ಪಾರದರ್ಶಕವಾಗಿ ಕೆಲಸ ಮಾಡಿ

Team Udayavani, Oct 31, 2020, 12:49 PM IST

bg-tdy-1

ಬೆಳಗಾವಿ: ಸರ್ಕಾರದ ಕೆಲಸ ಎಂದರೆ ದೇವರ ಕೆಲಸ. ನಾವೆಲ್ಲರೂ ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ಕರ್ತವ್ಯನಿರ್ವಹಿಸಿದಲ್ಲಿ ಮಾತ್ರ ಸಮಾಜದಲ್ಲಿಕಾಡುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಲಿದೆ ಎಂದು ಬೆಳಗಾವಿ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೋಡಿ ಹೇಳಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ನಮಗೆ ಜನ ಸೇವೆ ಮಾಡಲು ಜವಾಬ್ದಾರಿ ನೀಡಿದೆ. ಹೀಗಾಗಿ ಸರ್ಕಾ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ಮಾಡಿದರೆ ಮಾತ್ರ ಸರ್ಕಾರದಯೋಜನೆಗಳು ಸಮಾಜದ ಕಟ್ಟಕಡೆಯವ್ಯಕ್ತಿಗೂ ತಲುಪುತ್ತವೆ ಎಂದರು.

ಪ್ರತಿಯೊಬ್ಬ ಸಾರ್ವಜನಿಕ ನೌಕರನು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ಸೇವೆ ಸಲ್ಲಿಸಬೇಕು. ಸರ್ಕಾರ ನೀಡಿರುವ ಕೆಲಸದ ಜತೆಗೆ ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಬೇಕು. ದುರಾಸೆಯಿಂದ ಹಣ ಹಾಗೂ ಆಸ್ತಿ ಗಳಿಕೆ ಮಾಡಿದರೆ ಒಂದಿಲ್ಲ ಒಂದು ದಿನ ಅದಕ್ಕೆ ತಕ್ಕ ಬೆಲೆ ಕಟ್ಟಲೇಬೇಕಾಗುತ್ತದೆ. ಅಕ್ರಮ ಸಂಭಾವನೆಗೆ ಆಸೆಪಟ್ಟರೆ ಆಗಬಹುದಾದ ತೊಂದರೆಗಳ ಬಗ್ಗೆ ತಿಳಿ ಹೇಳಿದ ಅವರು, ನಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು ಎಂದರು.

ಮಾಹಿತಿ ಹಕ್ಕು ಆಯೋಗದ ಆಯುಕ್ತೆ ಬಿ.ವಿ. ಗೀತಾ ಮಾತನಾಡಿ, ಕೇಂದ್ರ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಹಾಗೂ ಲೋಕಪಾಲ್‌ ಮಸೂದೆ ಬಗ್ಗೆ ಸಾರ್ವಜನಿಕ ನೌಕರರು ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಬೇಕು. ಅಲ್ಲದೇ ಈ ಬಗ್ಗೆ ಎಲ್ಲರಿಗೂತಿಳಿವಳಿಕೆ ನೀಡುವಂತೆ ಕರೆ ನೀಡಿದರು.ನಾಲ್ಕನೇ ಅಧಿಕ ಜಿಲ್ಲಾ ಹಾಗೂ ವಿಶೇಷ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರವೀಣ ಅಗಸಗಿ ಮಾತನಾಡಿ, ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನಕ್ಕೂ ಮತ್ತು ಜಾಗೃತಿ ಅರಿವು ಸಪ್ತಾಹಕ್ಕೂ ಇರುವ ಸಂಬಂಧವನ್ನು ವಿವರಿಸಿದರು.

ಸುವರ್ಣಸೌಧದಲ್ಲಿ ಇರುವ ಎಲ್ಲ 22 ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ಎಲ್ಲ ನೌಕರರಿಗೆಡಿಎಸ್‌ಪಿ ಜೆ. ರಘು ಅವರು ಪ್ರತಿಜ್ಞಾ ವಿಧಿ  ಬೋಧಿಸಿದರು. ಎಂ.ಎಸ್‌. ತೀರ್ಥ ನಿರೂಪಿಸಿದರು.

ಉದಯ ಪ್ರಾರ್ಥಿಸಿದರು. ಡಿಎಸ್‌ಪಿ ಬಿ.ಎಸ್‌. ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇನ್ಸಪೆಕ್ಟರ್‌ ರಫೀಕ್‌ ತಹಶೀಲ್ದಾರ ವಂದಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.