚಿತ್ರ.

ಬೆಳಗಾವಿ: ಸವದತ್ತಿ ತಾಲೂಕಿನ ನವಿಲುತೀರ್ಥದ ಬಳಿ 1972ರಲ್ಲಿ ನಿರ್ಮಾಣವಾಗಿರುವ ಮಲಪ್ರಭಾ ಜಲಾಶಯ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರ ನೀರಿನ ದಾಹ ತಣಿಸುವದಲ್ಲದೆ ನೀರಾವರಿ ಸೌಲಭ್ಯ ಒದಗಿಸಿದೆ. ಆದರೆ ಪ್ರತಿ ವರ್ಷ ಉಂಟಾಗುವ ಮಳೆಯ ಅಭಾವ ಇದನ್ನೇ ನಂಬಿಕೊಂಡಿರುವ ಪ್ರದೇಶಗಳ ಜನರಿಗೆ ಕುಡಿಯುವ ನೀರಿನ ಆತಂಕ ಉಂಟು ಮಾಡುತ್ತಲೇ ಇದೆ.

ನೀರಾವರಿ ನಿಗಮದ ಅಧಿಕಾರಿಗಳ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಜಲಾಶಯದಲ್ಲಿ ಸುಮಾರು ಒಂದು ಟಿಎಂಸಿ ನೀರಿನ ಕೊರತೆ ಇದೆ. ಆದರೆ ಜೂನ್‌ ಅಂತ್ಯದವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವದಿಲ್ಲ. ಈಗ ಇರುವ ನೀರಿನಿಂದ ನಿಭಾಯಿಸಬಹುದು. ನೀರಾವರಿಗೆ ನೀರು ಪೂರೈಕೆ ನಿಲ್ಲಿಸಿರುವದರಿಂದ ಅಂತಹ ಗಂಭೀರತೆ ಇದುವರೆಗೆ ನಿರ್ಮಾಣ ಆಗಿಲ್ಲ.

ನಾಲ್ಕು ದಶಕಗಳ ಹಿಂದೆ ನಿರ್ಮಾಣವಾಗಿರುವ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.73 ಟಿಎಂಸಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದಾಗಿನಿಂದ ಇದುವರೆಗೆ ನಾಲ್ಕು ಬಾರಿ ಮಾತ್ರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಕೇವಲ ಮಲಪ್ರಭಾ ನದಿಯನ್ನು ಮಾತ್ರ ಅವಲಂಬಿಸಿರುವದರಿಂದ ನದಿಯಲ್ಲಿ ಹರಿಯುವ ನೀರು ಹಾಗೂ ಅದರ ವ್ಯಾಪ್ತಿಯಲ್ಲಿ ಆಗುವ ಮಳೆಯ ಪ್ರಮಾಣದ ಮೇಲೆ ನೀರಿನ ಲಭ್ಯತೆಯ ಬಗ್ಗೆ ಅಂದಾಜಿಸಬೇಕಾಗಿದೆ.

ಸದ್ಯ ಜಲಾಶಯದಲ್ಲಿ 1ಟಿಎಂಸಿ ನೀರು ಇರುವದರಿಂದ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ. ಜಲಾಶಯದಲ್ಲಿ ಮೇ 26 ಅಂಕಿ ಅಂಶಗಳ ಪ್ರಕಾರ 1.408(ಬಳಕೆಗೆ) ಟಿಎಂಸಿ ನೀರಿನ ಸಂಗ್ರಹವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಕಡಿಮೆಯೇ. 2018 ಮೇ 26ರಂದು ಜಲಾಶಯದಲ್ಲಿ 1.903 ಟಿಎಂಸಿ ನೀರು ಸಂಗ್ರಹವಿತ್ತು. ಮುಂದಿನ ತಿಂಗಳು ಮಳೆ ಆರಂಭವಾಗುವದರಿಂದ ಜಲಾಶಯಕ್ಕೆ ಹೊಸ ನೀರು ಬರುತ್ತದೆ ಎನ್ನುತ್ತಾರೆ ನೀರಾವರಿ ನಿಗಮದ ಅಧಿಕಾರಿಗಳು.

ಮಲಪ್ರಭಾ ಜಲಾಶಯದ ಪಕ್ಕದಲ್ಲೇ ಇರುವ ನೂರಾರು ಗ್ರಾಮಗಳಿಗೆ ನದಿಯ ಮೂಲಕವೇ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಬೇಸಿಗೆ ಸಮಯದಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುವದರಿಂದ ಕೆಳಗಿನ ಹಳ್ಳಿಗಳಿಗೆ ನೀರು ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಜನ ಮತ್ತು ಜಾನುವಾರುಗಳು ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗುತ್ತದೆ. ಜೂನ್‌ದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೆ ಜಲಾಶಯದ ಒಡಲು ಖಾಲಿಯಾಗಿದೆ.

•ಕೇಶವ ಆದಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.