ಖಾಸಗಿ ಕಂಪನಿಗೆ ನೀರಿನ ಘಟಕ ನಿರ್ವಹಣೆ ಹೊಣೆ


Team Udayavani, Mar 16, 2020, 3:45 PM IST

ಖಾಸಗಿ ಕಂಪನಿಗೆ ನೀರಿನ ಘಟಕ ನಿರ್ವಹಣೆ ಹೊಣೆ

ಸಾಂದರ್ಭಿಕ ಚಿತ್ರ

ರಾಮದುರ್ಗ: ಮೂಲ ಸೌಕರ್ಯ ಒದಗಿಸಿ ಗ್ರಾಮೀಣ ಜನತೆಗೆ ಆರೋಗ್ಯಯುತ ಬದುಕನ್ನು ಕಲ್ಪಿಸುವುದು ಸರಕಾರದ ಕೆಲಸ. ಆ ನಿಟ್ಟಿನಲ್ಲಿ ಸರಕಾರ ಕಡಿಮೆ ದರದಲ್ಲಿ ಗ್ರಾಮೀಣ ಮಟ್ಟದಲ್ಲಿ ಶುದ್ಧ ಕುಡಿಯುವ ನೀರು ದೊರಕಲಿ ಎಂಬ ಉದ್ದೇಶದಿಂದ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ ಸ್ಥಳೀಯ ಆಡಳಿತ ಯಂತ್ರದ ನಿಷ್ಕಾಳಜಿತನದಿಂದ ಹಾಗೂ ನಿರ್ವಹಣೆ ಕೊರತೆಯಿಂದಾಗಿ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.

ತಾಲೂಕಿನ 37 ಗ್ರಾಪಂಗಳಲ್ಲಿ 131 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಅವುಗಳಲ್ಲಿ 28 ಘಟಕಗಳು ಪ್ರಾರಂಭಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಪ್ರಾರಂಭಗೊಂಡಿರುವ 103 ಘಟಕಗಳು ನಿರ್ವಹಣೆ ತೊಂದರೆಯಿಂದಾಗಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಕೊಳವೆ ಬಾವಿಗಳ ನೀರಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ಸ್ಥಳೀಯರು ಆರೋಪ.

ಪ್ಲೋರೈಡ್‌ ನೀರಿನ ಬಳಕೆಯಿಂದಾಗಿ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿರುವುದನ್ನು ಅರಿತ ಸರಕಾರ ಜನತೆಯ ಆರೋಗ್ಯ ರಕ್ಷಿಸುವ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಸಾವಿರಾರು ಕೋಟಿ ಹಣ ವಿನಿಯೋಗಿಸುತ್ತಿದೆ. ಆದರೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಸರಕಾರಿ ಯೋಜನೆಗಳು ಸಫಲತೆ ಕಾಣುವಲ್ಲಿ ವಿಫಲವಾಗಿವೆ ಎಂಬುದಕ್ಕೆ ಶುದ್ಧ ಕುಡಿಯುವ ನೀರಿನ ಘಟಕಗಳೇ ಸಾಕ್ಷಿ. ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ದೃಷ್ಟಿಯಿಂದ ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದ್ದರೂ ಅವರು ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದಾಗಿ ಇನ್ನೂ ಅನೇಕ ಹಳ್ಳಿಗಳ ಜನರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸಬೇಕಾಗಿದೆ. ಅಧಿಕಾರಿಗಳ ಲೆಕ್ಕದಲ್ಲಿ ಬಹುತೇಕ ಘಟಕಗಳು ಪ್ರಾರಂಭವಾಗಿವೆ ಎಂದು ಹೇಳಿದರೂ ವಾಸ್ತವ ಬೇರೆಯಾಗಿದೆ.

ವರ್ಷವಾದರೂ ಪ್ರಾರಂಭಗೊಳ್ಳದ ಘಟಕಗಳು: ಶುದ್ಧ ಕುಡಿಯುವ ನೀರಿರ ಘಟಕಗಳನ್ನು ನಿರ್ಮಿಸಿ ವರ್ಷವಾದರೂ ಇನ್ನೂ ಅಂದಾಜು 28 ಘಟಕಗಳು ಪ್ರಾರಂಭಗೊಂಡಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ಕೆಲ ತಾಂತ್ರಿಕ ತೊಂದರೆಗಳಿಂದ ವಿಳಂಬವಾಗಿದೆ. ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂಬ ಭರವಸೆ ನೀಡುತ್ತಿದ್ದಾರೆ.

