ನದಿ ಪಾತ್ರದಲ್ಲೇ ಬಾವಿ!

ನೀರಿಗಾಗಿ ಕಂಗೆಟ್ಟ ಜನರ ಹೊಸ ಉಪಾಯ • 40ಕ್ಕೂ ಹೆಚ್ಚು ಹಳ್ಳಿಗಳ ಜನರಿಗೆ ಇದೇ ಆಸರೆ

Team Udayavani, May 11, 2019, 12:10 PM IST

belegavi-tdy-5..

ಚಿಕ್ಕೋಡಿ: ಒಣಗಿ ಹೋದ ಕೃಷ್ಣಾ ನದಿ ಪಾತ್ರದಲ್ಲೇ ನೀರಿಗಾಗಿ ನಿರ್ಮಾಣವಾದ ಬಾವಿಗಳು.

ಚಿಕ್ಕೋಡಿ: ಮಳೆಗಾಲದಲ್ಲಿ ಮೈದುಂಬಿ ಹರಿದು ಲಕ್ಷಾಂತರ ಜನರ ದಾಹ ತೀರಿಸುವ ಕೃಷ್ಣಾ ನದಿ ಬಿರು ಬೇಸಿಗೆಯಲ್ಲಿ ಬತ್ತಿ ಬೆಂಗಾಡಾದಾಗ ಜನ ಅದರಲ್ಲಿಯೇ ಬಾವಿ ತೋಡಿ ನೀರು ಪಡೆಯುವ ವಿದ್ಯಮಾನ ಈಚೆಗೆ ನಡೆಯುತ್ತಿದೆ.

ನದಿ ಬತ್ತಿ ಗುಟುಕು ನೀರಿಗೆ ಸಂಚಕಾರ ಸೃಷ್ಟಿಯಾಗಿ ನದಿ ಪಾತ್ರದ ಜನ ಜೆಸಿಬಿ ಯಂತ್ರ ಬಳಸಿಕೊಂಡು ಹೆಜ್ಜೆ ಹೆಜ್ಜೆಗೂ ಆಳುದ್ದ ಬಾವಿ ತೋಡಿಕೊಂಡು ನೀರು ಪಡೆದುಕೊಳ್ಳುತ್ತಿದ್ದಾರೆ.

ಮಡ್ಡಿ ಪ್ರದೇಶಗಳಲ್ಲಿ ರೈತರು ಬಾವಿ ತೋಡಿಕೊಂಡು ಅದರ ನೀರಿನಲ್ಲಿಯೇ ಜೀವನ ಸಾಗಿಸುತ್ತಿದ್ದರೂ. ಬಾವಿಯಲ್ಲಿ ನೀರು ಖಾಲಿಯಾದಾಗ ನದಿ ನೀರನ್ನೇ ಬಾವಿಗೆ ಹರಿಸಿಕೊಳ್ಳುತ್ತಿದ್ದರು. ಆದರೆ ಈ ವರ್ಷ ಭೀಕರ ಬರಗಾಲದಲ್ಲಿ ವರ್ಷ ಪೂರ್ತಿ ತುಂಬಿ ಹರಿಯುವ ಕೃಷ್ಣಾ ನದಿಯೇ ಬತ್ತಿ ಹೋಗಿದೆ. ಹೀಗಿದ್ದಾಗ ಬಾವಿ, ಕೊಳವೆ ಬಾವಿ ಯಾವ ಲೆಕ್ಕ. ಆದರೂ ಬತ್ತಿದ ನದಿಯಲ್ಲಿ ಬಾವಿ ತೋಡುವ ಮೂಲಕ ನದಿ ಪಾತ್ರದ ಜನ ನೀರು ಪಡೆದುಕೊಳ್ಳುತ್ತಿದ್ದಾರೆ.

ನದಿಗೆ ಬಾರದ ನೀರು:

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನಾಲ್ಕು ಟಿಎಂಸಿ ಅಡಿ ನೀರು ಹರಿಸಬೇಕೆಂದು ಉತ್ತರ ಕರ್ನಾಟಕದ ಬಿಜೆಪಿ ನಾಯಕರ ನಿಯೋಗ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಅಲ್ಲದೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿ ಕೊಯ್ನಾ ಜಲಾಶಯದಿಂದ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೂ ಕೂಡಾ ಮಹಾರಾಷ್ಟ್ರ ಸರ್ಕಾರ ಮಾತ್ರ ಕರ್ನಾಟಕ್ಕೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ಗಡಿ ಭಾಗದ ರೈತಾಪಿ ವರ್ಗದ ಜನರಲ್ಲಿ ಹತಾಶೆ ಹೆಚ್ಚಿಸಿದೆ.

ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಕೃಷ್ಣಾ ನದಿ ಪಾತ್ರದ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕಿನ ಸುಮಾರು 40 ಕ್ಕೂ ಹೆಚ್ಚಿನ ಹಳ್ಳಿಯ ಜನರು ನದಿಯಲ್ಲಿ ತಗ್ಗುಗಳನ್ನು ತೊಡಿಕೊಂಡು ನೀರು ಪಡೆಯುತ್ತಿದ್ದಾರೆ. ನದಿಗೆ ನೀರು ಹರಿಸಿ ಜನರ ಸಂಕಷ್ಟ ದೂರ ಮಾಡುವ ಸರ್ಕಾರ ಮೌನವಾಗಿದೆ.

ಗಡಿ ಭಾಗವಾಗಿರುವ ಚಿಕ್ಕೋಡಿ ಉಪವಿಭಾಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದರೂ ಜಿಲ್ಲಾ ಆಡಳಿತ ಮಾತ್ರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುತ್ತಿಲ್ಲ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂಬುದು ನದಿ ತೀರದ ಗ್ರಾಮಸ್ಥರ ಆಕ್ರೋಶವಾಗಿದೆ.

.ಮಹಾದೇವ ಪೂಜೇರಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.