ವಿಮ್ಸ್‌ ಆಸ್ಪತ್ರೆಗೆ ನಿರ್ದೇಶಕರ ಭೇಟಿ

ರಾತ್ರಿ ಪಾಳೆ ಕರ್ತವ್ಯಕ್ಕೆ ಹಾಜರಾಗದ ವೈದ್ಯರು-ಪರಿಶೀಲನೆ

Team Udayavani, Jul 21, 2019, 1:44 PM IST

ಬಳ್ಳಾರಿ: ವಿಮ್ಸ್‌ ಆಸ್ಪತ್ರೆಗೆ ನಿರ್ದೇಶಕ ಲಕ್ಷ್ಮಿನಾರಾಯಣರೆಡ್ಡಿ ಶುಕ್ರವಾರ ರಾತ್ರಿ ದಿಢೀರ್‌ ಭೇಟಿ ನೀಡಿ ರಾತ್ರಿ ಪಾಳೆಯದ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿರುವುದರ ಬಗ್ಗೆ ಪರಿಶೀಲನೆ ನಡೆಸಿದರು.

ಬಳ್ಳಾರಿ: ನಗರದ ವಿಮ್ಸ್‌ ಆಸ್ಪತ್ರೆಗೆ ಶುಕ್ರವಾರ ಮಧ್ಯರಾತ್ರಿ ದಿಢೀರ್‌ ಭೇಟಿ ನೀಡಿದ ನಿರ್ದೇಶಕ ಲಕ್ಷ್ಮೀನಾರಾಯಣರೆಡ್ಡಿಯವರು ರಾತ್ರಿ ಪಾಳೆಯದಲ್ಲಿ ಕರ್ತವ್ಯಕ್ಕೆ ಹಾಜರಾಗದ ವೈದ್ಯರು, ಸಿಬ್ಬಂದಿಗಳ ಪರಿಶೀಲನೆ ನಡೆಸಿದ್ದಾರೆ.

ವಿಮ್ಸ್‌ ಆಸ್ಪತ್ರೆಯಲ್ಲಿ ರಾತ್ರಿ ಪಾಳೆಯದ ವೈದ್ಯರು ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಮ್ಸ್‌ ನಿರ್ದೇಶಕ ಲಕ್ಷ್ಮಿನಾರಾಯಣರೆಡ್ಡಿ ಈ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಮ್ಸ್‌ ಆಸ್ಪತ್ರೆಯ ಐಸಿಯು ವಾರ್ಡ್‌, ಮಹಿಳಾ ವಾರ್ಡ್‌, ರಕ್ತಭಂಡಾರ, ಮಕ್ಕಳ ವಿಭಾಗ, ಹೆರಿಗೆ ವಿಭಾಗ, ಸರ್ಜರಿ, ಔಷಧ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ವಿಮ್ಸ್‌ ನಿರ್ದೇಶಕ ಡಾ| ಲಕ್ಷ್ಮಿನಾರಾಯಣ ರೆಡ್ಡಿ ಭೇಟಿ ನೀಡಿದರು. ಬಳಿಕ ರೋಗಿಗಳಿಂದ ವೈದ್ಯರ, ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದರು.

ರಾತ್ರಿ ಪಾಳಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ವೈದ್ಯರಲ್ಲಿ ಬಹುತೇಕರು ಗೈರಾಗಿರುವುದನ್ನು ಪರಿಶೀಲಿಸಿದರು. ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವ ಬಗ್ಗೆ, ಉಚಿತ ಔಷಧ ವಿತರಣೆ ಕುರಿತು ಮಾಹಿತಿ ಪಡೆದರು. ಈ ವೇಳೆ ಹಲವರು ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಇರುವುದು ಕಷ್ಟವಾಗಿದೆ. ಅಲ್ಲದೆ, ಔಷಧಗಳನ್ನು ಹೊರಗಡೆ ಖರೀದಿ ಮಾಡುವಂತೆ ಚೀಟಿ ಬರೆದುಕೊಡುತ್ತಿರುವುದರಿಂದ ತೀವ್ರ ತೊಂದರೆ ಉಂಟಾಗಿದ್ದು, ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ರೋಗಿಗಳ ಸಂಬಂಧಿಕರು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಿರ್ದೇಶಕ ಡಾ| ಲಕ್ಷ್ಮಿನಾರಾಯಣ ರೆಡ್ಡಿ, ರಾತ್ರಿ ಪಾಳಯದಲ್ಲಿನ ಕರ್ತವ್ಯಕ್ಕೆ ಗೈರಾದ ವೈದ್ಯರಿಗೆ ನೋಟಿಸ್‌ ನೀಡಲಾಗುವುದು. ಔಷಧಗಳಿಗಾಗಿ ಹೊರಗಡೆ ಚೀಟಿ ಬರೆದುಕೊಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