ನಿರ್ವಹಣೆ ಜವಾಬ್ದಾರಿ: ಈ ಹಿಂದ ಬೇರೆ-ಬೇರೆ ಕಂಪನಿಗಳಿಗೆ ನಿರ್ವಹಣೆ ಜವಾಬ್ದಾರಿ ನೀಡಲಾಗಿತ್ತು. ಅವು ಸರಿಯಾಗಿ ನಿರ್ವಹಣೆ ಮಾಡದ ಕಾರಣದಿಂದಾಗಿ ಅವುಗಳನ್ನು ತೆಗೆದು ಹಾಕಿ 131 ಘಟಕಗಳಲ್ಲಿ 88 ಘಟಕಗಳನ್ನು ಗುಡ್‌ ವ್ಹಿಲ್‌ ಕಂಪನಿಗೆ ಎರಡು ದಿನಗಳ ಹಿಂದೆ ಟೆಂಡರ್‌ ನೀಡಲಾಗಿದೆ. ಇನ್ನೂಳಿದ 43 ಘಟಕಗಳನ್ನು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಿರ್ವಹಿಸಲಾಗುತ್ತಿದೆ.

ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಪಿಡಿಒಗಳಿಗೆ ಸೂಚಿಸಲಾಗಿದೆ. ಈ ಹಿಂದೆ ಗುತ್ತಿಗೆ ಪಡೆದ ಕೆಲ ಕಂಪನಿಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣದಿಂದಾಗಿ ಇನ್ನೂ ಕೆಲ ಘಟಕಗಳು ಪ್ರಾರಂಭವಾಗಿಲ್ಲ. ಈಗ ಅದನ್ನು ಬೇರೆ ಕಂಪನಿಗಳಿಗೆ ಟೆಂಡರ್‌ ನೀಡಲಾಗಿದ್ದು,ತ್ವರಿತಗತಿಯಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ನೀರು ದೊರೆಯುವಂತೆ ಮಾಡಲಾಗುವುದು. -ಮುರಳಿಧರ ದೇಶಪಾಂಡೆ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಪಂ ರಾಮದುರ್ಗ

 

-ಈರನಗೌಡ ಪಾಟೀಲ

ಟಾಪ್ ನ್ಯೂಸ್

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು

ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಭಿವೃದ್ಧಿ ಕಾರ್ಯಕ್ಕೆ ಜನರ ಸಹಕಾರ ಅಗತ್ಯ; ಶಾಸಕ ಶ್ರೀಮಂತ ಪಾಟೀಲ

ಅಭಿವೃದ್ಧಿ ಕಾರ್ಯಕ್ಕೆ ಜನರ ಸಹಕಾರ ಅಗತ್ಯ; ಶಾಸಕ ಶ್ರೀಮಂತ ಪಾಟೀಲ

ಅನ್ನದಾತರ ಕೃಷಿಗೆ ಕೇಂದ್ರ ಸಿಂಚಾಯಿ

ಅನ್ನದಾತರ ಕೃಷಿಗೆ ಕೇಂದ್ರ ಸಿಂಚಾಯಿ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

ನಗರ ಯೋಜನ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್ ಇನ್ನೂ ಇಲ್ಲ!

ನಗರ ಯೋಜನ ಪ್ರಾಧಿಕಾರದ ಮಾಸ್ಟರ್‌ ಪ್ಲ್ಯಾನ್ ಇನ್ನೂ ಇಲ್ಲ!

ಕೈಮಗ್ಗ ಬಟ್ಟೆಗಳಿಗೆ ಮನಸೋತ ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ ಕುಮಾರ ಮೌರ್ಯ

ಕೈಮಗ್ಗ ಬಟ್ಟೆಗಳಿಗೆ ಮನಸೋತ ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ ಕುಮಾರ ಮೌರ್ಯ

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.